ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Assault Case: ಸೀರೆ ಕಳವು ಆರೋಪಿಸಿ ಮಹಿಳೆಗೆ ಬೂಟುಗಾಲಿನಲ್ಲಿ ಒದ್ದ ಇಬ್ಬರ ಬಂಧನ

Bengaluru: ನಗರದ ಅವೆನ್ಯೂ ರಸ್ತೆಯ ಬಟ್ಟೆ ಅಂಗಡಿಯೊಂದರಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಅಮಾನುಷ ಹಲ್ಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿಯ ಮಾಲೀಕನ ಮೇಲೆ ಕೇಸ್​ ದಾಖಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಜನರ ಆಕ್ರೋಶ ಹೆಚ್ಚಾಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.

ಸೀರೆ ಕಳವು ಆರೋಪಿಸಿ ಮಹಿಳೆಗೆ ಬೂಟುಗಾಲಿನಲ್ಲಿ ಒದ್ದ ಇಬ್ಬರ ಬಂಧನ

-

ಹರೀಶ್‌ ಕೇರ ಹರೀಶ್‌ ಕೇರ Sep 26, 2025 10:06 AM

ಬೆಂಗಳೂರು: ಅಂಗಡಿಯಲ್ಲಿ ಸೀರೆ ಕಳವು (saree theft) ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರನ್ನು (Bengaluru news) ನಡು ರಸ್ತೆಯಲ್ಲಿ ಬೂಟ್ ಕಾಲಿನಲ್ಲಿ ಒದ್ದು (Assault cse) ಕ್ರೌರ್ಯ ಮೆರೆದ ಬಟ್ಟೆ ಅಂಗಡಿ ಮಾಲೀಕ ಹಾಗೂ ಇನ್ನೊಬ್ಬನಿಗೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಕೇಸ್​ ದಾಖಲು ಮಾಡಲು ಸೂಚನೆ ನೀಡಿದ್ದು, ಇದೀಗ ಮಾಲೀಕ ಸೇರಿ ಮತ್ತೊಬ್ಬನನ್ನು ಬಂಧಿಸಲಾಗಿದೆ. ಬಟ್ಟೆ ಅಂಗಡಿ ಮಾಲೀಕ ಉಮೇದ್ ರಾಮ್ ಮತ್ತು ಮತ್ತೊಬ್ಬ ಮಹೇಂದ್ರ ಶರ್ಮಾ ಎಂಬಿಬ್ಬರನ್ನು ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.

ನಗರದ ಅವೆನ್ಯೂ ರಸ್ತೆಯ ಬಟ್ಟೆ ಅಂಗಡಿಯೊಂದರಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಅಮಾನುಷ ಹಲ್ಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿಯ ಮಾಲೀಕನ ಮೇಲೆ ಕೇಸ್​ ದಾಖಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಜನರ ಆಕ್ರೋಶ ಹೆಚ್ಚಾಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.



ಅವೆನ್ಯೂ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಖರೀದಿಗೆ ತೆರಳಿದ್ದ ಮಹಿಳೆ, ಸೀರೆ ಕಳವು ಮಾಡಿದ್ದಾಳೆ ಎಂದು ಆರೋಪಿಸಿ ಅಂಗಡಿಯಿಂದ ಹೊರಗೆಳೆದು ತಂದು ಹಲ್ಲೆ ನಡೆಸಿ, ಬೂಟುಗಾಲಿನಲ್ಲಿ ಒದ್ದಿದ್ದರು. ಆಕೆಯ ಮಗನ ಮುಂದೆಯೇ ಉಮೇದ್ ರಾಮ್ ಮತ್ತು ಮಹೇಂದ್ರ ಶರ್ಮಾ ವಿಕೃತವಾಗಿ ನಡೆದುಕೊಂಡಿದ್ದರು. ಈ ಘಟನೆಯನ್ನು ಯಾರೋ ಚಿತ್ರೀಕರಿಸಿ, ಅವೆನ್ಯೂ ರಸ್ತೆಯ ವ್ಯಾಪಾರಿಗಳ ಗ್ರೂಪ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದರು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಿಂದ ತೀವ್ರ ಖಂಡನೆ ವ್ಯಕ್ತವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳು ಆರಂಭದಲ್ಲಿ ಮಹಿಳೆಯ ವಿರುದ್ಧ ದೂರು ನೀಡಿದ್ದರು. ಆದರೆ, ವಿಡಿಯೋ ವೈರಲ್ ಆದ ನಂತರ ಸತ್ಯ ಬಯಲಿಗೆ ಬಂದಿದೆ.

ಇದನ್ನೂ ಓದಿ: Kalash Stolen: ಚಿನ್ನ, ವಜ್ರ ಖಚಿತ ಬರೋಬ್ಬರಿ 1ಕೋಟಿ ರೂ. ಮೌಲ್ಯ ಕಲಶ ಕಳವು- ಲೋಕಸಭಾ ಸ್ಪೀಕರ್ ಇದ್ದ ಕಾರ್ಯಕ್ರಮದಲ್ಲೇ ಕಳ್ಳತನ