Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತೊಂದರೆ, 70 ವಿಮಾನ ಹಾರಾಟಕ್ಕೆ ಅಡಚಣೆ, 22 ಫ್ಲೈಟ್ ರದ್ದು
kempegowda international Airport: ವಿಮಾನಗಳ ಸಾಫ್ಟ್‌ವೇರ್ ಸಂಬಂಧಿತ ತಾಂತ್ರಿಕ ಕಾರಣಗಳಿಂದಾಗಿ ಕೊಲ್ಕತ್ತಾ, ದೆಹಲಿ, ಮುಂಬೈ, ಡೆಹ್ರಾಡೂನ್, ವಾರಣಾಸಿ, ಅಹಮದಾಬಾದ್, ಪುಣೆ, ಚೆನೈ, ಭೂಪಾಲ್ ಸೇರಿದಂತೆ ಹಲವು ಪ್ರದೇಶಗಳಿಗೆ ತೆರಳಬೇಕಿದ್ದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಸರಿಯಾದ ಸಮಯಕ್ಕೆ ವಿಮಾನಗಳು ಹಾರಾಟ ನಡೆಸದ ಕಾರಣ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣ -
ದೇವನಹಳ್ಳಿ, ಡಿ. 03: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Bengaluru Airport) ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ತಡರಾತ್ರಿಯಿಂದ ಈವರೆಗೆ ಸುಮಾರು 70ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ (kempegowda international Airport) ಅಡಚಣೆ ಉಂಟಾಗಿದೆ. ಒಟ್ಟು 22 ವಿಮಾನಗಳ ಹಾರಾಟ ಈವರೆಗೆ ರದ್ದಾಗಿದ್ದು, 50ಕ್ಕೂ ಅಧಿಕ ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದೆ.
ವಿಮಾನಗಳ ಸಾಪ್ಟವೇರ್ ಸಂಬಂಧಿತ ತಾಂತ್ರಿಕ ಕಾರಣಗಳಿಂದಾಗಿ ಕೊಲ್ಕತ್ತಾ, ದೆಹಲಿ, ಮುಂಬೈ, ಡೆಹ್ರಾಡೂನ್, ವಾರಣಾಸಿ, ಅಹಮದಾಬಾದ್, ಪುಣೆ, ಚೆನೈ, ಭೂಪಾಲ್ ಸೇರಿದಂತೆ ಹಲವು ಪ್ರದೇಶಗಳಿಗೆ ತೆರಳಬೇಕಿದ್ದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಸರಿಯಾದ ಸಮಯಕ್ಕೆ ವಿಮಾನಗಳು ಹಾರಾಟ ನಡೆಸದ ಕಾರಣ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ನಿಗದಿತ ಸಮಯಕ್ಕೆ ಬಂದರೂ ಸರಿಯಾದ ಸಮಯಕ್ಕೆ ನಾವು ಪ್ರಯಾಣಿಸಬೇಕಿದ್ದ ಸ್ಥಳಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಮಾತ್ರವಲ್ಲದೆ ನಾಳೆಯೂ ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಮಾಜ್; ತನಿಖೆಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ
ಮೊನ್ನೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದ ವಿಪರೀತ ಚಳಿಯ ಪರಿಣಾಮ ಪ್ರತಿಕೂಲ ವಾತಾವರಣದಿಂದ ಬೆಂಗಳೂರು ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಿದ್ದ ಸುಮಾರು 81 ವಿಮಾನಗಳ ಹಾರಾಟ ವಿಳಂಬವಾಗಿತ್ತು.ಕೆಲ ವಿಮಾನಗಳು ಕಡಿಮೆ ಅವಧಿಯ ಮಟ್ಟಿಗೆ ವಿಳಂಬವಾದರೆ ಇನ್ನೂ ಕೆಲ ವಿಮಾನಗಳು ಗರಿಷ್ಠ 69 ನಿಮಿಷಗಳವರೆಗೂ ತಡವಾಗಿ ಹಾರಾಟ ಆರಂಭಿಸಿತ್ತು. ನಾಗರಿಕ ವಿಮಾನಯಾನ ನಿರ್ದೇಶನಾಲಯದ(DGCA) ಮಾನದಂಡದ ಪ್ರಕಾರ ವಿಮಾನ ವಿಳಂಬಕ್ಕೆ 15 ನಿಮಿಷಗಳ ಮಿತಿಯಿದ್ದು, ಹಾರಾಟ ನಡೆಸಬೇಕಿದ್ದ 81 ವಿಮಾನಗಳ ಪೈಕಿ 33 ವಿಮಾನಗಳು ಮಾತ್ರ ಈ ಮಿತಿಯನ್ನು ದಾಟಿದ್ದವು. ದಟ್ಟ ಮಂಜಿನ ಕಾರಣಕ್ಕೆ ಮಂಗಳೂರು ಮತ್ತು ದೆಹಲಿಯಿಂದ ಬರುತ್ತಿದ್ದ ವಿಮಾನಗಳ ಸಂಚಾರ ಮಾರ್ಗ ಬದಲಾವಣೆ ಕೂಡ ಮಾಡಲಾಗಿತ್ತು.