ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

2 ಸಾವಿರ ರೂಪಾಯಿ ವೇತನ ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು; ಮತ್ತೆ ಹೋರಾಟಕ್ಕೆ ತೀರ್ಮಾನ

ASHA workers Protest: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ಆರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಂಧಾನ ಯಶಸ್ವಿಯಾಗಿದ್ದು, ಮಾಸಿಕ 2 ಸಾವಿರ ರೂಪಾಯಿ ವೇತನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಹಿಂಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿತ್ತು.

ಪ್ರತಿಭಟನೆ ಮುಂದುವರಿಸಲು ಆಶಾ ಕಾರ್ಯಕರ್ತೆಯರ ನಿರ್ಧಾರ

ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ -

Ramesh Ballamoole
Ramesh Ballamoole Nov 28, 2026 10:06 PM

ಬೆಂಗಳೂರು, ನ. 28: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ (ASHA workers Protest) ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ಆರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಂಧಾನ ಯಶಸ್ವಿಯಾಗಿದ್ದು, ಮಾಸಿಕ 2 ಸಾವಿರ ರೂಪಾಯಿ ವೇತನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಹಿಂಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಅವರು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. ಆ ಮೂಲಕ 15 ಸಾವಿರ ರೂಪಾಯಿ ವೇತನದ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

2 ಸಾವಿರ ರೂಪಾಯಿ ವೇತನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಡಿ.ಕೆ. ಶಿವಕುಮಾರ್ ಸ್ವತಃ ಆಶಾ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿ ಸದ್ಯಕ್ಕೆ 2,000 ರೂಪಾಯಿ ಹೆಚ್ಚಳ ಮಾಡುವುದಾಗಿ ಇನ್ನುಳಿದ ಬೇಡಿಕೆಗಳನ್ನು ಬಜೆಟ್‌ನಲ್ಲಿ ಘೋಷಿಸಿಸುವುದಾಗಿ ಭರವಸೆ ನೀಡಿ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳಿಗೆ ಮನವೊಲಿಸಿದ್ದರು. ಅದಕ್ಕೆ ಒಪ್ಪಿ ಡಿಕೆಶಿ ಅವರಿಗೆ ಸನ್ಮಾನವನ್ನೂ ಮಾಡಿದ್ದರು. ಆದರೆ ಇದೀಗ ಪ್ರತಿಭಟನೆ ಮುಂದುವರಿಸಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ಫ್ರೀಡಂ ಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಯಲಿದೆ.

ಹೋರಾಟ ಮುಂದುವರಿಸಲು ನಿರ್ಧರಿಸಿದ ಆಶಾ ಕಾರ್ಯಕರ್ತೆಯರು:



ಹೋರಾಟ ಮುಂದುವರಿಸಲು ನಿರ್ಧರಿಸಿದ್ದೇಕೆ?

ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ, ʼʼಸಿಎಂ ಸಭೆಯ ತೀರ್ಮಾನಕ್ಕೆ ಆಶಾ ಕಾರ್ಯಕರ್ತೆಯರು ಒಪ್ಪಿಲ್ಲ. ಆ ಕಾರಣಕ್ಕೆ ಸಂಘಟನೆಯ ಮುಖಂಡರು ಹಾಗೂ ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರಿಸಲು ನಿರ್ಧರಿಸಲಾಗಿದೆ. ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಮುಂದುವರಿಯುತ್ತಿದೆʼʼ ಎಂದು ಸ್ಪಷ್ಟಪಡಿಸಿದ್ದಾರೆ.

ʼʼಯಾರೋ ಕೊಟ್ಟ ಹೂಗುಚ್ಛವನ್ನು ನಾವು ಸಿಎಂಗೆ ಕೊಟ್ಟಿದ್ದೇವೆ. ಹೋರಾಟ ನಿಲ್ಲಿಸುತ್ತಿರುವ ಬಗ್ಗೆ ತಪ್ಪು ಸಂದೇಶ ರವಾನೆಯಾಗಿದೆ. ನಾವು ಗುಟ್ಟಾಗಿ ಮಾಡುವಂತಹದ್ದು ಏನೂ ಇಲ್ಲ. ಕೆಲ ಆಶಾ ಕಾರ್ಯಕರ್ತೆಯರಿಗೂ ತಪ್ಪು ಸಂದೇಶ ಹೋಗಿದೆʼʼ ಎಂದಿದ್ದಾರೆ.

12ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಈ ಮಧ್ಯೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದೆ. ಮಾಸಿಕ ಗೌರವ ಧನ 15 ಸಾವಿರಕ್ಕೆ ಏರಿಸಬೇಕು ಎನ್ನುವುದು ಅವರ ಮುಖ್ಯ ಬೇಡಿಕೆ. ಸದ್ಯ ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ 5 ಸಾವಿರ ರೂಪಾಯಿ ಮತ್ತು ಕೇಂದ್ರ ಸರ್ಕಾರದಿಂದ 3 ಸಾವಿರ ರೂಪಾಯಿ ಸೇರಿ ಒಟ್ಟು 8 ಸಾವಿರ ರೂಪಾಯಿ ಗೌರವ ಧನ ಸಿಗುತ್ತಿದೆ. ಆರೋಗ್ಯ ಇಲಾಖೆಯ ಹಲವು ಜವಾಬ್ದಾರಿ ನಿರ್ವಹಿಸುತ್ತಿರುವ ತಮಗೆ ಈ ಮೊತ್ತ ಸಾಕಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಆಶಾ ಕಾರ್ಯಕರ್ತೆಯರು 15 ಸಾವಿರ ರೂಪಾಯಿ ಮಾಸಿಕ ವೇತನಕ್ಕೆ ಆಗ್ರಹಿಸಿದ್ದರು.

ಇವರಿಗೆ 15 ಸಾವಿರ ರೂಪಾಯಿ ಕೊಡಬೇಕಾ?

ʼʼನರ್ಸ್‌ಗಳಿಗೆ 10 ಸಾವಿರ ರೂಪಾಯಿ ಸಂಬಳ, ಶಿಕ್ಷಕರಿಗೆ 12 ಸಾವಿರ ರೂಪಾಯಿ ಸಂಬಳ, ಆರೋಗ್ಯ ಸಹಾಯಕರಿಗೆ 4,500 ರೂಪಾಯಿ ಸಂಬಳ ನೀಡಲಾಗುತ್ತಿದೆ. ಇವರಿಗೆ 15 ಸಾವಿರ ರೂಪಾಯಿ ಕೊಡಬೇಕಾ?’ʼ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಇತ್ತೀಚೆಗೆ ಪ್ರಶ್ನಿಸಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.