ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಮಹಾಲಕ್ಷ್ಮೀ ಲೇಔಟ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆ.29ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಎಚ್.ವಿ.ಕೆ. ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್. ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಖಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್‌ಲೈನ್ ರಸ್ತೆ, ಜೆ.ಸಿ. ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ. ಹಾಸ್ಪಿಟಲ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ. ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್. ಕಾಲೇಜು, ಬೆಲ್ ಅಪಾರ್ಟ್‌ಮೆಂಟ್, ಸ್ಯಾಂಡಲ್ ಸೋಪ್ ಫ್ಯಾಕ್ಟರಿ, ಯಶವಂತಪುರ ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Mehndi Trend 2025: ಕಥೆ ಹೇಳುವ ಬ್ರೈಡಲ್ ಮೆಹಂದಿ ಡಿಸೈನ್ಸ್
ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆಗೆ 41 ಕೆರೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ
ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ ವಾರ್ಡ್‌ಗಳಲ್ಲಿ ಮಾಡಿಕೊಳ್ಳಲಾಗಿದೆ.
ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಪ್ರತಿ ವರ್ಷದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಸ್ಯಾಂಕಿಕೆರೆ, ಹಲಸೂರು ಕರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ, ದೊಡ್ಡ ಬೊಮ್ಮಸಂದ್ರ ಕೆರೆ ಕೆರೆಗಳಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ಗಳ ಅಳವಡಿಕೆ, ನುರಿತ ಈಜುಗಾರರ/ಜೀವ ರಕ್ಷಕರ ನಿಯೋಜನೆ, ಸಿಸಿಟಿವಿ ಅಳವಡಿಕೆ, ವಿದ್ಯುತ್ ದೀಪಗಳ ಸೌಲಭ್ಯ ಹಾಗೂ ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇನ್ನು ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆ ಮಾಡಿದ ವೇಳೆ ಸಂಗ್ರಹವಾಗುವ ತ್ಯಾಜ್ಯವನ್ನು ಆಟೋ ಟಿಪ್ಪರ್‌ಗಳ ಮೂಲಕ ವಿಲೇವಾರಿ ಮಾಡಲಾಗುತ್ತದೆ.
ಯಡಿಯೂರು ಕೆರೆ ಕಲ್ಯಾಣಿಯಲ್ಲಿ ವಿಸರ್ಜನೆಗೆ ವ್ಯವಸ್ಥೆ: ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪೈಕಿ ದಿನಾಂಕ: 27-08-2025 ರಿಂದ 07-09-2025 ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಯಡಿಯೂರು ಕೆರೆಯಲ್ಲಿ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಹಲಸೂರು ಕೆರೆ ಅಂಗಳದ ಕಲ್ಯಾಣಿ: ಹಲಸೂರು ಕೆರೆಯ ಕಲ್ಯಾಣಿಯಲ್ಲಿ 27-08-2025 ರಿಂದ 30-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಹೂಳೆತ್ತುವ ಕಾರ್ಯವನ್ನು 01-09-2025, 02-09-2025, 08-09-2025 ಹಾಗೂ 09-09-2025 ರಂದು ನಿರ್ವಹಿಸುವ ಕಾರಣ ಯಾವುದೇ ರೀತಿಯ ಮೂರ್ತಿ ವಿಸರ್ಜನೆಗೆ ಅವಕಾಶ ಇರುವುದಿಲ್ಲ.
ಹೆಬ್ಬಾಳ ಕೆರೆ ಅಂಗಳದ ಕಲ್ಯಾಣಿ: ಹೆಬ್ಬಾಳ ಕೆರೆ ಅಂಗಳದ ಕಲ್ಯಾಣಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ 10-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಸ್ಯಾಂಕಿ ಕೆರೆ ಅಂಗಳದ ಕಲ್ಯಾಣಿ: ಸ್ಯಾಂಕಿ ಕೆರೆ ಅಂಗಳದ ಕಲ್ಯಾಣಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 04-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.
ಈ ಸುದ್ದಿಯನ್ನೂ ಓದಿ | 60 ಸಾವಿರ ವಿದ್ಯಾರ್ಥಿನಿಯರಿಗೆ ಸ್ಕಾಲರ್‌ಶಿಪ್ ಘೋಷಿಸಿದ ಕೆನರಾ ಬ್ಯಾಂಕ್; ಸತ್ಯ ಸಾಯಿ ಗ್ರಾಮದಲ್ಲಿ ವಿಶೇಷ ಗೌರವ