ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fraud case: ಜಾತಕದಲ್ಲಿ ದೋಷ ಇದೆ ಎಂದು ಮಹಿಳಾ ಪೇದೆಗೆ 5 ಲಕ್ಷ ವಂಚನೆ; ಜ್ಯೋತಿಷಿ ಅರೆಸ್ಟ್‌

Fraud case: ಕೋರಮಂಗಲದಲ್ಲಿ ಮಹಿಳಾ ಪೊಲೀಸ್‌ ಪೇದೆಯಲ್ಲಿ ಲಾಡ್ಜ್‌ಗೆ ಕರೆಸಿ ಪೂಜೆ ಮಾಡಿಸಿ ಹಂತ ಹಂತವಾಗಿ 5 ಲಕ್ಷ ರೂ. ಪಡೆದು ಜ್ಯೋತಿಷಿ ವಂಚನೆ ಮಾಡಿದ್ದ. ನೊಂದ ಮಹಿಳಾ ಕಾನ್‌ಸ್ಟೇಬಲ್ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಜ್ಯೋತಿಷ್ಯ ನೆಪದಲ್ಲಿ ಆತ್ಮಗಳ ಕಥೆ ಕಟ್ಟಿ ವಶೀಕರಣ ಮಾಡಿರುವುದಾಗಿ ಆರೋಪಿಸಿದ್ದರು. ಹೀಗಾಗಿ ಜ್ಯೋತಿಷಿ ವಿರುದ್ಧ ಕೇಸ್‌ ದಾಖಲಾಗಿದೆ.

ಮಹಿಳಾ ಪೇದೆಗೆ 5 ಲಕ್ಷ ವಂಚನೆ; ಜ್ಯೋತಿಷಿ ಅರೆಸ್ಟ್‌

Profile Prabhakara R May 16, 2025 1:48 PM

ಬೆಂಗಳೂರು: ಜಾತಕದಲ್ಲಿ ದೋಷವಿದೆ, ಪೂಜೆ ಮಾಡಿ ಆರೋಗ್ಯ ಸರಿ ಮಾಡುತ್ತೇನೆ ಎಂದು ಹೇಳಿ ಮಹಿಳಾ ಪೊಲೀಸ್‌ ಪೇದೆಗೆ 5 ಲಕ್ಷ ವಂಚಿಸಿದ್ದ (Fraud case) ಜ್ಯೋತಿಷಿಯನ್ನು ನಗರದ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲದಲ್ಲಿ ಲಾಡ್ಜ್‌ಗೆ ಕರೆಸಿ ಪೂಜೆ ಮಾಡಿಸಿ ಹಂತ ಹಂತವಾಗಿ 5 ಲಕ್ಷ ರೂ. ಪಡೆದು ವಂಚನೆ ಮಾಡಿದ ಆರೋಪದಲ್ಲಿ ಜ್ಯೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಡುಗೋಡಿಯ ಪೊಲೀಸ್ ಕ್ವಾರ್ಟರ್ಸ್‌ನಲ್ಲಿದ್ದ ಮಹಿಳಾ ಕಾನ್‌ಸ್ಟೇಬಲ್‌ ಅನಾರೋಗ್ಯಕ್ಕೆ ಒಳಗಾದಾಗ ಸ್ನೇಹಿತರ ಮೂಲಕ ಕಲಬುರಗಿಯ ಜ್ಯೋತಿಷಿ ಹೇಮಂತ್ ಭಟ್ ಪರಿಚಯವಾಗಿತ್ತು. ಇದಕ್ಕೂ ಮುನ್ನ ಇಬ್ಬರು ಸ್ನೇಹಿತೆಯರು ಜ್ಯೋತಿಷಿ ಮಾತು ನಂಬಿ ಹೋದಾಗ, ಅವರಿಗೂ ಪೂಜೆ ಮಾಡಿದ್ದ. ನಿನ್ನ ಜಾತಕದಲ್ಲಿ ತುಂಬಾ ದೋಷವಿದೆ, ಪೂಜೆ ಮಾಡಿಸಲೇಬೇಕು. ಇದರಿಂದ ನಿನ್ನ ಆರೋಗ್ಯ ಸರಿ ಮಾಡುತ್ತೇನೆ. ಭಯಬೇಡ ಈ ವಿಚಾರದಲ್ಲಿ ನಾನು ಡಾಕ್ಟರ್. ಜತೆಗೆ ನಿನಗೆ ಮದುವೆಯೂ ಆಗುವಂತೆ ಮಾಡುತ್ತೇನೆ ಎಂದು ಹೇಳಿದ್ದ.

