Bengaluru News: ಸೆಪ್ಟೆಂಬರ್ 6ರಿಂದ 12ರವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Power Outage: ಬೆಂಗಳೂರು ನಗರದ 66/11 ಕೆ.ವಿ. ಬಾಣಸವಾಡಿಯ ಶಕ್ತಿ ಪರಿವರ್ತಕ-3ರಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸೆ. 6ರಿಂದ ಸೆ. 12ರವರೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿವಿಧೆಡೆ ಮಧ್ಯಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಸಾಂದರ್ಭಿಕ ಚಿತ್ರ. -

ಬೆಂಗಳೂರು: 66/11 ಕೆ.ವಿ. ಬಾಣಸವಾಡಿಯ ಶಕ್ತಿ ಪರಿವರ್ತಕ-3ರಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸೆ. 6ರಿಂದ ಸೆ. 12ರವರೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿವಿಧೆಡೆ ಮಧ್ಯಂತರವಾಗಿ ವಿದ್ಯುತ್ ವ್ಯತ್ಯಯ (Power Outage) ಉಂಟಾಗುವುದು ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: 7ನೇ ಎ ಮತ್ತು 9ನೇ ಮೆನ್, ಎಚ್‌ಆರ್‌ಬಿಆರ್ ಲೇಔಟ್, ಎಚ್‌ಆರ್‌ಬಿಆರ್ ಲೇಔಟ್ 2ನೇ ಬ್ಲಾಕ್, ಟಿಎನ್‌ಎಸ್ ಲೇಔಟ್, ರಾಜಕುಮಾರ್ ಪಾರ್ಕ್, ಕುಳ್ಳಪ್ಪ ಸರ್ಕಲ್, ಬಂಜಾರಾ ಲೇಔಟ್, ಬಂಜಾರಾ ಆರ್ಕೇಡ್, ಟ್ರಿನಿಟಿ ಎನ್‌ಕ್ಲೇವ್, ಆರ್‌ಕೆಬಿಆರ್ ಎನ್‌ಕ್ಲೇವ್, ಅಗಾರ ಲೇಕ್, ಮಂಜುನಾಥ್ ನಗರ, ಆಂದ್ರಾ ಕಾಲನಿ, ಭಾಗಶಃ ಪುಣ್ಯಭೂಮಿ ಲೇಔಟ್, ರಿಚಸ್ ಗಾರ್ಡನ್, ಎಂ.ಆರ್. ರಿಚಸ್ ಗಾರ್ಡನ್, ವೆಸ್ಟ್ ರಿಚಸ್ ಗಾರ್ಡನ್, ಕಾರೇಕಲ್ ಗುಡ್ಡ, ಎನ್ಆರ್‌ಐ ಲೇಔಟ್ ಫೇಸ್ 1, ದೊಡ್ಡ ಗುಬ್ಬಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Kothalavadi Movie: ಸೆ.5ರಿಂದ ಅಮೇಜಾನ್ ಪ್ರೈಮ್‌ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ
ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿದೆ 1,425 ಹುದ್ದೆ
ಬೆಂಗಳೂರು: ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತದ 3ನೇ ಅತೀ ದೊಡ್ಡ ಗ್ರಾಮೀಣ ಬ್ಯಾಂಕ್ ಎನಿಸಿಕೊಂಡಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ (Karnataka Grameena Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ (Karnataka Grameena Bank Recruitment 2025). ಕ್ಲರ್ಕ್, ಅಸಿಸ್ಟಂಟ್ ಮ್ಯಾನೇಜರ್ ಸೇರಿ ಒಟ್ಟು 1,425 ಹುದ್ದೆಗಳಿವೆ (Bank Jobs). ಪದವಿ ವಿದ್ಯಾರ್ಹತೆ ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್ 21.
ಹುದ್ದೆಗಳ ವಿವರ ಮತ್ತು ಶೈಕ್ಷಣಿಕ ಅರ್ಹತೆ
ಆಫೀಸ್ ಅಸಿಸ್ಟಂಟ್ (ಕ್ಲರ್ಕ್)-800 ಹುದ್ದೆ, ವಿದ್ಯಾರ್ಹತೆ: ಪದವಿ
ಆಫೀಸರ್ ಸ್ಕೇಲ್-I (ಅಸಿಸ್ಟಂಟ್ ಮ್ಯಾನೇಜರ್)-500 ಹುದ್ದೆ, ವಿದ್ಯಾರ್ಹತೆ: ಪದವಿ
ಆಫೀಸರ್ ಸ್ಕೇಲ್-II (ಮ್ಯಾನೇಜರ್) 150 ಹುದ್ದೆ, ವಿದ್ಯಾರ್ಹತೆ: ಸಿಎ, ಪದವಿ, ಎಲ್‌ಎಲ್‌ಬಿ, ಎಂಬಿಎ
ವಯೋಮಿತಿ
ಆಯಾ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಜನರಲ್ / ಒಬಿಸಿ / ಇಡಬ್ಲ್ಯುಎಸ್ ಅಭ್ಯರ್ಥಿಗಳು 850 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಇಎಸ್‌ಎಂ / ಡಿಇಎಸ್‌ಎಂ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ
ಪ್ರಿಲಿಮಿನರಿ ಪರೀಕ್ಷೆ, ಮೇನ್ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪ್ರಿಲಿಮಿನರಿ ಪರೀಕ್ಷೆ ನವೆಂಬರ್ / ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಮೇನ್ ಪರೀಕ್ಷೆ ಡಿಸೆಂಬರ್ / ಫೆಬ್ರವರಿಯಲ್ಲಿ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ವಿಳಾಸ: karnatakagrameenabank.comಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ | Mahaan Movie: ʼಮಹಾನ್ʼ ಚಿತ್ರದ ಪ್ರಮುಖ ಪಾತ್ರದಲ್ಲಿ ʼಬಿಗ್ ಬಾಸ್ʼ ಖ್ಯಾತಿಯ ನಟಿ ನಮ್ರತಾ ಗೌಡ