ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರಿನಲ್ಲಿ ನಾಳೆ 'ಅವಿಶ್ರಾಂತ ಧ್ಯೇಯಜೀವಿ: ಮೈ.ಚ. ಜಯದೇವ: ಬದುಕು–ನೆನಪುʼ ಪುಸ್ತಕ ಲೋಕಾರ್ಪಣೆ

Book Release: ಬೆಂಗಳೂರು ರಾಷ್ಟ್ರೋತ್ಥಾನ ‍ಪರಿಷತ್ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಹಿರಿಯ ಪ್ರಚಾರಕ, ಸಂಟನೆಯ ರೂವಾರಿ ಮೈ.ಚ. ಜಯದೇವ (ಮೈಸೂರು ಚನ್ನಬಸಪ್ಪ ಜಯದೇವ) ಅವರ ಬದುಕು–ನೆನಪನ್ನು ತೆರೆದಿಡುವ ‘ಅವಿಶ್ರಾಂತ ಧ್ಯೇಯಜೀವಿʼ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಮೇ 14ರಂದು ಸಂಜೆ 6.30ಕ್ಕೆ ಬೆಂಗಳೂರು ನಗರದ ಸರ್‌ ಪುಟ್ಟಣ್ಣಚೆಟ್ಟಿ ಪುರಭವನ (ಟೌನ್‌ಹಾಲ್‌) ಆಯೋಜಿಸಲಾಗಿದೆ.

ಬೆಂಗಳೂರಿನಲ್ಲಿ ನಾಳೆ 'ಅವಿಶ್ರಾಂತ ಧ್ಯೇಯಜೀವಿ' ಪುಸ್ತಕ ಲೋಕಾರ್ಪಣೆ

‘ಅವಿಶ್ರಾಂತ ಧ್ಯೇಯಜೀವಿʼ ಪುಸ್ತಕ -

Profile
Siddalinga Swamy May 13, 2026 4:00 PM

ಬೆಂಗಳೂರು, ಮೇ 13: ರಾಷ್ಟ್ರೋತ್ಥಾನ ‍ಪರಿಷತ್ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಹಿರಿಯ ಪ್ರಚಾರಕ, ಸಂಘಟನೆಯ ರೂವಾರಿ ಮತ್ತು ಕರ್ನಾಟಕದಲ್ಲಿ ಸಂಘದ ತಳಹದಿ ಬಲಪಡಿಸಿದ ಶಿಸ್ತಿನ ಸಿಪಾಯಿ ಮೈ.ಚ. ಜಯದೇವ (ಮೈಸೂರು ಚನ್ನಬಸಪ್ಪ ಜಯದೇವ) ಅವರ ಬದುಕು–ನೆನಪನ್ನು ತೆರೆದಿಡುವ ‘ಅವಿಶ್ರಾಂತ ಧ್ಯೇಯಜೀವಿʼ ಪುಸ್ತಕ ಬಿಡುಗಡೆ ಕಾರ್ಯಕ್ರಮವು (Book Release) ಮೇ 14ರಂದು ಸಂಜೆ 6.30ಕ್ಕೆ ಬೆಂಗಳೂರು ನಗರದ ಸರ್‌ ಪುಟ್ಟಣ್ಣಚೆಟ್ಟಿ ಪುರಭವನ (ಟೌನ್‌ಹಾಲ್‌) ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಶ್ರೀ ಕ್ಷೇತ್ರ ಸುತ್ತೂರು ಇಲ್ಲಿನ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಪುಸ್ತಕ ಲೋಕಾರ್ಪಣೆ ಮಾಡಿ, ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಪುಸ್ತಕದ ಕುರಿತು ಮಾತನಾಡಲಿದ್ದಾರೆ. ಲೇಖಕರಾದ ಡಾ. ಬಾಬು ಕೃಷ್ಣಮೂರ್ತಿ, ಬೇಳೂರು ಸುದರ್ಶನ ಹಾಗೂ ರಾಷ್ಟ್ರೋತ್ಥಾನ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಮೈ.ಚ. ಜಯದೇವ ಅವರ ಕುರಿತು

ಮೈ.ಚ. ಜಯದೇವ ರಾಷ್ಟ್ರೋತ್ಥಾನ ಪರಿಷತ್ತನ್ನು ಆರಂಭದ ದಿನಗಳಿಂದಲೂ (1965) ಕಟ್ಟಿ ಬೆಳೆಸಿದವರು. ವ್ಯವಸ್ಥಾಕುಶಲರೂ, ಅಸಾಮಾನ್ಯ ದಕ್ಷರೂ, ಸಂಘಟನೆಯ ರೂವಾರಿಗಳೂ ಆಗಿ ಒಂದು ಜೀವನ, ಒಂದು ಧೈಯಾನುಸಂಧಾನ ಎಂಬ ಸೂತ್ರವನ್ನು ಜೀವನದುದ್ದಕ್ಕೂ ಪಾಲಿಸುತ್ತ ತಮ್ಮ ದೂರದರ್ಶಿ ಚಿಂತನೆ, ರಾಷ್ಟ್ರನಿಷ್ಠ ಕರ್ತವ್ಯಪ್ರಜ್ಞೆ, ಕಠಿಣ ಪರಿಶ್ರಮದ ಮೂಲಕ ಸ್ವಸ್ಥ ಸಮಾಜನಿರ್ಮಾಣದ ವಿವಿಧ ಕ್ಷೇತ್ರಗಳಲ್ಲಿ ರಾಷ್ಟೋತ್ಥಾನ ಪರಿಷತ್ತು ಸ್ಥಿರ ಹೆಜ್ಜೆಗಳನ್ನಿಟ್ಟು ಮುನ್ನಡೆಯಲು ಕಾರಣರಾದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಗಳೂರು ಮಹಾನಗರ ಕಾರ್ಯವಾಹ, ಪ್ರಾಂತ ಕಾರ್ಯವಾಹ, ಕ್ಷೇತ್ರೀಯ ಕಾರ್ಯವಾಹ, ಕ್ಷೇತ್ರೀಯ ಪ್ರಚಾರಕ, ಅಖಿಲ ಭಾರತೀಯ ಕಾರ್ಯಕಾರಿಣಿಯ ಆಮಂತ್ರಿತ ಸದಸ್ಯರು - ಹೀಗೆ 5 ದಶಕಗಳಿಗೂ ಹೆಚ್ಚು ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘದ ಬೇರುಗಳನ್ನು ಗಟ್ಟಿಗೊಳಿಸಿದವರು. ಮಿಥಿಕ್ ಸೊಸೈಟಿ, ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಅಮೃತ ಶಿಶುನಿವಾಸ, ಅಬಲಾಶ್ರಮ - ಹೀಗೆ ಬೆಂಗಳೂರಿನ ಅನೇಕ ಸಾಮಾಜಿಕ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿ ನಿಂತವರು. ಈ ಎಲ್ಲ ಸಂಸ್ಥೆಗಳು ಮೂಲೋದ್ದೇಶದಂತೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಪ್ರೇರಣೆ ನೀಡುವುದರ ಜತೆಜತೆಗೆ ಅಗತ್ಯ ವ್ಯವಸ್ಥೆ-ವ್ಯಕ್ತಿ ಜೋಡಣೆಯಂತಹ ಕೆಲಸಗಳನ್ನೂ ತೆರೆಯ ಹಿಂದೆ ನಿಂತು ಮಾಡಿದವರು ಮೈ.ಚ. ಜಯದೇವ್.