Physical Abuse: ಪಿಯುಸಿ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್
Bengaluru News: ಪಿಯುಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್‌ಟೇಬಲ್‌ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆರ್.ಟಿ. ನಗರ ಠಾಣೆಯ ಕಾನ್ಸ್ಟೇಬಲ್ ಯಮುನಾ ನಾಯಕ್ ಎನ್ನುವಾತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ಜ. 25: ಪಿಯುಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿ (Physical Abuse) ಇಡೀ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದ ಪೊಲೀಸ್ ಕಾನ್ಸ್‌ಟೇಬಲ್‌ನನ್ನು ಇದೀಗ ಬಂಧಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆರ್.ಟಿ. ನಗರ ಠಾಣೆಯ ಕಾನ್ಸ್ಟೇಬಲ್ ಯಮುನಾ ನಾಯಕ್ ಎನ್ನುವಾತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಇಡೀ ಡಿಪಾರ್ಟ್‌ಮೆಂಟೇ ತಲೆ ತಗ್ಗಿಸುವಂತೆ ಮಾಡಿದ್ದ (Bengaluru News). ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಭಾರಿ ಸಂಚಲನ ಸೃಷ್ಟಿಸಿತು. ಬೆಂಗಳೂರಿನಲ್ಲಿ ಯುವತಿಯರು ಬಿಡಿ ಯುವಕರೂ ಸುರಕ್ಷಿತರಲ್ಲ ಎನ್ನವ ಚರ್ಚೆ ಆರಂಭವಾಗಿತ್ತು.
ವಿದ್ಯಾರ್ಥಿಯ ದೂರಿನ ಮೇರೆಗೆ ಪೋಕ್ಸೋ ಕಾಯ್ಡೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಯಮುನಾ ನಾಯಕ್‌ನನ್ನು ಬಂಧಿಸಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ವೇಳೆ ಯಮುನಾ ನಾಯಕ್, ಪ್ರಥಮ ಪಿಯುಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಸದ್ಯ ಯಮುನಾ ನಾಯಕ್‌ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಮಹಿಳಾ ಇನ್ಫ್ಲುಯೆನ್ಸರ್‌ಗೆ ಹರಿಯಾಣದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್
ಕಿರುಕುಳಕ್ಕೆ ಬೇಸತ್ತ ಪೊಲೀಸ್ ಪೇದೆ ಆತ್ಮಹತ್ಯೆ
ಮಂಡ್ಯ: ಮದ್ದೂರು ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇತ್ತೀಚೆಗೆ ಸಂಭವಿಸಿತ್ತು. ರಮೇಶ್ (35) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಪೇದೆ. ನಗರದ ಪೊಲೀಸ್ ಠಾಣೆಯ ಹಿಂದೆ ಇರುವ ವಿಶ್ರಾಂತಿ ಗೃಹದಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮತ್ತೊಬ್ಬ ಪೇಡೆ ಕಿರುಕುಳ ನೀಡಿದ್ದರಿಂದಲೇ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ದೂರು ಕೇಳಿ ಬಂದಿತ್ತು.
ಈ ಬಗ್ಗೆ ಮೃತರ ಪತ್ನಿ ಪುಷ್ಪಲತಾ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ರಮೇಶ್ ಅವರಿಗೆ ಪೇದೆಯಾದ ಮಹೇಶ್ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಹಾಗೂ ಎಷ್ಟೋ ಬಾರಿ ಗಲಾಟೆ ಕೂಡ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದರು.