Ballari Clash Case: ಬಳ್ಳಾರಿ ಗಲಭೆ ಪ್ರಕರಣದ 25 ಆರೋಪಿಗಳಿಗೆ ಜಾಮೀನು ನೀಡಿದ ಕೋರ್ಟ್
ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಪುತ್ಥಳಿ ಉದ್ಘಾಟನಾ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು. ಈ ವೇಳೆ ಖಾಸಗಿ ಗನ್ ಮ್ಯಾನ್ ಹಾರಿಸಿದ ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಬಂಧನವಾಗಿದ್ದ 25 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.
ಬಳ್ಳಾರಿ ಗಲಭೆಯ ಚಿತ್ರ (ಸಂಗ್ರಹ ಚಿತ್ರ) -
ಬೆಂಗಳೂರು: ಬಳ್ಳಾರಿ ಗಲಭೆ ಪ್ರಕರಣ ಸಂಬಂಧಿಸಿ 25 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಜಾಮಿನು ಮಂಜೂರು ಮಾಡಿದೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿಯ ಗನ್ ಮ್ಯಾನ್ ಗುರುಚರಣ್ ಸಿಂಗ್ ಹೊರತುಪಡಿಸಿ, ಕ್ರೈಂ ನಂಬರ್ ನಾಲ್ಕರಲ್ಲಿ ಇರುವ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಪುತ್ಥಳಿ ಉದ್ಘಾಟನಾ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು. ಈ ವೇಳೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹಾರಿಸಿದ ಗುಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್‌ಗೆ ತಗುಲಿ ಸಾವನಪ್ಪಿದ್ದ ಎಂಬ ಆರೋಪ ಕೇಳಿಬಂದಿತ್ತು. ಘಟನೆ ಸಂಬಂಧ ರಾಜ್ಯ ಸರ್ಕಾರ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿತ್ತು. ಅಲ್ಲದೆ ಡಿಐಜಿಪಿ ವರ್ತಿಕಾ ಕಟಿಯಾರ್ ಅವರನ್ನು ಸಹ ವರ್ಗಾವಣೆ ಮಾಡಲಾಗಿತ್ತು. ಇದೀಗ ಪ್ರಕರಣದ 25 ಆರೋಪಿಗಳಿಗೆ ಕೋರ್ಟ್‌ನಿಂದ ಜಾಮೀನು ಸಿಕ್ಕಿದೆ.
ಸಿಬಿಐ ತನಿಖೆ ಇಲ್ಲ ಎಂದ ಗೃಹ ಸಚಿವರು
ಬಳ್ಳಾರಿ ಗಲಭೆ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂಬ ಬೇಡಿಕೆ ಬಗ್ಗೆ ಗುರುವಾರ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ, ಸಿಬಿಐ ತನಿಖೆಗೆ ಕೊಡಲ್ಲ ಎಂದು ಸ್ಪಷ್ಟಪಡಿಸಿದ್ದರು.
ನಮ್ಮ ಪೊಲೀಸರೇ ತನಿಖೆ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಅವರು ಎಲ್ಲವನ್ನು ನಿಭಾಯಿಸುವ ಶಕ್ತಿ ಹೊಂದಿದ್ದಾರೆ. ಅವರ ಕೈಯಲ್ಲಿ ಆಗಲ್ಲ ಎಂಬ ಸಂದರ್ಭ ಬಂದರೆ ನಾವು ಸಿಬಿಐಗೆ ಕೊಡಬಹುದು. ಆದರೆ, ಅಂಥ ಸಂದರ್ಭ ಇಲ್ಲ. ಹಾಗಾಗಿ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಹೇಳಿದ್ದರು.
Ballari Firing: ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್ ವರ್ಗ
ನಾವು ಯಾವುದೇ ಪ್ರಕರಣಗಳನ್ನು ಸಿಬಿಐಗೆ ಕೊಡಲ್ಲ ಎಂಬ ನಿರ್ಧಾರಗಳನ್ನು ಸಚಿವ ಸಂಪುಟದಲ್ಲಿ ಮಾಡಿದ್ದೇವೆ. ಆಯ್ದ ಸಂದರ್ಭಗಳಲ್ಲಿ ಮಾತ್ರ ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ. ಆದರೆ, ಬಳ್ಳಾರಿ ಗಲಭೆ ಬಗ್ಗೆ ಸಿಬಿಐ ತನಿಖೆ ಅಗತ್ಯವಿಲ್ಲ. ಒಂದು ವೇಳೆ ನ್ಯಾಯಾಲಯದ ಆದೇಶ ಮತ್ತಿತರ ಸಂದರ್ಭ ಬಂದಾಗ ಮಾತ್ರ ನಾವು ಸಿಬಿಐಗೆ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಸಚಿವರು ತಿಳಿಸಿದ್ದರು.