ಬೆಂಗಳೂರು: ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎ.ಎಸ್ ಪೊನ್ನಣ್ಣ (AS Ponnanna) ಅವರು ನೇಮಕವಾಗಿದ್ದಾರೆ. ಈ ಹಿಂದೆ ಪೊನ್ನಣ್ಣ ಅವರ ಹೆಸರನ್ನು ವಿಧಾನಸಭೆ ಉಪಾಧ್ಯಕ್ಷರ ಹುದ್ದೆಗೆ ಸೂಚಿಸಲಾಗಿತ್ತು. ಆದರೆ ಈಗ, ದಿಢೀರ್ ಹೆಸರು ಬದಲಾವಣೆ ಮಾಡಲಾಗಿದೆ.
ಎ.ಎಸ್ ಪೊನ್ನಣ್ಣ ಅವರು ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರಿಗೆ ಕಾನೂನು ಸಲಹೆಗಾರರಾಗಿದ್ದರು. ಅ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಇನ್ನು ಪೊನ್ನಣ್ಣ ಅವರು ಡೆಪ್ಯೂಟಿ ಸ್ಪೀಕರ್ ಸ್ಥಾನದ ಆಕಾಂಕ್ಷಿ ಆಗಿರಲಿಲ್ಲ, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು ಎಂದು ಹೇಳಲಾಗಿದೆ. ಹೀಗಾಗಿ ಅವರಿಗೆ ಇದೀಗ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಈ ಹುದ್ದೆಯಲ್ಲಿ ಸಂಪುಟ ಸ್ಥಾನಮಾನ ಸಿಗಲಿದೆ.
ಆರ್.ವಿ. ದೇಶಪಾಂಡೆಗೂ ಸಂಪುಟ ದರ್ಜೆ ಸ್ಥಾನಮಾನ
ಇನ್ನು ಹಿರಿಯ ಶಾಸಕ ಆರ್.ವಿ ದೇಶಪಾಂಡೆ (RV Deshpande) ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹುದ್ದೆಗೆ ಸಂಪುಟ ದರ್ಜೆಯ ಸಚಿವರ ಸ್ಥಾನ ಮಾನ ನೀಡಲಾಗಿದೆ.
ವಿಧಾನಸಭೆ ಉಪಾಧ್ಯಕ್ಷರಾಗಿ ಮಂಕಾಳ್ ವೈದ್ಯ
ಸಚಿವ ಸ್ಥಾನದಿಂದ ವಂಚಿತರಾಗಿ ಅಸಮಾಧಾನಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರಿಗೆ ವಿಧಾನಸಭಾ ಉಪಾಧ್ಯಕ್ಷ ಸ್ಥಾನವನ್ನು ನೀಡಲು ಕಾಂಗ್ರೆಸ್ ವರಿಷ್ಠರು ತೀರ್ಮಾನಿಸಿದ್ದಾರೆ.