Self Harming: ಮದ್ಯ ಪಾರ್ಟಿ ಬಳಿಕ ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು
ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಮದ್ಯ ಸೇವಿಸಿದ್ದ ಹಿನ್ನೆಲೆಯಲ್ಲಿ ಬಾಲಕನಿಗೆ ಮನೆಗೆ ಹೋಗಲು ಭಯವಾಗಿದ್ದು, ಅಪಾರ್ಟ್‌ಮೆಂಟ್ 7ನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದ. ಅಪ್ರಾಪ್ತ ಬಾಲಕನಿಗೆ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಪಬ್ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಫೆ.03 : ಬೆಂಗಳೂರಿನಲ್ಲಿ (Bengaluru crime news) ಘೋರವಾದ ದುರಂತವೊಂದು ಸಂಭವಿಸಿದೆ. ಪಬ್‌ವೊಂದರಲ್ಲಿ ಮದ್ಯ ಸೇವಿಸಿದ ನಂತರ ಮನೆಗೆ ಹೋಗಲು ಹೆದರಿದ ವಿದ್ಯಾರ್ಥಿಯೊಬ್ಬ (Student) ಕಟ್ಟಡದ 7ನೇ ಮಹಡಿಯಿಂದ ಹಾರಿ ಮೃತಪಟ್ಟ (Self Harming) ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆರ್.ಆರ್ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಾಲಕ ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜ.31 ರಂದು ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಆರ್.ಆರ್ ನಗರದ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಮದ್ಯ ಸೇವಿಸಿದ್ದ ಬಾಲಕನನ್ನು ಆತನ ಸ್ನೇಹಿತ ವಿಷ್ಣುವರ್ಧನ್ ಸಮಾಧಿ ರಸ್ತೆಯಲ್ಲಿರುವ ಅಪಾಟ್೯ಮೆಂಟ್‌ವರೆಗೂ ಬಿಟ್ಟು ಹೋಗಿದ್ದ. ಆದರೆ ಮದ್ಯ ಸೇವಿಸಿದ್ದ ಹಿನ್ನೆಲೆಯಲ್ಲಿ ಬಾಲಕನಿಗೆ ಮನೆಗೆ ಹೋಗಲು ಭಯವಾಗಿದ್ದು, ಅಪಾರ್ಟ್‌ಮೆಂಟ್ 7ನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದ.
ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲು
ತನಿಖೆ ವೇಳೆ ಬಾಲಕ ಪಬ್‌ನಲ್ಲಿ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಅಪ್ರಾಪ್ತ ಬಾಲಕನಿಗೆ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಪಬ್ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ಜೆಜೆ ಕಾಯ್ದೆ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Murder Case: ಪಾರ್ಕಿಂಗ್ ವಿಚಾರ ಕೊಲೆಯಲ್ಲಿ ಅಂತ್ಯ, ಆಟೋ ನಿಲ್ಲಿಸುವ ಕುರಿತ ತಗಾದೆ ಸ್ನೇಹಿತನ ಜೀವ ತೆಗೆಯಿತು
ಜಲ ಮಂಡಳಿ ಪೈಪ್‌ಲೈನ್ ಚೇಂಬರ್‌ಗೆ ಬಿದ್ದು ಬಾಲಕ ಸಾವು
ಬೆಂಗಳೂರು: ಬೆಂಗಳೂರು ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಬಾಲಕ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.
ರಜನಿಕಾಂತ್ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದ. ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು.
ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್‌ನಲ್ಲಿ ಶವ ಪತ್ತೆಯಾಗಿದೆ. ಕಳೆದ ಹಲವು ದಿನಗಳಿಂದ ಸಂಪನ್ನು ಜಲಮಂಡಳಿ ಮುಚ್ಚದೇ ಬಿಡಲಾಗಿತ್ತು. ಬಾಲಕ ಓಡಾಡುವ ವೇಳೆ ಸಂಪ್‌ಗೆ ಬಿದ್ದು ಸಾವನ್ನಪ್ಪಿದ್ದಾನೆ. ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್‌ನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
ಉತ್ತರ ಪ್ರದೇಶ ಮರ್ಯಾದಾ ಹತ್ಯೆ: ಥೂ ಇವನೆಂಥಾ ಅಪ್ಪ?! ಕರೆಂಟ್ ಶಾಕ್ ನೀಡಿ ಮಗಳನೇ ಕೊಂದ ರಾಕ್ಷಸ