ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಾ.16 ರಂದು ಬೆಂಗಳೂರಿನಲ್ಲಿ ಭಗವಾನ್‌ ರಮಣ ಮಹರ್ಷಿಗಳ ಕುರಿತು ವಿಶೇಷ ಉಪನ್ಯಾಸ, ಸಂಗೀತ ಕಾರ್ಯಕ್ರಮ

Bengaluru News: ರಮಣ ಮಹರ್ಷಿ ಸೆಂಟರ್‌ ಫಾರ್‌ ಲರ್ನಿಂಗ್‌ ಮತ್ತು ರಮಣಶ್ರೀ ಪ್ರತಿಷ್ಠಾನ ವತಿಯಿಂದ ಮಣಿ ಷಡಕ್ಷರಿ ಅವರ ಸ್ಮರಣಾರ್ಥ ಭಗವಾನ್‌ ರಮಣ ಮಹರ್ಷಿಗಳನ್ನು ಕುರಿತ ವಿಶೇಷ ಉಪನ್ಯಾಸಗಳು ಮತ್ತು ಸಂಗೀತ ಕಾರ್ಯಕ್ರಮವು ಮಾ.16 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರು ನಗರದ ಮೇಕ್ರಿ ಸರ್ಕಲ್‌ನಲ್ಲಿರುವ ರಮಣ ಮಹರ್ಷಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ಮಾ.16 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ, ಸಂಗೀತ ಕಾರ್ಯಕ್ರಮ

Profile Siddalinga Swamy Mar 15, 2025 10:11 PM

ಬೆಂಗಳೂರು: ರಮಣ ಮಹರ್ಷಿ ಸೆಂಟರ್‌ ಫಾರ್‌ ಲರ್ನಿಂಗ್‌ ಮತ್ತು ರಮಣಶ್ರೀ ಪ್ರತಿಷ್ಠಾನ ವತಿಯಿಂದ ಮಣಿ ಷಡಕ್ಷರಿ ಅವರ ಸ್ಮರಣಾರ್ಥ ಭಗವಾನ್‌ ರಮಣ ಮಹರ್ಷಿಗಳನ್ನು (Bhagavan Ramana Maharshi) ಕುರಿತ ವಿಶೇಷ ಉಪನ್ಯಾಸಗಳು ಮತ್ತು ಸಂಗೀತ ಕಾರ್ಯಕ್ರಮವು ಮಾ.16 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರು ನಗರದ (Bengaluru News) ಮೇಕ್ರಿ ಸರ್ಕಲ್‌ನಲ್ಲಿರುವ ರಮಣ ಮಹರ್ಷಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ಮಂಡ್ಯದ ಚಿನ್ಮಯ ಮಿಷನ್‌ನ ಮುಖ್ಯಸ್ಥ ಸ್ವಾಮಿ ಆದಿತ್ಯಾನಂದಜೀ ಅವರು ʼರಮಣ ಚಿಂತನʼ ಕುರಿತು ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಅ.ಭಾ.ಶ.ಸಾ.ಪ. ಅಧ್ಯಕ್ಷ ಡಾ.ಸಿ.ಸೋಮಶೇಖರ, ಖ್ಯಾತ ವಾಗ್ಮಿ ಹಿರೇಮಗಳೂರು ಕಣ್ಣನ್‌, ಮೈಸೂರಿನ ಸೇಂಟ್‌ ಫಿಲೋಮಿನಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ.ಕೃಷ್ಣೇಗೌಡ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಬಳಿಕ ಮಧ್ಯಾಹ್ನ 12.50 ಕ್ಕೆ ರಮಣಾಂಜಲಿ ತಂಡದಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | BOB Recruitment 2025: ಬ್ಯಾಂಕ್‌ ಆಫ್‌ ಬರೋಡಾದ 518 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