ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shivamogga Trial Blast Case: ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ; ಅಪರಾಧಿ ಅರಾಫತ್ ಅಲಿಗೆ 6 ವರ್ಷ ಜೈಲು ಶಿಕ್ಷೆ

ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅರಾಫತ್ ಅಲಿಯನ್ನು ಎನ್ಐಎ ಅಧಿಕಾರಿಗಳು ದೆಹಲಿಯಲ್ಲಿ 2023ರಲ್ಲಿ ಬಂಧಿಸಿದ್ದರು. ಈತ ವಿಚಾರಣೆ ವೇಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಇದೀಗ ಈತನಿಗೆ 6 ವರ್ಷ ಜೈಲು ಶಿಕ್ಷೆ, 47 ಸಾವಿರ ರೂ. ದಂಡ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ; ಅರಾಫತ್ ಅಲಿಗೆ 6 ವರ್ಷ ಜೈಲು

ಅಪರಾಧಿ ಅರಾಫತ್ ಅಲಿ. -

Prabhakara R
Prabhakara R Apr 21, 2026 11:02 PM

ಬೆಂಗಳೂರು: ಶಿವಮೊಗ್ಗದ ತುಂಗಾ ನದಿ ತೀರದಲ್ಲಿ 2022ರಲ್ಲಿ ನಡೆಸಿದ್ದ ಟ್ರಯಲ್ ಬಾಂಬ್ ಸ್ಫೋಟ ಪ್ರಕರಣದ (Shivamogga Trial Blast Case) ಅಪರಾಧಿ ಅರಾಫತ್ ಅಲಿಗೆ 6 ವರ್ಷ ಜೈಲು ಶಿಕ್ಷೆ, 47 ಸಾವಿರ ರೂ. ದಂಡ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿ ಮೂಲದ ಅರಾಫತ್ ಅಲಿಯನ್ನು ಎನ್ಐಎ ಅಧಿಕಾರಿಗಳು ದೆಹಲಿಯಲ್ಲಿ 2023ರಲ್ಲಿ ಬಂಧಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ವಿಚಾರಣೆ ವೇಳೆ ಅರಾಫತ್ ಅಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಇದೀಗ ಈತನಿಗೆ ಶಿಕ್ಷೆ ಪ್ರಕಟವಾಗಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾ.ಕೆಂಪರಾಜು, ಅಪರಾಧಿಗೆ 6 ವರ್ಷ ಸಜೆ ಹಾಗೂ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ 2025ರಲ್ಲಿ ಇಬ್ಬರು ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಒಟ್ಟು ಮೂವರಿಗೆ ಸಜೆಯಾಗಿದ್ದು, ಉಳಿದ 9 ಮಂದಿ ಶಂಕಿತರ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪರಾಧಿ ಅರಾಫತ್ ನನ್ನ 2019ರಲ್ಲಿ ಬೆಂಗಳೂರಿನಲ್ಲಿ ಇದೇ ಪ್ರಕರಣದ ಶಂಕಿತ ಮುಸಾವೀರ್ ಹುಸೇನ್ ಶಾಹೀಬ್ (ಎ11) ಹಾಗೂ ಅಬ್ದುಲ್ ಮತೀನ್ ತಾಹ (ಎ12) ಅವರನ್ನು ಭೇಟಿ ಮಾಡಿ ಉಗ್ರ ಚಟುವಟಿಕೆಗಳಿಗೆ ಪ್ರೇರಣೆ ನೀಡಿದ್ದ. ನಿಷೇಧಿತ ಐಸಿಸ್‌ ಉಗ್ರ ಸಂಘಟನೆಯ ಸದಸ್ಯನಾಗಿ ನೇಮಿಸಿಕೊಂಡಿದ್ದರು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ನಾಶಪಡಿಸಿ ಅಶಾಂತಿ ಸೃಷ್ಟಿ ಹಾಗೂ ಹಿಂದುತ್ವವನ್ನು ಕುಗ್ಗಿಸುವ ಉದ್ದೇಶ ಹಿನ್ನೆಲೆಯಲ್ಲಿ ಉಗ್ರ ಕೃತ್ಯಗಳಿಗೆ ಒಳಸಂಚು ರೂಪಿಸಿದ್ದ.

ಅರಾಫತ್​ ಅಲಿ, ಯುವಕರನ್ನು ಐಸಿಸ್​ ಸಂಘಟನೆಗೆ ನೇಮಕಾತಿ ಜವಾಬ್ದಾರಿ ಹೊತ್ತುಕೊಂಡಿದ್ದ. ಇದೇ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಶಾರೀಕ್ ಹಾಗೂ ಮಾಜ್ ಮುನೀರ್ ನನ್ನ ಉಗ್ರ ಸಂಘಟನೆಗೆ ಸೇರಿಸಿ ಸಕ್ರಿಯನಾಗಿಸಿದ್ದ. ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್, ಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ, ಕೇಂದ್ರದ ಸಿಎಎ ಹಾಗೂ ಎನ್ಆರ್ ಸಿ ವಿರೋಧಿಸಿ ಕದ್ರಿ ಗೋಡೆಗಳ ಮೇಲೆ ಆಕ್ಷೇಪಾರ್ಹ ಬರಹ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ನಿರಂತರ ಸಂಪರ್ಕದಲ್ಲಿದ್ದು, ಹಣಕಾಸಿನ ನೆರವು ಒದಗಿಸಿದ್ದ. ಸಂಚಿನ ಯೋಜನೆ ಮತ್ತು ಕಾರ್ಯಗತಗೊಳಿಸುವಲ್ಲಿ ಸಕ್ರಿಯವಾಗಿದ್ದ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ಧಾರೆ.

Bengaluru grenade case: ಬೆಂಗಳೂರಿನಲ್ಲಿ ಸಜೀವ ಗ್ರೆನೇಡ್ ಪತ್ತೆ ಪ್ರಕರಣ; ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ

ಎನ್ಐಎ ಅಧಿಕಾರಿಗಳು ಉಗ್ರರ ಹಿಂದೂ ಮಾಡ್ಯೂಲ್ ಭೇದಿಸಿ ಮುಸಾವೀರ್ ಹಾಗೂ ಅಬ್ದುಲ್ ಮತೀನ್‌ನೊಂದಿಗೆ ನಂಟು ತಿಳಿಯುತ್ತಿದ್ದಂತೆ ಬಂಧನ ಭೀತಿಯಿಂದ ಅರಾಫತ್ 2020ರಲ್ಲಿ ವಿದೇಶಕ್ಕೆ ಪಲಾಯನ ಮಾಡಿದ್ದ. ವಿದೇಶದಲ್ಲಿದ್ದುಕೊಂಡೇ ಕರ್ನಲ್ ಹಾಗೂ ಹ್ಯಾಂಡ್ಲರ್​ಗಳ ಮೂಲಕ ಶಂಕಿತ ಉಗ್ರರಿಗೆ ಫಂಡಿಂಗ್ ಮಾಡುತ್ತಿದ್ದ. ಐಎಸ್ ಸಂಘಟನೆ ಪ್ರಚಾರದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಭಯೋತ್ಪಾದಕ ಕೃತ್ಯಗಳಿಗೆ ವಿದೇಶದಲ್ಲೇ ಸಂಚು ರೂಪಿಸುತ್ತಿದ್ದ. ಕೀನ್ಯಾದ ನೈರೊಬಿದಿಂದ ದೆಹಲಿಗೆ ಬಂದಾಗ 2023ರಲ್ಲಿ ಬಂಧಿಸಲಾಗಿತ್ತು.