Bangalore Metro: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ವ್ಯತ್ಯಯ
Namma Metro Yellow Line: ಹಳದಿ ಮಾರ್ಗವು ಬೆಂಗಳೂರಿನ ಪ್ರಮುಖ ಐಟಿ ಕಾರಿಡಾರ್ ಆದ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಕಾರಣ, ಈ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿರುತ್ತದೆ. ಅದರಲ್ಲೂ ಬೆಳಗ್ಗಿನ 8 ರಿಂದ 10 ಗಂಟೆಯ ಅವಧಿಯು ಪೀಕ್ ಅವರ್ ಆಗಿದ್ದು, ಈ ಸಮಯದಲ್ಲಿಯೇ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಪ್ರಯಾಣಿಕರ ಸಂಕಷ್ಟವನ್ನು ಇಮ್ಮಡಿಗೊಳಿಸಿದೆ. ಪ್ರಸ್ತುತ ಈ ಮಾರ್ಗದಲ್ಲಿ ಕೇವಲ ಐದು ರೈಲುಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.
-
ಬೆಂಗಳೂರು : ರಾಜಧಾನಿಯ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ (Namma metro yellow line) ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಸಂಚಾರದಲ್ಲಿ ವ್ಯತ್ಯಯವಾಗಿದೆ. ಬಿಎಂಆರ್‌ಸಿಎಲ್ (BMRCL) ಈ ಕುರಿತು ಮಾಹಿತಿ ನೀಡಿದ್ದು, ಹಳದಿ ಮಾರ್ಗದ (Bangalore metro) ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ತಿಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಹೇಳಿದೆ.
ಆರ್‌ವಿ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸುವ ಹಳದಿ ಮಾರ್ಗದ ಮೆಟ್ರೋ ಸಂಚಾರ ಇಂದು ವಿಳಂಬ ಆಗಲಿದೆ. ಬೆಳಗಿನ ಜಾವ ಹೆಚ್ಚು ಪ್ರಯಾಣಿಕರ ದಟ್ಟಣೆ ಇರುವುದರಿಂದ ಮತ್ತು ಈ ಮಾರ್ಗದಲ್ಲಿ ಈಗ ಕೇವಲ 5 ರೈಲುಗಳು ಮಾತ್ರ ಓಡಾಡುತ್ತಿರುವುದರಿಂದ ಪ್ರಯಾಣಿಕರು ಮತ್ತಷ್ಟು ಕಾಯಬೇಕಾಗಬಹುದು. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ಟ್ವೀಟ್ ಮಾಡಿದೆ.
ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ತಿಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ.
— ನಮ್ಮ ಮೆಟ್ರೋ (@OfficialBMRCL) November 12, 2025
ಹಳದಿ ಮಾರ್ಗವು ಬೆಂಗಳೂರಿನ ಪ್ರಮುಖ ಐಟಿ ಕಾರಿಡಾರ್ ಆದ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಕಾರಣ, ಈ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿರುತ್ತದೆ. ಅದರಲ್ಲೂ ಬೆಳಗ್ಗಿನ 8 ರಿಂದ 10 ಗಂಟೆಯ ಅವಧಿಯು ಪೀಕ್ ಅವರ್ ಆಗಿದ್ದು, ಈ ಸಮಯದಲ್ಲಿಯೇ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಪ್ರಯಾಣಿಕರ ಸಂಕಷ್ಟವನ್ನು ಇಮ್ಮಡಿಗೊಳಿಸಿದೆ. ಪ್ರಸ್ತುತ ಈ ಮಾರ್ಗದಲ್ಲಿ ಕೇವಲ ಐದು ರೈಲುಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ, ಒಂದು ರೈಲಿನಲ್ಲಿ ದೋಷ ಉಂಟಾದರೂ ಇಡೀ ವೇಳಾಪಟ್ಟಿಯೇ ಏರುಪೇರಾಗುತ್ತದೆ. ರೈಲುಗಳ ನಡುವಿನ ಅಂತರ ಹೆಚ್ಚಾಗಿ, ಪ್ರಯಾಣಿಕರು ನಿಲ್ದಾಣಗಳಲ್ಲಿ ಹೆಚ್ಚು ಹೊತ್ತು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
ಇದನ್ನೂ ಓದಿ: Namma Metro: ನಮ್ಮ ಮೆಟ್ರೊದಲ್ಲಿ ತ್ವರಿತ ಅಂಗಾಂಗ ರವಾನೆ, ನಾಲ್ಕು ರೋಗಿಗಳಿಗೆ ಜೀವದಾನ
ಈ ಬಗ್ಗೆ ಟ್ವೀಟ್ (X) ಮೂಲಕ ಮಾಹಿತಿ ನೀಡಿದ ಬಿಎಂಆರ್‌ಸಿಎಲ್, "ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಷಾದಿಸುತ್ತೇವೆ" ಎಂದು ತಿಳಿಸಿದೆ. ತಾಂತ್ರಿಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.