ಕೋರಮಂಗಲದಲ್ಲಿ ಲಾಡ್ಜ್‌ಗೆ ಕರೆಸಿ ಪೂಜೆ ಮಾಡಿಸಿ ಹಂತ ಹಂತವಾಗಿ 5 ಲಕ್ಷ ರೂ. ಪಡೆದು ವಂಚನೆ ಮಾಡಿದ್ದ. ಈ ಕುರಿತು ನೊಂದ ಮಹಿಳಾ ಕಾನ್‌ಸ್ಟೇಬಲ್ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಜ್ಯೋತಿಷ್ಯ ನೆಪದಲ್ಲಿ ಆತ್ಮಗಳ ಕಥೆ ಕಟ್ಟಿ ವಶೀಕರಣ ಮಾಡಿರುವುದಾಗಿ ಆರೋಪಿಸಿದ್ದರು.

ಪುನೀತ್‌ ಕೆರೆಹಳ್ಳಿಗೆ ಕೊಲೆ ಬೆದರಿಕೆ; ಮೈಸೂರಿನಲ್ಲಿ ಎಫ್‌ಐಆರ್ ದಾಖಲು

ಮೈಸೂರು: ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಗೆ (Puneeth Kerehalli) ಕೊಲೆ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿ ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ 'NEXT YOU WILL KILL' ಎಂದು ಬರೆದು ಜೀವ ಬೆದರಿಕೆ ಹಾಕಿದ್ದ ಆರೋಪಿಯು, ವಾಟ್ಸ್‌ ಆ್ಯಪ್‌ ಕಾಲ್ ಹಾಗೂ ವಿಡಿಯೋ ಕಾಲ್ ಮೂಲಕವೂ ನಿರಂತರವಾಗಿ ಬೆದರಿಕೆ ಒಡ್ಡುತ್ತಿದ್ದ ಎಂದು ಆರೋಪಿಸಲಾಗಿದೆ.

ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕ್ರಮಕ್ಕಾಗಿ ಕಳೆದೆರಡು ದಿನಗಳ ಹಿಂದೆ ದೂರು ದಾಖಲಿಸಲು ಬಸವನಗುಡಿ ಪೊಲೀಸ್ ಠಾಣೆಗೆ ತೆರಳಿದ್ದೆ. ಆದರೆ, ಠಾಣೆಯಲ್ಲಿ ತಕ್ಷಣ ದೂರು ದಾಖಲಿಸಿಕೊಳ್ಳದೇ, 'ಇನ್ಸ್ಪೆಕ್ಟರ್ ಬರುತ್ತಾರೆ, ಕಾಯಿರಿ' ಎಂದು ಎರಡು ಗಂಟೆಗೂ ಹೆಚ್ಚು ಕಾಯಿಸಿದ್ದಾರೆ ಎಂದು ಪೊಲೀಸರ ಕಾರ್ಯವೈಖರಿಯ ಬಗ್ಗೆ ಪುನೀತ್ ಕೆರೆಹಳ್ಳಿ ಅಸಮಾಧಾನ ವ್ಯಕ್ತಪಡಿಸಿದ್ದರು. 'ಹಿಂದೂಗಳಿಗೊಂದು ಕಾನೂನು, ಮುಸ್ಲಿಮರಿಗೊಂದು ಕಾನೂನು ಇದೆಯಾ? ಪೊಲೀಸರಿಗೆ ಯಾಕಿಷ್ಟು ಭಯ? ಯಾರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ? ಎಂದು ಪುನೀತ್ ಕೆರೆಹಳ್ಳಿ ಪ್ರಶ್ನಿಸಿದ್ದರು. ಇದೀಗ ನ್ಯಾಯಾಲಯದ ಅನುಮತಿಯೊಂದಿಗೆ ಅಕ್ರಮ್ ಖಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ | Baloch Liberation Army: ಪಾಕಿಸ್ತಾನದ 14 ಸೈನಿಕರ ಹತ್ಯೆ ಮಾಡಿದ ಬಲೂಚ್‌ ಲಿಬರೇಷನ್‌ ಆರ್ಮಿ; ವಿಡಿಯೊ ರಿಲೀಸ್‌