ಬೆಂಗಳೂರು: ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮುಂದುವರಿದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ಕೊರೆಯುವ ಚಳಿಯಲ್ಲೂ ಹೋರಾಟ (ASHA workers protest) ಮುಂದುವರಿಸಿದ್ದಾರೆ.

ಬೇಡಿಕೆಗಳ ಈಡೇರಿಕೆ ಕುರಿತು ರಾಜ್ಯ ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ಪತ್ರ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಜಾಗ ಸಾಲದಂತಾಗಿದೆ. ಇದರಿಂದಾಗಿ ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆ ಮತ್ತು ಮುಂಭಾಗದ ಶೇಷಾದ್ರಿ ರಸ್ತೆ ಮೇಲೆಯೇ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ.

ಇನ್ನು ಇಂದು ಧರಣಿ ವೇಳೆ ಚಿತ್ರದುರ್ಗದ ದೀಪಾ ಎಂಬುವವರು ಬುಧವಾರ ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಪೊಲೀಸ್ ಜೀಪ್ನಲ್ಲಿ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?
- 15 ಸಾವಿರ ಮಾಸಿಕ ಗೌರವಧನ ನಿಗದಿಯಾಗಬೇಕು
- ಸಮಸ್ತ ಆ್ಯಪ್ ಮೂಲಕ ಒತ್ತಾಯದ ಕೆಲಸ ಕೈಬಿಡಬೇಕು
- ಆಶಾ ನಿಧಿಯಲ್ಲಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು
- ಬಾಕಿ ಇರುವ ಇಡಿಗಂಟು ಕೂಡಲೇ ಬಿಡುಗಡೆ ಮಾಡಿ
- ಸೇವಾ ನಿವೃತ್ತಿ ಇಡಿಗಂಟು 5 ಲಕ್ಷಕ್ಕೆ ಹೆಚ್ಚಿಸಿ
- ಆಶಾ ಸುಗಮಕಾರರನ್ನು ಮರುನೇಮಕ ಮಾಡಿ
- NIOS ತರಬೇತಿ ಪೂರ್ಣಗೊಳಿಸಿದವರಿಗೆ 5000 ಪ್ರೋತ್ಸಾಹ ಧನ ನೀಡಿ
- ತೀವ್ರ ಅನಾರೋಗ್ಯವಿದ್ದರೆ 3 ತಿಂಗಳ ಗೌರವ ಬೇಕು.