Bengaluru International Film Festival: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಕನ್ನಡ, ಭಾರತೀಯ, ಏಷಿಯನ್ ಸಿನಿಮಾ ಸ್ಪರ್ಧಾ ವಿಭಾಗಗಳಿಗೆ ಚಲನಚಿತ್ರಗಳ ಆಹ್ವಾನ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Bengaluru International Film Festival) ಕನ್ನಡ, ಭಾರತೀಯ, ಏಷಿಯನ್ ಸಿನಿಮಾ ಸ್ಪರ್ಧಾ ವಿಭಾಗಗಳಿಗೆ ಚಲನಚಿತ್ರಗಳ ಆಹ್ವಾನಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

image-1e54961f-c7d8-4f67-ad3d-80ef7d185b8a.jpg
Profile Vishwavani News January 10, 2025
ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru International Film Festival), ಕರ್ನಾಟಕ ಸರ್ಕಾರದ ಮಹತ್ವದ ಸಾಂಸ್ಕೃತಿಕ ಹಬ್ಬ. ಕರ್ನಾಟಕ ಸರ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಗಳ ಮೂಲಕ 2025 ರ ಮಾರ್ಚ್ 1 ರಿಂದ 8ರ ವರೆಗೆ ಹಮ್ಮಿಕೊಂಡಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ʼಸರ್ವಜನಾಂಗದ ಶಾಂತಿಯ ತೋಟʼ ಎಂಬ ಘೋಷ ವಾಕ್ಯದಡಿ ಚಲನಚಿತ್ರೋತ್ಸವ ನಡೆಯಲಿದೆ.
ಎಂದಿನಂತೆ ಈ ಬಾರಿಯೂ ʼಕನ್ನಡ ಸಿನಿಮಾʼ ಸ್ಪರ್ಧೆ, ಭಾರತೀಯ ಚಿತ್ರಗಳನ್ನು ಪ್ರತಿನಿಧಿಸುವ ʼಚಿತ್ರಭಾರತಿʼ ಮತ್ತು ʼಏಷಿಯನ್ ಸಿನಿಮಾʼ ಸ್ಪರ್ಧಾ ವಿಭಾಗಗಳಿಗೆ ಆಯ್ಕೆಗಾಗಿ ಅರ್ಹ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Bengaluru International Film Festival: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಕಿಶೋರ್ ರಾಯಭಾರಿ
ʼಕನ್ನಡ ಸಿನಿಮಾ ಸ್ಪರ್ಧಾ ವಿಭಾಗʼ ದಲ್ಲಿಆಯ್ಕೆಗಾಗಿ ಸಲ್ಲಿಸಬೇಕಾದ ಕಥಾ ಚಿತ್ರಗಳು ಕನಿಷ್ಠ 70 ನಿಮಿಷದ ಅವಧಿಯಾಗಿದ್ದು, ಜನವರಿ 1, 2024 ರಿಂದ ಡಿಸೆಂಬರ್ 31, 2024 ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ನಿರ್ಮಾಣಗೊಂಡಿರಬೇಕು. ಕನ್ನಡ ಮತ್ತು ಕರ್ನಾಟಕ ರಾಜ್ಯದ ಯಾವುದೇ ಉಪಭಾಷೆಯಲ್ಲಿ ತಯಾರಾಗಿರುವ ಕಥಾ ಚಿತ್ರಗಳು, ಸ್ಪರ್ಧಾ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತವೆ.
ʼಚಿತ್ರಭಾರತಿʼ- ಭಾರತೀಯ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿಆಯ್ಕೆಗಾಗಿ ಸಲ್ಲಿಸಲಿರುವ ಚಿತ್ರಗಳು ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ನಿರ್ಮಾಣಗೊಂಡಿರಬೇಕು ಹಾಗೂ ಭಾರತದ ಯಾವುದೇ ಭಾಷೆಯ ಕಥಾ ಚಿತ್ರವಾಗಿದ್ದು, ಕನಿಷ್ಠ 70 ನಿಮಿಷಗಳ ಅವಧಿಯ ಚಿತ್ರಗಳು ಸ್ಪರ್ಧಾ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತದೆ.
