ಬೆಂಗಳೂರು, ಫೆ.10 : ರಾಜ್ಯದಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಒಂದು ದಿನದ ನವಜಾತ ಶಿಶುವನ್ನು ಭೀಕರವಾಗಿ ಕೊಲೆ (murder) ಮಾಡಿರುವ ಘಟನೆ ಬೆಂಗಳೂರಿನ (Bengaluru Crime News) ಶೇಷಾದ್ರಿಪುರಂ ರೈಲ್ವೆ ಪಾರ್ಲರ್ ರಸ್ತೆಯಲ್ಲಿ ನಡೆದಿದೆ. ಶೇಷಾದ್ರಿಪುರಂ ರೈಲ್ವೆ ಪಾರ್ಲರ್ ರಸ್ತೆಯ ಬದಿಯ ಕಸದ ತೊಟ್ಟಿಯಲ್ಲಿ ನವಜಾತ (newborn child) ಗಂಡು ಶಿಶುವಿನ ಶವ ಪತ್ತೆಯಾಗಿದೆ.
ಮಗುವಿನ ಮೃತದೇಹವನ್ನು ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋಗಳನ್ನು ಕಲೆಹಾಕಿ ಆರೋಪಿಗಳ ಜಾಡು ಸಂಗ್ರಹಿಸಲಾಗುತ್ತಿದೆ.
ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, ನಗದು ಕಳವು!
ಬೆಂಗಳೂರು: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದರು. ಆ ವೇಳೆ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಇದ್ದ ಕೈಚೀಲವನ್ನು ತಂದಿದ್ದು, ತೆರಳುವಾಗ ಅದನ್ನು ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.
ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ ವಿಧಾನಸೌಧ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ.