Physical abuse: ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಲೈಂಗಿಕ ದೌರ್ಜನ್ಯ; ಫೋನ್‌ನಲ್ಲಿ ಹಲವು ಹುಡುಗಿಯರ ವಿಡಿಯೊ!
Physical abuse: ಬೆಂಗಳೂರು ನಗರದ ಹೊರವಲಯದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಜ್ಜಿಯ ಮೊಬೈಲ್‌ನಿಂದ ಬಾಲಕಿ ನಗ್ನ ಪೋಟೊವನ್ನು ಬ್ಯಾಡ್ಮಿಂಟನ್ ಕೋಚ್‌ಗೆ ಕಳುಹಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿ, ಎಂಟು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.


ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಬ್ಯಾಡ್ಮಿಂಟನ್ ತರಬೇತುದಾರನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಗರದ ಹೊರವಲಯದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ (26) ಬ್ಯಾಡ್ಮಿಂಟನ್ ಕೋಚ್ ಆಗಿದ್ದು, ಕೋಚಿಂಗ್ ನೀಡುವ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ (Physical abuse) ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್‌ಗೆ ಸೇರಿದ್ದ ಬಾಲಕಿಯನ್ನು ಕೋಚ್ ಆಗಾಗ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಯಾರ ಬಳಿಯೂ ಹೇಳದಂತೆ ಬೆದರಿಕೆ ಹಾಕಿದ್ದ. ಇತ್ತೀಚೆಗೆ ಬಾಲಕಿ ರಜೆಗೆ ಅಜ್ಜಿಯ ಮನೆಗೆ ಬಂದಾಗ ಮೊಬೈಲ್‌ನಿಂದ ತನ್ನ ನಗ್ನ ಪೋಟೊವನ್ನು ಸುರೇಶ್ಗೆ ಶೇರ್ ಮಾಡಿದ್ದಾಳೆ. ಬಳಿಕ ಮೊಬೈಲ್ ನೋಡಿದಾಗ ಕೋಚ್‌ಗೆ ನಗ್ನ ಫೋಟೊ ಕಳುಹಿಸಿರುವುದು ಪತ್ತೆಯಾಗಿದೆ. ಇದನ್ನು ನೋಡಿ ಅಜ್ಜಿ ಆಘಾತಗೊಂಡಿದ್ದು, ಈ ಬಗ್ಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಆಗ ಬಾಲಕಿಯನ್ನು ವಿಚಾರಿಸಿದಾಗ ಕೋಚ್ ಸುರೇಶನ ನಿಜ ಸ್ವರೂಪ ಬಯಲಾಗಿದೆ.
ಬಳಿಕ ಪೋಷಕರು ಕೋಚ್ ಸುರೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಮೊಬೈಲ್ ಪರಿಶೀಲನೆ ಮಾಡಿದಾಗ ಕ್ರೀಡಾ ತರಬೇತಿ ಕೇಂದ್ರದಲ್ಲಿ ಹಲವು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿರುವುದು ಕಂಡುಬಂದಿದೆ. ಅಲ್ಲದೇ ಮೊಬೈಲ್ನಲ್ಲಿ 13 ರಿಂದ 16 ವರ್ಷ ವಯಸ್ಸಿನ 8 ಹುಡುಗಿಯರ ನಗ್ನ ಫೋಟೊಗಳು ಮತ್ತು ವಿಡಿಯೊಗಳೂ ಪತ್ತೆಯಾಗಿವೆ. ಹೀಗಾಗಿ ಇನ್ನಷ್ಟು ತನಿಖೆ ನಡೆಸಲು ಪೊಲೀಸರು, ಆರೋಪಿ ಸುರೇಶ್ ಬಾಲಾಜಿಯನ್ನು ಕೋರ್ಟ್‌ಗೆ ಹಾಜರುಪಡಿಸಿ, ಎಂಟು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ | Viral news: ಕೆಲಸ ಸಿಗದೆ ತನಗೆ ತಾನೇ ಶ್ರದ್ಧಾಂಜಲಿ ಪೋಸ್ಟ್ ಮಾಡಿದ ಬೆಂಗಳೂರು ಯುವಕ!
ಬ್ಯಾಡ್ಮಿಂಟನ್ ಕೋಚಿಂಗ್‌ಗೆ ಬರುತ್ತಿದ್ದ ಬಾಲಕಿಯರೊಂದಿಗೆ ತರಬೇತುದಾರ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಇದನ್ನು ಯಾರಿಗೂ ಹೇಳದಂತೆ ಹೆದರಿಸಿದ್ದ. ಹೀಗಾಗಿ ಇದುವರೆಗೂ ಬಾಲಕಿಯರು ಈ ಬಗ್ಗೆ ಯಾರಿಗೂ ಹೇಳಿಲ್ಲ. ಆದರೆ ಬಾಲಕಿ ಅಜ್ಜಿ ಮೊಬೈಲ್‌ನಿಂದ ತನ್ನ ನಗ್ನ ಫೋಟೋವನ್ನು ಕಳುಹಿಸಿದಾಗ ಕೋಚ್ ಸುರೇಶ್ ಸಿಕ್ಕಿಬಿದ್ದಿದ್ದಾನೆ. ಹೀಗಾಗಿ ಪೊಲೀಸರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತೆ ಬಾಲಕಿಯ ಹೇಳಿಕೆ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.