ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಆರಂಭ

ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಕಳೆದ 14 ವರ್ಷಗಳಿಂದ ಜ್ಞಾನೇಂದ್ರ ಕರಗ ಹೊರುತ್ತಿದ್ದಾರೆ. ಏಪ್ರಿಲ್ 4 ರಿಂದ 14ರ ವರೆಗೂ ಕರಗ ಉತ್ಸವ ನಡೆಯಲಿದೆ.

ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಆರಂಭ

ಸಂಗ್ರಹ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 4, 2025 7:25 AM

ಬೆಂಗಳೂರು: ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಉತ್ಸವ ಇಂದಿನಿಂದ ಜರುಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏಪ್ರಿಲ್ 4 ರಿಂದ 14ರ ವರೆಗೂ ಕರಗ ಉತ್ಸವ ನಡೆಯಲಿದೆ. ಇಂದು ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಆರಂಭವಾಗಲಿವೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಕಳೆದ 14 ವರ್ಷಗಳಿಂದ ಜ್ಞಾನೇಂದ್ರ ಕರಗ ಹೊರುತ್ತಿದ್ದಾರೆ.

ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಏಪ್ರಿಲ್ 4 ರಂದು ರಥೋತ್ಸವ ಮತ್ತು ಧ್ವಜಾರೋಹಣ ನಡೆಯಲಿದೆ. ಏ.5 ರಿಂದ ಏ.8 ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ಇರಲಿದೆ. ಏ.9 ರಂದು ಆರತಿ ದೀಪಗಳು, ಏ.10 ರ ಗುರುವಾರ ಹಸಿ ಕರಗ, ಏ.11 ರಂದು ಹೊಂಗಲು ಸೇವೆ, ಏ.12 ಶನಿವಾರದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ, ಏ.13 ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ, ಏ.14 ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ಇರಲಿದೆ.

ಬೆಂಗಳೂರು ಕರಗ ಹಿನ್ನೆಲೆಯಲ್ಲಿ ಧರ್ಮರಾಯ ದೇವಸ್ಥಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಿನ್ನೆ ಬೆಳಗ್ಗೆಯಿಂದಲೇ ದೇವಾಲಯದ ಸ್ವಚ್ಛತಾ ಕಾರ್ಯ ನಡೆದಿದೆ. ಸಿಬ್ಬಂದಿಯು ದೇವಾಲಯ, ರಥ ಸೇರಿದಂತೆ ಸಂಪೂರ್ಣ ಶುಚಿಗೊಳಿಸಿದ್ದಾರೆ. ಕರಗ ಆಚರಣೆಗಳು ಇಂದು ರಾತ್ರಿ 10 ಗಂಟೆಗೆ ಶುರುವಾಗಲಿವೆ.

ಬೆಂಗಳೂರಿನ ಧರ್ಮರಾಯನ ದೇವಸ್ಥಾನ ಕರಗ ಮಹೋತ್ಸವದ ಕೇಂದ್ರ. ಬೆಂಗಳೂರು ಕರಗ ಒಂಬತ್ತು ದಿನಗಳ ಸಮಾರಂಭ. ಹೊಸವರ್ಷದ ಯುಗಾದಿ ಹಬ್ಬದ ಆನಂತರ ಸಪ್ತಮಿ ಅಥವಾ ಅಷ್ಟಮಿಯಂದು ದ್ವಜಾರೋಹಣದಿಂದ ಆರಂಭವಾಗಿ ಬಿದಿಗೆಯಂದಿನ ಧ್ವಜಾರೋಹಣದವರೆಗೆ ವಿವಿಧ ಕಾರ್ಯಕ್ರಮವಿರುತ್ತವೆ. ಇವುಗಳಲ್ಲಿ ದ್ವಾದಶಿಯಂದು ನಡೆಯುವ ಸಮುದಾಯದ ಆರತಿ, ತ್ರಯೋದಶಿಯಂದು ಹಸೀಕರಗದ ರಚನೆ ಮತ್ತು ಸ್ಥಾಪನೆ, ಚತುರ್ದಶಿಯಂದು ಪೊಂಗಲುಸೇವೆ ಮತ್ತು ಪೂರ್ಣಿಮೆಯಂದು ನಡೆಯುವ ಕರಗದ ಉತ್ಸವ ಪ್ರಮುಖ ಕಾರ್ಯಕ್ರಮಗಳಾಗಿವೆ.