ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರು ಉತ್ತರ ಮಹಾನಗರ ಪಾಲಿಕೆ: 4344 ಕೋಟಿ ರೂ. ವೆಚ್ಚದ ಚೊಚ್ಚಲ ಬಜೆಟ್ ಮಂಡನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಬರುವ ಐದು ಹೊಸ ಪಾಲಿಕೆಗಳಲ್ಲಿ ಒಂದಾಗಿರುವ ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯ ಚೊಚ್ಚಲ ಬಜೆಟ್ ಮಂಡನೆಯಾಗಿದೆ. ಆಯವ್ಯಯವನ್ನು ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಪ್ರಸ್ತುತಿ ಪಡಿಸಿದರು. ಮಹಿಳಾ ಸಬಲೀಕರಣ, ಆರೋಗ್ಯ, ಮೂಲಸೌಕರ್ಯ ಹಾಗೂ ನಗರಾಭಿವೃದ್ಧಿಗೆ ಈ ಬಾರಿ ಒತ್ತು ನೀಡಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಬರುವ ಐದು ಹೊಸ ಪಾಲಿಕೆಗಳಲ್ಲಿ ಒಂದಾಗಿರುವ ಬೆಂಗಳೂರು ಉತ್ತರ (Bangalore North Municipal Corporation) ಮಹಾನಗರ ಪಾಲಿಕೆಯ ಚೊಚ್ಚಲ ಬಜೆಟ್ ಮಂಡನೆಯಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಡಳಿತಗಾರರಾದ ಮಹೇಶ್ವರ್‌ರಾವ್ ಅಧ್ಯಕ್ಷತೆಯಲ್ಲಿ, ಯಲಹಂಕ ಎನ್.ಇ.ಎಸ್ ಬಳಿಯಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ 2026-27ನೇ ಸಾಲಿನ ಚೊಚ್ಚಲ ಆಯವ್ಯಯವನ್ನು ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಪ್ರಸ್ತುತಿ ಪಡಿಸಿದರು. 2026-27ನೇ ವರ್ಷದಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯ ಆದಾಯದ ಮೂಲವು 4,344 ಕೋಟಿ ರೂ.ಗಳಷ್ಟು ಇದ್ದು, ಅಂದಾಜು ವೆಚ್ಚ 4,341.20 ಕೋಟಿ ರೂ. ಇರಲಿದೆ. ಈ ಬಾರಿ ಮಹಿಳಾ ಸಬಲೀಕರಣ, ಆರೋಗ್ಯ, ಮೂಲಸೌಕರ್ಯ ಹಾಗೂ ನಗರಾಭಿವೃದ್ಧಿಗೆ ಒತ್ತು ನೀಡಲಾಗಿದೆ.

ಪಾಲಿಕೆ ಆಯುಕ್ತ ಪಿ. ಸುನೀಲ್ ಕುಮಾರ್ ಅವರು ಬಜೆಟ್ ಭಾಷಣದಲ್ಲಿ ಮಹಿಳೆಯರಿಗಾಗಿ ‘ಅಕ್ಕ ಕೆಫೆ’, ಹೊಸ ಆಸ್ಪತ್ರೆಗಳ ಸ್ಥಾಪನೆ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ .2.80 ಕೋಟಿಗಳ ಮಿಗತೆ ಆಯವ್ಯಯವನ್ನು ಬೆಂಗಳೂರು ಉತ್ತರ ನಗರ ಪಾಲಿಕೆಯ ಜನರ ಮುಂದೆ ಪ್ರಸ್ತುತ ಪಡಿಸಲಾಗಿದೆ. 134 ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 36 ಜೀವಂತ ಕೆರೆಗಳಿದ್ದು, ಅಭಿವೃದ್ಧಿಪಡಿಸಲಾದ 30 ಕೆರೆಗಳ ವಾರ್ಷಿಕ ನಿರ್ವಹಣೆಗಾಗಿ ರೂ. 8.00 ಕೋಟಿಗಳ ಅನುದಾನವನ್ನು ಕಾಯ್ದಿರಿಸಲಾಗಿದೆ.

