Bengaluru Power Cut: ಜ. 28, 29 ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು ನಗರದ 66/11 ಕೆವಿ ಬಿ.ಎಂ.ಟಿ.ಸಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಜ.28 ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ವಿವರ ಇಲ್ಲಿದೆ.
ಬೆಂಗಳೂರು: 66/11 ಕೆವಿ ಬಿ.ಎಂ.ಟಿ.ಸಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ. 28 ಮತ್ತು ಜ. 29ರಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಜ. 28ರಂದು ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಟ್ಠಲ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ್, ಶಾಂತಿನಗರ, ಬಿಟಿಎಸ್ ರೋಡ್, ರಿಚ್ಮಂಡ್ ಸರ್ಕಲ್, ರೆಸಿಡೆನೆಸ್ಸಿ ರೋಡ್, ಸುಧಾಮನಗರ, ಕೆ.ಎಚ್. ರೋಡ್, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಲಾಲ್‌ಭಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶ.
ಈ ಸುದ್ದಿಯನ್ನೂ ಓದಿ | Bengaluru News: ವಿದ್ಯಾರ್ಥಿಗಳ ಸೃಜನಶೀಲ ಕಲಿಕೆಗೆ ಸಾಕ್ಷಿಯಾದ ಫ್ಯಾಷನ್ ಶೋ ವೇದಿಕೆ; ಉತ್ತಮ ವಿನ್ಯಾಸಕಾರರಿಗೆ ಪ್ರಶಸ್ತಿ
ಜ. 29ರಂದು ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಬೆಂಗಳೂರು ನಗರದ 66/11 ಕೆವಿ ಅರೇಹಳ್ಳಿ ಉಪಕೇಂದ್ರದಲ್ಲಿನ ಹಲವೆಡೆ ಜ. 29ರಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಅರೇಹಳ್ಳಿ, ಇಟ್ಟಮಡು, ಎಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿಜಿ ಲೇಔಟ್, ಭುವನೇಶ್ವರಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.