Basanagouda Patil Yatnal: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿ: ಸಿಎಂಗೆ ಶಾಸಕ ಯತ್ನಾಳ್ ಪತ್ರ
Namaz in Public places: ಸಾರ್ವಜನಿಕ ರಸ್ತೆಗಳು ಮತ್ತು ಸರ್ಕಾರಿ ಜಾಗಳಲ್ಲಿ ಸೂಕ್ತ ಅನುಮತಿಯಿಲ್ಲದೆ ನಮಾಜ್ ಮಾಡುವುದನ್ನು ನಿಷೇಧಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ಪತ್ರ ಬರೆದಿದ್ದಾರೆ.

-

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal), ಸಾರ್ವಜನಿಕ ಸ್ಥಳಗಳು, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದಾರೆ.
ಸಿಎಂಗೆ ಬರೆದಿರುವ ಪತ್ರದ ಪ್ರತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಯತ್ನಾಳ್, 'ಸರ್ವ ಜನಾಂಗದ ಶಾಂತಿಯ ತೋಟ' ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸ 'ಸರ್ವ ಜನಾಂಗದ ಶಾಂತಿಯ ತೋಟ' ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ.
— Basanagouda R Patil (Yatnal) (@BasanagoudaBJP) October 17, 2025
I have written a… pic.twitter.com/Jsp8DRWXIV
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮುಖ್ಯಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ರಸ್ತೆಗಳು, ಬಸ್ ನಿಲ್ದಾಣ, ಪಾದಚಾರಿ ಮಾರ್ಗಗಳಲ್ಲಿ ಸೇರಿದಂತೆ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ನೋಡುತ್ತಿದ್ದೇವೆ. ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ನಿರ್ಬಂಧಿಸಿದಂತೆ ನಮಾಜ್ ಮಾಡುವುದನ್ನೂ ನಿಷೇಧಿಸಬೇಕು. ಹಾಗೇ ಮಾಡಿದಾಗಲೇ ನೀವು ನಿಜವಾದ ಜಾತ್ಯತೀತರು ಎಂದು ಸಿಎಂ ಅವರಿಗೆ ಯತ್ನಾಳ್ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ | RSS: ಆರೆಸ್ಸೆಸ್ ಸೇರಿದಂತೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಮೈದಾನ ಇಲ್ಲ: ಶಿಕ್ಷಣ ಇಲಾಖೆ ಆದೇಶ
ಧಾರ್ಮಿಕ ಉದ್ದೇಶಗಳಿಗಾಗಿ ಸಾರ್ವಜನಿಕ ಸ್ಥಳಗಳನ್ನು ಅನಧಿಕೃತವಾಗಿ ಬಳಸುವುದನ್ನು ತಡೆಯಲು ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಗಳ ಅಡಿಯಲ್ಲಿ ಸ್ಪಷ್ಟವಾದ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಅಥವಾ ಸುತ್ತೋಲೆಯನ್ನು ರೂಪಿಸಲು ಸರ್ಕಾರ ಮುಂದಾಗಬೇಕು. ಕಾನೂನು, ಸುವ್ಯವಸ್ಥೆ ಹಾಗೂ ಸಂಚಾರಕ್ಕೆ ಅಡಚಣೆಯನ್ನು ತಪ್ಪಿಸಲು ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ತಕ್ಷಣವೇ ನಿಷೇಧಿಸಬೇಕೆಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ ಎಂದು ಪತ್ರದಲ್ಲಿ ಕೋರಿದ್ದಾರೆ.