ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮದುವೆ ಆಮಿಷ ಒಡ್ಡಿ ಬೆಂಗಳೂರಿನ ವಿವಾಹಿತ ಮಹಿಳೆಯಿಂದ ಬೈಕ್, ಐಫೋನ್ ಪಡೆದು ಹೈದರಾಬಾದ್‌ನ ಪ್ರಿಯಕರ ತಾಹೀರ್ ಪರಾರಿ

Benagaluru News: ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಬೆಂಗಳೂರಿನ ವಿಚ್ಛೇದಿತ ಮಹಿಳೆಯ ನಂಬಿಕೆ ಗಳಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಹೈದರಾಬಾದ್‌ನ ವ್ಯಕ್ತಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಶೇಖ್ ಮೊಹಮ್ಮದ್ ತೈಯೀಬ್ ಅಲಿಯಾಸ್ ತಾಹೀರ್ ಎಂದು ಗುರುತಿಸಲಾಗಿದೆ

ದೈಹಿಕ ಸಂಪರ್ಕ ಬೆಳೆಸಿ ವಿವಾಹಿತ ಮಹಿಳೆಗೆ ವಂಚನೆ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Nov 15, 2026 6:03 PM

ಬೆಂಗಳೂರು, ನ. 15: ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಬೆಂಗಳೂರಿನ ವಿಚ್ಛೇದಿತ ಮಹಿಳೆಯ ನಂಬಿಕೆ ಗಳಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಹೈದರಾಬಾದ್‌ನ ವ್ಯಕ್ತಿ ಇದೀಗ ತಲೆಮರೆಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ವಂಚನೆ ದೂರು ದಾಖಲಿಸಿದ್ದಾರೆ. ಸದ್ಯ ಆತ ಸಂಪರ್ಕ ಕಡಿತಗೊಳಿಸಿ ನಾಪತ್ತೆಯಾಗಿದ್ದಾನೆ. ಆರೋಪಿಯನ್ನು ಶೇಖ್ ಮೊಹಮ್ಮದ್ ತೈಯೀಬ್ ಅಲಿಯಾಸ್ ತಾಹೀರ್ ಎಂದು ಗುರುತಿಸಲಾಗಿದೆ (Benagaluru News). ತಾಹಿರ್‌ ತನ್ನಿಂದ ಐಫೋನ್‌, ಬೈಕ್‌ ಸೇರಿ ಬೆಲೆಬಾಳುವ ವಸ್ತುಗಳನ್ನು ಉಡುಗೊರೆಯಾಗಿ ಪಡೆದಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆ ವೃತ್ತಿಯಲ್ಲಿ ಆರ್ಕಿಟೆಕ್ಟ್ ಆಗಿದ್ದು, ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಆ ಮಹಿಳೆಗೆ ಸುಮಾರು 20 ವರ್ಷಗಳ ಹಿಂದೆ ಮದುವೆಯಾಗಿತ್ತು. ಇಬ್ಬರು ಮಕ್ಕಳಿರುವ ಈ ಮಹಿಳೆ, ಪತಿಯೊಂದಿಗಿನ ಭಿನ್ನಾಭಿಪ್ರಾಯದಿಂದ 2026ರಲ್ಲಿ ವಿಚ್ಛೇದನ ಪಡೆದಿದ್ದರು. ಈಗ ಕೆ.ಜಿ. ಹಳ್ಳಿ ಪ್ರದೇಶದಲ್ಲಿ ವಾಸವಾಗಿದ್ದಾರೆ.

6 ತಿಂಗಳ ಹಿಂದೆ ತಾಹೀರ್‌ ಪರಿಚಯ

ಮೇಯಲ್ಲಿ ಬಸ್ ನಿಲ್ದಾಣದಲ್ಲಿ ತಾಹೀರ್ ಪರಿಚಯವಾಗಿತ್ತು. ಆರಂಭದಲ್ಲಿ ಸ್ನೇಹದಿಂದ ಶುರುವಾದ ಇವರ ಒಡನಾಟ ಕ್ರಮೇಣ ಪ್ರೀತಿಗೆ ತಿರುಗಿತ್ತು. ಆತನನ್ನು ಸಂಪೂರ್ಣ ನಂಬಿದ್ದ ಮಹಿಳೆ ಸರ್ವಸ್ವವನ್ನೂ ಅರ್ಪಿಸಿಕೊಂಡಿದ್ದರು. ಆದರೆ ಇದೀಗ ಆತನ ನಿಜ ಬಣ್ಣ ಬಯಲಾಗಿದೆ.

ಮದುವೆಯ ಭರವಸೆ ನೀಡಿದ್ದ ತಾಹೀರ್‌ ವಂಚಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಪ್ರೀತಿಯಲ್ಲಿದ್ದ ಅವಧಿಯಲ್ಲಿ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ದುಬಾರಿ ಬೈಕ್ ಮತ್ತು ಐಫೋನ್ ಉಡುಗೊರೆಯಾಗಿ ಪಡೆದಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ: ಕೆಎಸ್‌ಆರ್‌ಟಿಸಿ ಕಂಡಕ್ಟರ್ ವಿರುದ್ಧ ಮಹಿಳೆಯಿಂದ ದೂರು

ಮೊಬೈಲ್‌ ಸ್ವಿಚ್‌ ಆಫ್‌

ಸದ್ಯ ತಾಹೀರ್‌ ಸಂಪರ್ಕಕ್ಕೆ ಸಿಗುತ್ತಿಲ್ಲ. ಆತನ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ ಎಂದು ಮಹಿಳೆ ಹೇಳಿದ್ದಾರೆ. ಮದುವೆಯಾಗಲು ಸಾಧ್ಯವಿಲ್ಲ ಎಂದು ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೈದರಾಬಾದ್‌ಗೂ ತೆರಳಿ ವಿಚಾರಿಸಿದರೂ ಆತನ ಸುಳಿವು ಪತ್ತೆಯಾಗಿಲ್ಲವಂತೆ. ಈ ಹಿಂದೆ ಆತ ತಮ್ಮ ಖಾಸಗಿ ಫೋಟೊವನ್ನು ವೈರಲ್‌ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ ಎನ್ನಲಾಗಿದೆ. ಸದ್ಯ ಪ್ರಕರಣ ಕೈಗೆತ್ತಿಕೊಂಡಿರುವ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ಕ್ರೈಂ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.