Bengaluru International Airport: ಬೆಂಗಳೂರು ವಿಮಾನ ನಿಲ್ದಾಣಕ್ಕೆ ‘ಎಸಿಐ’ನಿಂದ ಪ್ರತಿಷ್ಠಿತ ಮಾನ್ಯತೆ, ಇದನ್ನು ಪಡೆದ ದೇಶದ ಮೊದಲ ಏರ್‌ಪೋರ್ಟ್‌

ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕ ಪ್ರಯಾಣಿಕರ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ವಿಮಾನ ನಿಲ್ದಾಣದಲ್ಲಿ ಅಗತ್ಯ ಸೌಕರ್ಯ ಒದಗಿಸುವ ಎಇಎ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಇಎ ಮಾನ್ಯತೆ ಪಡೆಯಲು ಕಾರಣವಾಗಿದೆ.

bangalore airport
ಹರೀಶ್‌ ಕೇರ ಹರೀಶ್‌ ಕೇರ Jan 23, 2025 7:05 PM

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ (ಎಸಿಐ) ಕೊಡಮಾಡುವ “ಪ್ರವೇಶ ವರ್ಧಕ ಮಾನ್ಯತೆ” (ಎಇಎ) ಕಾರ್ಯಕ್ರಮದ ಅಡಿಯಲ್ಲಿ 1ನೇ ಹಂತದ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ (ACI award) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (Bengaluru international airport) ಪಾತ್ರವಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರು ಸುಲಲಿತವಾಗಿ ಸಂಚರಿಸಲು ಹಾಗೂ ಇತರ ಸೌಲಭ್ಯಗಳನ್ನು ಸರಳವಾಗಿ ಬಳಸಿಕೊಳ್ಳಲು ಸೂಕ್ತ ವ್ಯವಸ್ಥೆ ನಿರ್ಮಿಸಲಾಗಿದೆ. ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕ ಪ್ರಯಾಣಿಕರ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ವಿಮಾನ ನಿಲ್ದಾಣದಲ್ಲಿ ಅಗತ್ಯ ಸೌಕರ್ಯ ಒದಗಿಸುವ ಎಇಎ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಇಎ ಮಾನ್ಯತೆ ಪಡೆಯಲು ಕಾರಣವಾಗಿದೆ.

ಎಇಎ ಮಾನ್ಯತೆಯು ಜಾಗತಿಕ ಬೇಡಿಕೆಗೆ ಅನುಗುಣವಾಗಿ ಸಾರ್ವತ್ರಿಕ ವಿನ್ಯಾಸ, ಲಭ್ಯವಿರುವ ಸೌಲಭ್ಯಗಳ ಮೌಲ್ಯಮಾಪನ, ಸುಧಾರಣೆಗಳನ್ನು ಕಾರ್ಯಗತಗೊಳಿಸುವುದು ಮತ್ತು ಅಂತಾರಾಷ್ಟ್ರೀಯ ಗುಣಮಟ್ಟವನ್ನು ವಿಮಾನ ನಿಲ್ದಾಣದಲ್ಲಿ ರೂಢಿಗತಗೊಳಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಮೂರು ಪ್ರಗತಿಶೀಲ ಹಂತಗಳನ್ನು ಒಳಗೊಂಡಿರುವ “ಪ್ರವೇಶ ವರ್ಧಕ ಮಾನ್ಯತೆ”(AEA) ಕಾರ್ಯಕ್ರಮವು ವಿಮಾನ ನಿಲ್ದಾಣಗಳ ಕಾರ್ಯತಂತ್ರ, ನೀತಿ ನಿಯಮಗಳು ಮತ್ತು ಅವುಗಳಿಂದ ದೊರೆಯುವ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡುತ್ತದೆ. ಪ್ರಯಾಣಿಕರು, ಸಂದರ್ಶಕರು ಮತ್ತು ಸಿಬ್ಬಂದಿ ಸೇರಿದಂತೆ ವಿಮಾನ ನಿಲ್ದಾಣದ ಎಲ್ಲ ಬಳಕೆದಾರರ ಪ್ರಯಾಣ ಅನುಭವದ ಅಭಿಪ್ರಾಯವನ್ನು ಆಧರಿಸಿ ಈ ಮಾನ್ಯತೆಯನ್ನು ನೀಡಲಾಗುತ್ತದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಡಿಮೆ ಚಲನಶೀಲತೆ ಹೊಂದಿರುವ (PRM) ಮತ್ತು ದಿವ್ಯಾಂಗ ವ್ಯಕ್ತಿಗಳಿಗೆ (PwDs) ಅನುಗುಣವಾಗಿ ಸೌಲಭ್ಯ, ಸಾರಿಗೆ ಮತ್ತು ಇತರ ಸೇವೆಗಳನ್ನು ಒದಗಿಸುವ ಕುರಿತು ಸಮಿತಿಯೊಂದು ಮೀಸಲಾಗಿದ್ದು, ಇದು ವಿಮಾನ ನಿಲ್ದಾಣದಲ್ಲಿ ದೊರೆಯುವ ಸೇವೆಗಳ ಮೇಲ್ವಿಚಾರಣೆ ಮಾಡುತ್ತದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯ ಬೆಂಬಲ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಸಿಬ್ಬಂದಿಗಳಿಗೆ ಪೂರ್ವಭಾವಿ ತರಬೇತಿಯನ್ನು ನೀಡಲಾಗುತ್ತದೆ. ಜೊತೆಗೆ, ವಿಮಾನ ಪ್ರಯಾಣವನ್ನು ಎಲ್ಲರಿಗೂ ಒತ್ತಡ ಮುಕ್ತ ಮತ್ತು ಉಲ್ಲಾಸಮಯಗೊಳಿಸುವ ಕ್ರಮಗಳನ್ನು ಕೈಗೊಳ್ಳಲು ಸಹಕರಿಸುತ್ತದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಅವರು ಈ ಕುರಿತು ಮಾತನಾಡಿ, “ಎಸಿಐನಿಂದ ಪ್ರವೇಶ ವರ್ಧಕ ಮಾನ್ಯತೆ ದೊರೆತಿರುವುದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬರಿಗೂ ಸೂಕ್ತ ಸೌಲಭ್ಯ ಒದಗಿಸಲಾಗುತ್ತದೆ ಎಂಬುದನ್ನು ಪ್ರತಿಬಿಂಬಿಸುತ್ತದೆ. ಎಲ್ಲ ಟರ್ಮಿನಲ್‌ಗಳಲ್ಲಿ ನಮ್ಮ ಸಿಬ್ಬಂದಿಯನ್ನು ಸಬಲೀಕರಣಗೊಳಿಸಲು ಮತ್ತು ವಿಮಾನ ನಿಲ್ದಾಣದಲ್ಲಿನ ಇತರ ಸಂಸ್ಥೆಗಳ ಜೊತೆ ನಿರಂತರ ಸಹಯೋಗ ಸಾಧಿಸಲು ಕಳೆದ ಕೆಲವು ವರ್ಷಗಳಿಂದ ಹಲವಾರು ಉಪಕ್ರಮಗಳನ್ನು ಪರಿಚಯಿಸಿದ್ದೇವೆ. ವಿಮಾನ ನಿಲ್ದಾಣಕ್ಕೆ ಪ್ರತಿಯೊಬ್ಬರನ್ನೂ ಆತ್ಮೀಯವಾಗಿ ಸತ್ಕರಿಸುವ ನಮ್ಮ ಪ್ರಯತ್ನ ನಿರಂತರವಾಗಿ ಮುಂದುವರೆಯಲಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಇದೀಗ ಬೆಂಗಳೂರು ವಿಮಾನ ನಿಲ್ದಾಣ ಪಡೆದಿರುವ ಈ ಮಾನ್ಯತೆಯು ನಮ್ಮ ಇತರ ಕಾರ್ಯಕ್ರಮಗಳಾದ "ಬಿ-ಇನ್‌ಕ್ಲೂಡೆಡ್‌ ಮತ್ತು “ಸಹಾಯಕ ಸಾಧನ ನೀತಿ”ಗಳ ಮೂಲಕ ಮತ್ತಷ್ಟು ಬಲಗೊಳ್ಳಲಿದೆ. ಇದು ವೈವಿಧ್ಯಮಯ, ಎಲ್ಲರಿಗೂ ಸಮಾನ ಮತ್ತು ಎಲ್ಲರನ್ನೂ ಒಳಗೊಂಡ ಸಂಸ್ಥೆಯನ್ನು ರಚಿಸುವ ಮತ್ತು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವು 2022 ರಲ್ಲಿ ಸನ್‌ಫ್ಲಾವರ್‌ ಲ್ಯಾನ್ಯಾರ್ಡ್ ಯೋಜನೆಯನ್ನು ಪರಿಚಯಿಸಿದ್ದು, ಇದು ಗೋಚರಿಸದ ಅಂಗವೈಕಲ್ಯ ಹೊಂದಿರುವವರಿಗೆ ಅಗತ್ಯ ಸೌಲಭ್ಯ ನೀಡುವ ಉದ್ದೇಶವನ್ನು ಹೊಂದಿದೆ.

ಈ ಪ್ರಯತ್ನಗಳು ಸಂಚಾರ ಸಮಸ್ಯೆ ಮತ್ತು ದಿವ್ಯಾಂಗ ಹೊಂದಿರುವ ವ್ಯಕ್ತಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪ್ರಯಾಣದುದ್ದಕ್ಕೂ ಒದಗಿಸುವುದಾಗಿದೆ. ಜೊತೆಗೆ, ಬೆಂಗಳೂರು ವಿಮಾನ ನಿಲ್ದಾಣವು ವಿಮಾನಯಾನ ಕ್ಷೇತ್ರದಲ್ಲಿ ಸಂಚಾರ ಸಮಸ್ಯೆ ಮತ್ತು ದಿವ್ಯಾಂಗತೆ ಹೊಂದಿರುವ ವ್ಯಕ್ತಿಗಳ ಅನುಭವದ ಮಾನದಂಡವನ್ನು ಹೊಸ ಎತ್ತರಕ್ಕೆ ಏರಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: Aeroindia 2025: ಏರ್‌ ಶೋ ಹಿನ್ನೆಲೆ ಈ ದಿನಗಳಲ್ಲಿ ಬೆಂಗಳೂರು ಏರ್‌ಪೋರ್ಟ್‌ ವಿಮಾನ ಹಾರಾಟದಲ್ಲಿ ವ್ಯತ್ಯಯ

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?