ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Vijayalakshmi Darshan: ದರ್ಶನ್ ಪತ್ನಿಗೆ ಅಶ್ಲೀಲ ಕಾಮೆಂಟ್ ಪ್ರಕರಣ; 4ನೇ ಆರೋಪಿಗೆ ಜಾಮೀನು ಮಂಜೂರು

'ಡೆವಿಲ್' ಸಿನಿಮಾ ಪ್ರಚಾರದ ವೇಳೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್ ಮಾಡಿ, ಟ್ರೋಲ್‌ ಮಾಡಲಾಗಿತ್ತು. ಈ ಕುರಿತು ವಿಜಯಲಕ್ಷ್ಮಿ ಅವರು ದೂರು ನೀಡಿದ ಬಳಿಕ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ನಾಲ್ಕನೇ ಆರೋಪಿಗೆ ಜಾಮೀನು ಮಂಜೂರು ಆಗಿದೆ.

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ವಿರುದ್ಧ ಅಶ್ಲೀಲ ಕಾಮೆಂಟ್ ಪ್ರಕರಣದಲ್ಲಿ ಬಂಧನವಾಗಿದ್ದ ನಾಲ್ಕನೇ ಆರೋಪಿಗೆ ಜಾಮೀನು ಸಿಕ್ಕಿದೆ. ಹುಬ್ಬಳ್ಳಿ ಪೆಂಟ್ರೋಲ್ ಬಂಕ್ ಮ್ಯಾನೇಜರ್ ಆಗಿದ್ದ ನಿಂಗರಾಜ್​ನನ್ನು​ ಜನವರಿಯಲ್ಲಿ ಅರೆಸ್ಟ್ ಮಾಡಲಾಗಿತ್ತು. ಇದೀಗ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರಿಂದ ಪೀಠದಿಂದ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಪೆಟ್ರೋಲ್ ಬಂಕ್ ಮ್ಯಾನೇಜರ್ ಆಗಿದ್ದ ನಿಂಗರಾಜ್ ಒಂದೇ ಒಂದು ಕಮೆಂಟ್​ನಿಂದ ಬರೋಬ್ಬರಿ 7 ತಿಂಗಳು ಜೈಲಿನಲ್ಲಿ ಮುದ್ದೆ ಮುರಿಯುವ ಹಾಗಾಗಿತ್ತು. ಸೋಷಿಯಲ್ ಮೀಡಿಯಾವನ್ನು ಸರಿಯಾಗಿ ಬಳಸದೇ, ಅಶ್ಲೀಲವಾಗಿ ಕಮೆಂಟ್ ಮಾಡುವರು, ಫೋಟೋ ಮಾರ್ಫಿಂಗ್ ಮಾಡುವವರಿಗೆ ಇದು ಎಚ್ಚರಿಕೆ ಪಾಠವಾಗಲಿದೆ.

ಏನಿದು ಪ್ರಕರಣ?

'ಡೆವಿಲ್' ಸಿನಿಮಾ ಪ್ರಚಾರದ ವೇಳೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್ ಮಾಡಿ, ಟ್ರೋಲ್‌ ಮಾಡಲಾಗಿತ್ತು. ಇವರೇ ನೋಡಿ ಕ್ರಿಮಿನಲ್ ದರ್ಶನ್ ಹೆಂಡತಿ ಎಂದು ಬರೆದಿದ್ದ ಕಿಡಿಗೇಡಿಗಳು, ವಿಜಯಲಕ್ಷ್ಮೀ ಅವರ ವೈಯಕ್ತಿಕ ಬದುಕನ್ನು ಗುರಿಯಾಗಿಸಿ ಟೀಕಿಸಿದ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ರನ್ನು ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ನಟಿ ರಕ್ಷಿತಾ ಪ್ರೇಮ್!

ನಿರಂತರ ಟ್ರೋಲಿಂಗ್‌ಗೆ ಬೇಸತ್ತ ವಿಜಯಲಕ್ಷ್ಮಿ, ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ನಾಲ್ಕನೇ ಆರೋಪಿಗೆ ಸದ್ಯ ಜಾಮೀನು ಮಂಜೂರಾಗಿದೆ.