ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರು ಉತ್ತರ ನಗರ ಪಾಲಿಕೆ ಫೋನ್-ಇನ್ ಕಾರ್ಯಕ್ರಮ; ನಾಗರಿಕರ ಸಮಸ್ಯೆಗೆ ಆಯುಕ್ತರಿಂದ ಸ್ಪಂದನೆ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳನ್ನು ಆಲಿಸಿ, ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಇಂದು ಬೆಳಿಗ್ಗೆ 7 ಗಂಟೆಯಿಂದ ಅಮೃತಹಳ್ಳಿ ಮುಖ್ಯ ರಸ್ತೆಯಲ್ಲಿರುವ ನಗರ ಪಾಲಿಕೆಯ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಫೋನ್–ಇನ್ ಕಾರ್ಯಕ್ರಮ ನಡೆಯಿತು. ನಾಗರಿಕರಿಂದ ಬಂದಂತಹ ದೂರುಗಳಿಗೆ ತಕ್ಷಣ ಸ್ಪಂದಿಸಿ, ಇರುವ ಸಮಸ್ಯೆಗಳನ್ನು ಬಗೆಹರಿಸಲು ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಗ್ರಹ ಚಿತ್ರ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳನ್ನು ಆಲಿಸಿ, ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಇಂದು ಬೆಳಿಗ್ಗೆ 7 ಗಂಟೆಯಿಂದ ಅಮೃತಹಳ್ಳಿ ಮುಖ್ಯ ರಸ್ತೆಯಲ್ಲಿರುವ ನಗರ ಪಾಲಿಕೆಯ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಫೋನ್–ಇನ್ ಕಾರ್ಯಕ್ರಮ ನಡೆಯಿತು. ನಾಗರಿಕರಿಂದ ಬಂದಂತಹ ದೂರುಗಳಿಗೆ ತಕ್ಷಣ ಸ್ಪಂದಿಸಿ, ಇರುವ ಸಮಸ್ಯೆಗಳನ್ನು ಬಗೆಹರಿಸಲು ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ವಾರ್ಡುಗಳಿಂದ ತ್ಯಾಜ್ಯ ಸಮಸ್ಯೆ, ಬೀದಿ ದೀಪಗಳ ಸಮಸ್ಯೆ, ರಸ್ತೆ ಗುಂಡಿಗಳನ್ನು ಮುಚ್ಚುವುದು, ಇ-ಖಾತಾ ಸಮಸ್ಯೆ, ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಸೇರಿದಂತೆ ಇನ್ನಿತರೆ ದೂರುಗಳನ್ನು ಖುದ್ದಾಗಿ ಆಲಿಸಿ, ಅವುಗಳ ತ್ವರಿತ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಬೆಂಗಳೂರು ಉತ್ತರ ನಗರ ಪಾಲಿಕೆಯಲ್ಲಿ ಸೆಪ್ಟೆಂಬರ್ 26ರಿಂದ ಪ್ರಾರಂಭಿಸಿರುವ ಫೋನ್-ಇನ್ ಕಾರ್ಯಕ್ರಮಕ್ಕೆ ನಾಗರಿಕರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಕಳೆದ 28 ವಾರಗಳಲ್ಲಿ ಒಟ್ಟು 1626 ಅಹವಾಲುಗಳು* ದಾಖಲಾಗಿದ್ದು, ಅವುಗಳಲ್ಲಿ 1130 ಅಹವಾಲುಗಳಿಗೆ ಸೂಕ್ತ ಕ್ರಮ ಕೈಗೊಂಡು ಇತ್ಯರ್ಥಪಡಿಸಲಾಗಿದೆ. ಇತರೆ ನಗರ ಪಾಲಿಕೆಗಳು ಹಾಗೂ ಇಲಾಖೆಗಳ ಸಂಬಂಧಿಸಿದ ದೂರುಗಳನ್ನು ಸಂಬಂಧಪಟ್ಟವರಿಗೆ ರವಾನಿಸಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇನ್ನು ಬಾಕಿ ಉಳಿದ 357 ದೂರುಗಳನ್ನು ತ್ವರಿತವಾಗಿ ಬಗೆಹರಿಸಲು ನಿರ್ದೇಶನ ನೀಡಲಾಗಿದೆ.

ನಾಗರಿಕರೊಂದಿಗೆ ನೇರವಾಗಿ ಮಾತನಾಡಿ, ಅವರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಅದಕ್ಕೆ ಕೂಡಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರತಿ ಶುಕ್ರವಾರವೂ ಆಯುಕ್ತರಿಂದ ಫೋನ್–ಇನ್ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇದಕ್ಕೆ ನಾಗರಿಕರಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು, ಈ ಕಾರ್ಯಕ್ರಮವನ್ನು ನಿರಂತರವಾಗಿ ಮುಂದುವರೆಸಿ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು.

ಇತ್ತೀಚೆಗಷ್ಟೆ ಯುಪಿಎಸ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ಭಾರತೀಯ ಆಡಳಿತ ಸೇವೆಯ 7 ಪ್ರೊಬೇಷನರಿ ಅಧಿಕಾರಿಗಳಾದ ಅಭಿನವ್ ಜೈನ್, ರಿತಿಕಾ ವರ್ಮಾ, ಸಮಿರ್ ಪ್ರಕಾಶ್ ಖೋಡೆ, ನಾಗೇಂದ್ರ ಬಾಬು ಕುಮಾರ್, ಪುರುರಾಜ್ ಸಿಂಗ್ ಸೋಲಂಕಿ, ರಮ್ಯಾ ರಂಗಸ್ವಾಮಿ, ಝುಫಿಷಾ ಹಕ್ ರವರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉತ್ತರ ನಗರ ಪಾಲಿಕೆಯಲ್ಲಿ ನಡೆಯುವ ಕಾರ್ಯವೈಖರಿಗಳು ಹಾಗೂ ಫೋನ್-ಇನ್‌ನಲ್ಲಿ ನಾಗರಿಕರೊಂದಿಗೆ ಸ್ಪಂದಿಸುವ ಕಾರ್ಯವನ್ನು ನೇರವಾಗಿ ವೀಕ್ಷಿಸಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.

ಫೋನ್-ಇನ್‌ನಲ್ಲಿ ನಾಗರಿಕರಿಂದ ಬಂದಂತಹ ಪ್ರಮುಖ ದೂರುಗಳು

  • ಬಿಇಎಲ್ ಕೆಳಸೇತುವೆಯಲ್ಲಿ ಬೀದಿ ದೀಪಗಳ ನಿರ್ವಹಣೆ ಮಾಡಲು ಮನವಿ.
  • ರಸ್ತೆ ಗುಂಡಿಗಳನ್ನು ಮುಚ್ಚಲು ಮನವಿ.
  • ಇ-ಖಾತಾದಲ್ಲಿ ಹೆಸರು ಬದಲಾವಣೆ ಸಮಸ್ಯೆ ಬಗೆಹರಿಸಲು ಮನವಿ.
  • ಅನಧಿಕೃತ ಕಟ್ಟಡಗಳ ಮೇಲೆ ಕ್ರಮ ಕೈಗೊಳ್ಳಲು ಮನವಿ.
  • ಮರದ ಕೊಂಬೆಗಳನ್ನು ಕತ್ತರಿಸಲು ಮನವಿ.

Vishakha Bhat Heggar

View all posts by this author