ʼಏಷಿಯಾ ಸಿನಿಮಾ ಸ್ಪರ್ಧಾ ವಿಭಾಗʼ ಕ್ಕೆ, ಏಷಿಯಾದ ಯಾವುದೇ ದೇಶದಲ್ಲಿ, ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ತಯಾರಾದ, ಕನಿಷ್ಠ 70 ನಿಮಿಷಗಳ ಅವಧಿಯ ಚಲನಚಿತ್ರಗಳು ಸ್ಪರ್ಧಾತ್ಮಕ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತವೆ.
ʼಕನ್ನಡ ಚಲನಚಿತ್ರʼ, ʼಚಿತ್ರಭಾರತಿ - ಭಾರತೀಯ ಚಲನಚಿತ್ರʼ ಮತ್ತು ʼಏಷಿಯನ್‌ ಚಲನಚಿತ್ರʼ ವಿಭಾಗಕ್ಕೆ ಪ್ರವೇಶ ಬಯಸುವ ಭಾರತೀಯ ಭಾಷಾ ಚಲನಚಿತ್ರಗಳಿಗೆ, ಕೇಂದ್ರೀಯ ಚಲನಚಿತ್ರ ಪ್ರಮಾಣೀಕೃತ ಮಂಡಳಿ ನೀಡುವ ಪ್ರಮಾಣ ಪತ್ರದಲ್ಲಿ ನಮೂದಾಗುವ ದಿನಾಂಕವೇ ನಿರ್ಮಾಣದ ಮಾನದಂಡವಾಗುತ್ತದೆ.
ಈ ಸುದ್ದಿಯನ್ನೂ ಓದಿ | Winter Fashion 2025: ಚಳಿಗಾಲದ ಟಾಪ್ ಲಿಸ್ಟ್‌ಗೆ ಸೇರಿದ ಬ್ರೈಟ್ ಬಣ್ಣದ ಫ್ಯಾಷನ್‌ವೇರ್ಸ್!
ಅರ್ಜಿ ಸಲ್ಲಿಕೆ ಹೇಗೆ?
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗಗಳಲ್ಲಿ ಆಯ್ಕೆಗಾಗಿ ಚಲನಚಿತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಇದೇ ಜ.09, 2025 ರಿಂದ ಪ್ರಾರಂಭವಾಗಿದ್ದು, ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಸಲು www.biffes.org ಜಾಲತಾಣಕ್ಕೆ ಭೇಟಿ ನೀಡಿ. ಅರ್ಜಿಯೊಂದಿಗೆ ಸಿನಿಮಾಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನೂ ನೀಡಬೇಕು. ʼಕನ್ನಡ ಸಿನಿಮಾʼ ಮತ್ತು ʼಚಿತ್ರಭಾರತಿ - ಭಾರತೀಯ ಸಿನಿಮಾʼ ಸ್ಪರ್ಧಾ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಪ್ರತಿ ಚಿತ್ರಕ್ಕೂ ರೂ. 3,000/- ಪ್ರವೇಶ ಶುಲ್ಕವಿರುತ್ತದೆ. ಇಂಗ್ಲಿಷ್ ಉಪಶೀರ್ಷಿಕೆಗಳನ್ನೊಳಗೊಂಡ ಚಲನಚಿತ್ರದ ಆನ್‌ಲೈನ್ ಸ್ಕ್ರೀನರ್‌ನೊಂದಿಗೆ, ಆನ್‌ಲೈನ್‌ನಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ಜ.23, 2025 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ: +91 8904645529 ಅಥವಾ biffesblr@gmail.com & www.biffes.org ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