ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru Power Cut: ಗಮನಿಸಿ; ಫೆಬ್ರವರಿ 20, 21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

BESCOM News: 66/11 ಕೆವಿ ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ಟ್ರಾನ್ಸ್‌ಫಾರ್ಮರ್ - 2 ಬೇಗಳಲ್ಲಿ 66 ಕೆವಿ ಐಸೊಲೇಟರ್‌ನ ಕಾಮಗಾರಿ ಕೈಗೊಳ್ಳಲು ಮತ್ತು ಅಸ್ತಿತ್ವದಲ್ಲಿರುವ 66 ಕೆವಿ ಲೈನ್ ಮತ್ತು ಟ್ರಾನ್ಸ್‌ಫಾರ್ಮರ್ -2 ಬೇಗಳಲ್ಲಿ 66ಕೆವಿ ಐಸೊಲೇಟರ್‌ನ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಫೆ. 20 ಮತ್ತು 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ಮಧ್ಯಂತರವಾಗಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆ. 20, 21ರಂದು ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile
Siddalinga Swamy Feb 19, 2026 9:23 PM

ಬೆಂಗಳೂರು, ಫೆ.19: 66/11 ಕೆವಿ ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ (KPTCL) ವತಿಯಿಂದ ಟ್ರಾನ್ಸ್‌ಫಾರ್ಮರ್ - 2 ಬೇಗಳಲ್ಲಿ 66 ಕೆವಿ ಐಸೊಲೇಟರ್‌ನ ಕಾಮಗಾರಿ ಕೈಗೊಳ್ಳಲು ಮತ್ತು ಅಸ್ತಿತ್ವದಲ್ಲಿರುವ 66 ಕೆವಿ ಲೈನ್ ಮತ್ತು ಟ್ರಾನ್ಸ್‌ಫಾರ್ಮರ್ -2 ಬೇಗಳಲ್ಲಿ 66 ಕೆವಿ ಐಸೊಲೇಟರ್‌ನ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಫೆ. 20 ಮತ್ತು 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ಮಧ್ಯಂತರವಾಗಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಕೆಎಂಎಫ್, ಯಲಹಂಕ ನ್ಯೂ ಟೌನ್ 208, 407, 'ಬಿ' ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿ ನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ ಇತ್ಯಾದಿ. ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಕಾಗೆನ್‌ಅಡ್ಯಾನ್‌ ಕಾಲೇಜ್, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಖಾ ನಗರ ಇತ್ಯಾದಿ. ಪೂರ್ವಂಕರ RMZ ಗ್ಯಾಲೇರಿಯಾ, ತಿರುಮಲ ನಗರ, ಅತ್ತೂರು ಬಡಾವಣೆ 1ನೇ ಅಡ್ಡರಸ್ತೆಯಿಂದ 10ನೇ ಅಡ್ಡರಸ್ತೆ, ಎಸ್ಕಾರ್ಟ್ಸ್ ಬಡಾವಣೆ, ದೊಡ್ಡಬೆಟ್ಟಹಳ್ಳಿ, ಟಿಪ್ಪು ವೃತ್ತ, ಚಿಕ್ಕಬೆಟ್ಟಹಳ್ಳಿ, ಕಾವೇರಿ ಬಡಾವಣೆ, ಗಿರಿಧಾಮನಗರ, ಎಎಂಎಸ್ ಬಡಾವಣೆ, ಡಿಫೆನ್ಸ್‌ ಬಡಾವಣೆ, ಜೆಲ್ಲಿ ಯಂತ್ರ, ಎಂ.ಎಸ್. ಪಾಳ್ಯ, ಶಿಕ್ಷಕರ ಬಡಾವಣೆ, ಬೆಲ್ 6ನೇ ಬ್ಲಾಕ್, ಎಚ್‌ಎಂಟಿ 3ನೇ ಬ್ಲಾಕ್, ಎಚ್‌ಎಂಟಿ 4ನೇ ಬ್ಲಾಕ್, ಎಚ್‌ಎಂಟಿ 6ನೇ ಬ್ಲಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಉದಯೋನ್ಮುಖ ಕಲಾವಿದರಿಗಾಗಿ 'ಪರಮ್ ವಿಹಾರ': ಫೆಬ್ರವರಿ 22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

Bescom Helpline: ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ಬೆಂಗಳೂರು, ಅ.27: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್‌ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.

ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್‌ ಆ್ಯಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.