ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Garbage fee: ಬೆಂಗಳೂರಿಗರೇ, ಕಸದ ಜೊತೆಗೆ ಇನ್ನು ಮುಂದೆ ಶುಲ್ಕವನ್ನೂ ಕೊಡಿ!

ಕಟ್ಟಡದ ವಿಸ್ತೀರ್ಣದ ಆಧಾರದ ಮೇಲೆ ಬಳಕೆದಾರ ಶುಲ್ಕ ನಿರ್ಧರಿಸಲಾಗುತ್ತದೆ ಎನ್ನಲಾಗಿದೆ. 600 ಚದರ ಅಡಿ ವರೆಗಿನ ಕಟ್ಟಡಗಳು ತಿಂಗಳಿಗೆ 10 ರೂ., ವರ್ಷಕ್ಕೆ 120 ರೂ. ಪಾವತಿಸಬೇಕು. 4,000 ಚದರ ಅಡಿಗಿಂತ ದೊಡ್ಡ ಕಟ್ಟಡಗಳಿಗೆ ತಿಂಗಳಿಗೆ ಗರಿಷ್ಠ 400 ರೂ. ವರ್ಷಕ್ಕೆ 4,800 ರೂ. ಪಾವತಿಸಬೇಕಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರಿಗರೇ, ಕಸದ ಜೊತೆಗೆ ಇನ್ನು ಮುಂದೆ ಶುಲ್ಕವನ್ನೂ ಕೊಡಿ!

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 15, 2025 12:08 PM

ಬೆಂಗಳೂರು: ಬಸ್ ಟಿಕೆಟ್ ದರ ಹೆಚ್ಚಳ, ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳದ ನಡುವೆ ಬೆಂಗಳೂರಿಗರಿಗೆ (Bengaluru news) ಮತ್ತೊಂದು ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ಏಪ್ರಿಲ್‌ 1ರಿಂದ ಪ್ರತಿ ಮನೆಯಿಂದ ಸಂಗ್ರಹಿಸುವ ಕಸಕ್ಕೂ ಶುಲ್ಕ (Garbage fee) ವಸೂಲಿಗೆ ಸರ್ಕಾರ ಅನುಮೋದನೆ ನೀಡಿದೆ. ಇದು ವಸತಿ ಸೇರಿದಂತೆ ಎಲ್ಲ ಬಗೆಯ ಕಟ್ಟಡಗಳಿಗೂ ಅನ್ವಯ ಆಗಲಿದೆ. ಕೆಜಿ ಲೆಕ್ಕದಲ್ಲಿ ಬಳಕೆದಾರರ ಶುಲ್ಕವನ್ನು ವಿಧಿಸಲಾಗುತ್ತಿದೆ. ಇದನ್ನು ಬಿಬಿಎಂಪಿ (BBMP) ವಸೂಲಿ ಮಾಡಲಿದೆ.

ತ್ಯಾಜ್ಯ ಸಂಸ್ಕರಣೆ ಮಾಡದ ಅಪಾರ್ಟ್ಮೆಂಟ್‌ಗಳು ಅಥವಾ ದೊಡ್ಡ ವಾಣಿಜ್ಯ ಸಂಸ್ಥೆಗಳಂತಹ ಬೃಹತ್ ತ್ಯಾಜ್ಯ ಉತ್ಪಾದಕರಿಂದ ಪ್ರತಿ ಕೆ.ಜಿ. ತ್ಯಾಜ್ಯಕ್ಕೆ 12 ರೂ. ಬಳಕೆದಾರ ಶುಲ್ಕ ವಿಧಿಸಲು ಸರ್ಕಾರವು ಅವಕಾಶ ನೀಡಿದೆ. ಕಟ್ಟಡದ ವಿಸ್ತೀರ್ಣದ ಆಧಾರದ ಮೇಲೆ ಬಳಕೆದಾರ ಶುಲ್ಕ ನಿರ್ಧರಿಸಲಾಗುತ್ತದೆ ಎನ್ನಲಾಗಿದೆ. 600 ಚದರ ಅಡಿ ವರೆಗಿನ ಕಟ್ಟಡಗಳು ತಿಂಗಳಿಗೆ 10 ರೂ., ವರ್ಷಕ್ಕೆ 120 ರೂ. ಪಾವತಿಸಬೇಕು. 4,000 ಚದರ ಅಡಿಗಿಂತ ದೊಡ್ಡ ಕಟ್ಟಡಗಳಿಗೆ ತಿಂಗಳಿಗೆ ಗರಿಷ್ಠ 400 ರೂ. ವರ್ಷಕ್ಕೆ 4,800 ರೂ. ಪಾವತಿಸಬೇಕಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ಮನೆ-ಮನೆಗೆ ಕಸ ಸಂಗ್ರಹಣೆಗೆ ಬಳಕೆದಾರ ಶುಲ್ಕ ವಿಧಿಸುವ ಮೂಲಕ ವಾರ್ಷಿಕವಾಗಿ 600 ಕೋಟಿ ರೂ. ಹೆಚ್ಚುವರಿ ಆದಾಯ ಗಳಿಸುವ ನಿರೀಕ್ಷೆ ಹೊಂದಿದೆ. ಜುಲೈ 2022ರಲ್ಲಿ ಸ್ಥಾಪನೆಯಾದ ಬಿಎಸ್‌ಡಬ್ಲ್ಯೂಎಂಎಲ್, ನಗರದಲ್ಲಿ ಪ್ರತಿದಿನ ಉತ್ಪತ್ತಿಯಾಗುವ 6,000 ಟನ್ ತ್ಯಾಜ್ಯದ ಸಂಗ್ರಹಣೆ, ಸಾಗಣೆ ಮತ್ತು ವಿಲೇವಾರಿಗೆ ಜವಾಬ್ದಾರನಾಗಿದೆ. ಇದು ತ್ಯಾಜ್ಯ ಸಂಗ್ರಹಣೆಯಲ್ಲಿ ತೊಡಗಿರುವ ಆಟೋ ಟಿಪ್ಪರ್‌ಗಳಿಗೆ ವಾರ್ಷಿಕ ಸುಮಾರು 550 ಕೋಟಿ ರೂ.ಗಳನ್ನು ಖರ್ಚು ಮಾಡುತ್ತದೆ.

