ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru News: ವಂದೇ ಭಾರತ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳ ಸಾವು

Bengaluru News: ಹೆಸರಘಟ್ಟ ರಸ್ತೆಯ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿಭಾಗದಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಸಮೀಪದಲ್ಲೇ ಇಬ್ಬರು ವಾಸವಾಗಿದ್ದರು. ಈ ಘಟನೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ರೈಲಿಗೆ ಆಕಸ್ಮಿಕವಾಗಿ ಸಿಲುಕಿ ಮೃತಪಟ್ಟಿದ್ದಾರೆಯೇ ಅಥವಾ ಆತ್ಮಹತ್ಯೆಯೇ ಎಂಬುದರ ಬಗ್ಗೆ ತನಿಖೆ ನಡೆದಿದೆ.

ವಂದೇ ಭಾರತ್‌ ರೈಲು- ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಬೆಂಗಳೂರಲ್ಲಿ (Bengaluru news) ಘೋರ ಘಟನೆಯೊಂದು ನಡೆದಿದೆ. ವಂದೇ ಭಾರತ್ ರೈಲಿಗೆ (Vande Bharat train) ಸಿಲುಕಿ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು (Nursing students) ಮೃತಪಟ್ಟಿರುವ ಘಟನೆ ನಗರ ಹೊರವಲಯದ ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ನಡೆದಿದೆ. ಕೇರಳ ಮೂಲದ ಸ್ಟೇರ್ಲಿನ್ ಎಲ್ಲಾ ಶಾಜಿ (19) ಹಾಗೂ ಜಸ್ಟಿನ್ ಜೋಸೆಫ್ (20) ಮೃತ ದುರ್ದೈವಿಗಳು.

ಈ ಇಬ್ಬರು ರೈಲ್ವೆ ನಿಲ್ದಾಣಕ್ಕೆ ಮಧ್ಯಾಹ್ನ 2.30 ರ ವೇಳೆಗೆ ಬಂದಿದ್ದರು. ಅದೇ ವೇಳೆ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ ಸಿಲುಕಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೆಸರಘಟ್ಟ ರಸ್ತೆಯ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿಭಾಗದಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಸಮೀಪದಲ್ಲೇ ಇಬ್ಬರು ವಾಸವಾಗಿದ್ದರು. ಈ ಘಟನೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ರೈಲಿಗೆ ಆಕಸ್ಮಿಕವಾಗಿ ಸಿಲುಕಿ ಮೃತಪಟ್ಟಿದ್ದಾರೆಯೇ ಅಥವಾ ಆತ್ಮಹತ್ಯೆಯೇ ಎಂಬುದರ ಬಗ್ಗೆ ತನಿಖೆ ನಡೆದಿದೆ. ರೈಲ್ವೆ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಬೈಕ್‌ಗಳ ನಡುವೆ ಭೀಕರ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

ಮನೆ ಕಳ್ಳತನ ಮಾಡುತ್ತಿದ್ದವರ ಬಂಧನ

ಬೆಂಗಳೂರಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ ಪೊಲೀಸರು ಸುಮಾರು 72 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ವಿಶ್ವಪ್ರಿಯ ಲೇಔಟ್ ನಿವಾಸಿಯೊಬ್ಬರು ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ.

ಕದ್ದ ಚಿನ್ನವನ್ನು ಕೋಲಾರ ಗೋಲ್ಡ್ ಫೀಲ್ಡ್ಸ್(ಕೆಜಿಎಫ್) ನಲ್ಲಿರುವ ಮೂರು ಗಿರವಿ ಅಂಗಡಿಗಳಲ್ಲಿ ಒತ್ತೆ ಇಟ್ಟಿರುವುದನ್ನು ಆರೋಪಿಗಳು ಬಹಿರಂಗಪಡಿಸಿದ್ದಾರೆ. ವಾರಗಳ ಕಾಲ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಮತ್ತು ಗಿರವಿ ವಹಿವಾಟುಗಳನ್ನು ಪತ್ತೆಹಚ್ಚಿದ ನಂತರ, ಮಾಹಿತಿದಾರರ ಮಾಹಿತಿಯ ಆಧಾರದ ಮೇಲೆ ಆಗಸ್ಟ್ 6 ರಂದು ಬೇಗೂರು ಸರೋವರದ ಕೋಲಿಯ ಬಳಿ ಪೊಲೀಸರು ಶಂಕಿತನನ್ನು ಬಂಧಿಸಿದ್ದರು.

ಹರೀಶ್‌ ಕೇರ

View all posts by this author