ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆ.4ರಂದು ಕರೆಂಟ್‌ ಇರಲ್ಲ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ 66/11 ಕೆವಿಎ ಎಲ್.ಆರ್.ಬಂಡೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.4ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆ.4ರಂದು ಕರೆಂಟ್‌ ಇರಲ್ಲ

ಸಾಂದರ್ಭಿಕ ಚಿತ್ರ. -

Profile
Siddalinga Swamy Feb 2, 2026 3:31 PM

ಬೆಂಗಳೂರು, ಫೆ.2: ಕೆಪಿಟಿಸಿಎಲ್ ವತಿಯಿಂದ (KPTCL) ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ 66/11 ಕೆವಿಎ ಎಲ್.ಆರ್.ಬಂಡೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.4ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಕಾವಲಬೈರಸಂದ್ರ, ಎಲ್.ಆರ್. ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರ, ವಿ. ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡೆನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ಬೆಂಗಳೂರು: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್‌ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.

ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್‌ ಆ್ಯಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.

ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳ ವಿವರ

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.

ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021

Star Fashion Review 2026: ಟ್ವೀಡ್‌ ಮಿನಿ ಸ್ಕರ್ಟ್‌ನಲ್ಲಿ ಜೆನ್‌ ಜಿ ಫ್ಯಾಷನ್‌ಗೆ ಸೈ ಎಂದ ಖುಷಿ ಕಪೂರ್‌

ವಿದ್ಯುತ್ ಸಮಸ್ಯೆಗಳ ಕುರಿತು ರೈತರು ಹಾಗೂ ಸಾರ್ವಜನಿಕರು ದೂರುಗಳನ್ನು ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಗಾಗಲಿ ಅಥವಾ ಸಂದೇಶಗಳನ್ನು ತಮ್ಮ ಪ್ರದೇಶಕ್ಕೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಂಖ್ಯೆಗಳಿಗಾಗಲಿ ಕಳುಹಿಸಿದ ಕೂಡಲೇ, 1912 ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.