ಬೆಂಗಳೂರಿನ ಜಯದೇವ ಆಸ್ಪತ್ರೆಗೆ ರೋಬೋಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಬೆಂಗಳೂರಿನ ಜಯದೇವ ಆಸ್ಪತ್ರೆಗೆ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಪರಿಚಯಿಸಲು ಸರ್ಕಾರ ಹೆಚ್ಚುವರಿ ಹಣ ಮಂಜೂರು ಮಾಡಲಿದೆ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ವೈದ್ಯರೊಂದಿಗೆ ಸಂವಾದ ನಡೆಸಿ ಮಾತನಾಡಿದ ಸಚಿವರು, ಸಂವಾದದ ವೇಳೆ ಕೆಲವು ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದರು.

ವೈದ್ಯರ ಪ್ರಶ್ನೆಗಳಿಗೆ ಉತ್ತರಿಸಿ ಸಚಿವರು ಮಾತನಾಡುತ್ತಾ, ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚು ಸಮಯ ಕಳೆಯಲಾಗುತ್ತದೆ. ಆ ನಿಟ್ಟಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿಯ ಅವಧಿಯನ್ನು ವಿಸ್ತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು. ಉತ್ತಮ ವೈದ್ಯರನ್ನು ಸದುಪಯೋಗಪಡಿಸಿಕೊಳ್ಳಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ವೈದ್ಯರ ನಿವೃತ್ತಿ ವಯಸ್ಸಿನ ಅವಧಿ ವಿಸ್ತರಣೆ ಕುರಿತು ಪ್ರಸ್ತಾಪಿಸುವೆ ಎಂದು ಭರವಸೆ ನೀಡಿದ್ದಾರೆ.

ವೈದ್ಯಕೀಯ ರಂಗದ ಯೋಜನೆಗಳನ್ನು ಹಾಗೂ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವೈದ್ಯರ ಜೊತೆಗೆ ನಮ್ಮ‌ ಸರ್ಕಾರ ನಿಲ್ಲಲಿದೆ. ಮುಖ್ಯವಾಗಿ ಜಯದೇವ ಆಸ್ಪತ್ರೆಗೆ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಪರಿಚಯಿಸಲು ಸರ್ಕಾರ ಹೆಚ್ಚುವರಿ ಹಣವನ್ನು ಮಂಜೂರು ಮಾಡಲಿದೆ ಎಂದು ಸಂವಾದದಲ್ಲಿ ಘೋಷಿಸಿದ್ದಾರೆ. ಈ‌ ಸಂದರ್ಭದಲ್ಲಿ ಸಂಸ್ಥೆಯ‌ ನಿರ್ದೇಶಕರು, ಹಿರಿಯ ವೈದ್ಯರು ಹಾಗೂ ಕಿರಿಯ ವೈದ್ಯರು ಸಹ ಉಪಸ್ಥಿತರಿದ್ದರು.

ಇದನ್ನೂ ಓದಿ: Viral Video: ಚಲಿಸುವ ರೈಲಿನಿಂದ ಕಸ ಎಸೆದ ಸಿಬ್ಬಂದಿ- ಆಮೇಲೆ ಆಗಿದ್ದೇ ಬೇರೆ! ವಿಡಿಯೊ ನೋಡಿ