ಈ ಬಾರಿ ಬಜೆಟ್‌ನಲ್ಲಿ ಮಹಿಳಾ ಮತ್ತು ಸಾಮಾಜಿಕ ಕಲ್ಯಾಣಕ್ಕೆ ಒತ್ತು ನೀಡಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳ ಸಬಲೀಕರಣ, ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಹಾಗೂ 400 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ತೃತೀಯ ಲಿಂಗಿಗಳಿಗೆ 50 ಸಾವಿರ ರೂ. ಸಹಾಯಧನ, ಪೌರಕಾರ್ಮಿಕರು ಮತ್ತು ಬೀದಿ ವ್ಯಾಪಾರಿಗಳಿಗೆ ಯೋಜನೆ ಹಾಗೂ ಪೌರಕಾರ್ಮಿಕರ ಕಲ್ಯಾಣಕ್ಕೆ 10 ಕೋಟಿ ರೂ. ಮೀಸಲಿಡಲಾಗಿದೆ. ಆರೋಗ್ಯ ಕ್ಷೇತ್ರಕ್ಕೂ ಒತ್ತು ನೀಡಲಾಗಿದ್ದು, ಸರ್ವಜ್ಞನಗರ, ಬ್ಯಾಟರಾಯನಪುರದಲ್ಲಿ100 ಹಾಸಿಗೆ ಆಸ್ಪತ್ರೆಗಳು ಮತ್ತು ಉಚಿತ ಡಯಾಲಿಸಿಸ್ ಸೇವೆಗಳ ವಿಸ್ತರಣೆ ಮಾಡಲಾಗಿದೆ. ಡಿ.ಜೆ ಹಳ್ಳಿ, ಮುನಿರೆಡ್ಡಿಪಾಳ್ಯ ಆಸ್ಪತ್ರೆಗಳ ಮೇಲ್ದರ್ಜೆಗೇರಿಕೆ ಮಾಡಲಾಗಿದೆ.

ರಾಜ್ಯದ ಆದಾಯ, ಖರ್ಚುಗಳ ಬಗ್ಗೆ ಸ್ಪಷ್ಟ ತಿಳಿವಳಿಕೆ ಇರಬೇಕು: ಬಜೆಟ್‌ ಲೆಕ್ಕಾಚಾರದ ಕುರಿತು ಶಾಸಕರಿಗೆ ಸಿಎಂ ಪಾಠ

2026–27 ನೇ ಸಾಲಿನಲ್ಲಿ 12000 ಬೀದಿ ನಾಯಿಗಳಿಗೆ ABC ಶಸ್ತ್ರಚಿಕಿತ್ಸೆ ನಡೆಸುವ ಗುರಿಯನ್ನು ಹೊಂದಲಾಗಿದೆ. ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಔಷಧೋಪಚಾರ, ಶಸ್ತ್ರಚಿಕಿತ್ಸಾ ಸಾಮಗ್ರಿ, ವೈದ್ಯಕೀಯ ಸಿಬ್ಬಂದಿ, ಆಹಾರ ಹಾಗೂ ನಂತರದ ಆರೈಕೆ ವೆಚ್ಚಗಳನ್ನು ಒಳಗೊಂಡಂತೆ ರೂ.3.00 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ. ಆಯವ್ಯಯದಲ್ಲಿ ಶೈಕ್ಷಣಿಕ ಕಾರ್ಯಕ್ರಮಕ್ಕಾಗಿ ಒಟ್ಟು ಮೊತ್ತ ರೂ. 8.94 ಕೋಟಿಗಳನ್ನು ಮೀಸಲಿರಿಸಲಾಗಿದೆ. ಇನ್ನು ರಸ್ತೆ, ಕುಡಿಯುವ ನೀರಿನ ಸೌಕರ್ಯ ಸೇರಿದಂತೆ ಮೂಲಭೂತ ಅವಶ್ಯಕತೆಗಳಿಗಾಗಿ ಅನುದಾನವನ್ನು ಹಂಚಿಕೆ ಮಾಡಲಾಗಿದೆ.

Vishakha Bhat Heggar

View all posts by this author