ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Bengaluru Power Cut: ಫೆ. 28ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 66/11 ಕೆ.ವಿ. ಪದ್ಮನಾಭನಗರ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ.28 ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಫೆ. 28ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಸಾಂದರ್ಭಿಕ ಚಿತ್ರ.

Profile Siddalinga Swamy Feb 25, 2025 7:14 PM

ಬೆಂಗಳೂರು: 66/11 ಕೆ.ವಿ. ಪದ್ಮನಾಭನಗರ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ.28 ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಎಂದು ಬೆಸ್ಕಾಂ ಮಾಹಿತಿ ನೀಡಿದೆ. ನಗರದ ಬನಗಿರಿ ನಗರ, ಜಯನಗರ 7ನೇ ಬ್ಲಾಕ್, ಬನಶಂಕರಿ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್, ಚನ್ನಮ್ಮನಕೆರೆ ಅಚ್ಚುಕಟ್ಟು, ಸರೋಜಾ ಕಾಂಪ್ಲೆಕ್ಸ್, ರಾಜೀವನಗರ, ಪದ್ಮನಾಭನಗರ, ಯಾರಬ್‌ನಗರ, ಟಾಟಾ ಸಿಲ್ಕ್ ಫಾರ್ಮ್, ಶಾಸ್ತ್ರಿನಗರ, ಎಸ್ 9 ಉಪವಿಭಾಗ ಆವರಣ, 9ನೇ ಮುಖ್ಯ ಬಾಟಾ ಶೋರೊಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ 3 ದಿನ ಕರಾವಳಿ ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ!

ಬೆಂಗಳೂರು: ರಾಜ್ಯಾದ್ಯಂತ ಒಣೆ ಹವೆಯ ವಾತಾವರಣ ( Karnataka Weather) ಮುಂದುವರಿದಿದ್ದು, ಮುಂದಿನ 6 ದಿನಗಳ ಕಾಲ ಇದೇ ರೀತಿಯ ಸ್ಥಿತಿ ಇರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 18°C ಇರಲಿದೆ. ಇನ್ನು ಮುಂದಿನ 3 ದಿನಗಳವರೆಗೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ (Heat wave) ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕರಾವಳಿ ಕರ್ನಾಟಕದ ಮೇಲೆ ಸಾಪೇಕ್ಷ ಆರ್ದ್ರತೆ (40-50%) ಮತ್ತು ಗರಿಷ್ಠ ಗಾಳಿಯ ಉಷ್ಣತೆ 37-39 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ಹೆಚ್ಚಾಗಿರುವುದರಿಂದ, ಮಾನವ ದೇಹವು ಗರಿಷ್ಠ ತಾಪಮಾನವನ್ನು (40-50) ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ಗ್ರಹಿಸುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿಸಿ ಗಾಳಿಯಿಂದ ರಕ್ಷಣೆಗೆ ಮುನ್ನೆಚ್ಚರಿಕಾ ಕ್ರಮ ಪಾಲಿಸಿ

ಹೆಚ್ಚಿನ ತಾಪಮಾನದಿಂದ ದೀರ್ಘಕಾಲದವರೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವ ಅಥವಾ ಬಿಸಿಲಲ್ಲಿ ಕೆಲಸ ಮಾಡುವ ಜನರಿಗೆ ಆರೋಗ್ಯ ಸಮಸ್ಯೆಗಳು ಕಾಡುವ ಸಾಧ್ಯತೆ ಇದೆ. ಮಕ್ಕಳು, ವೃದ್ಧರು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಬಿಸಿಲಿನಿಂದ ರಕ್ಷಣೆ ಪಡೆಯಲು ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಹವಾಮಾನ ಇಲಾಖೆ ಸಲಹೆ ನೀಡಿದೆ.

(ಎ) ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ವಿಶೇಷವಾಗಿ ಮಧ್ಯಾಹ್ನ 12 ರಿಂದ 3ರವರೆಗೆ

(ಬಿ) ಸಾಕಷ್ಟು ನೀರು ಕುಡಿಯಿರಿ ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ, ಬಾಯಾರಿಕೆ ಇಲ್ಲದಿದ್ದರೂ ಸಹ

(ಸಿ) ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಿ.

(ಡಿ) ನಿಮ್ಮ ತಲೆಯನ್ನು ಮುಚ್ಚಿಕೊಳ್ಳಿ: ಬಟ್ಟೆ, ಟೋಪಿ ಅಥವಾ ಛತ್ರಿ ಬಳಸಿ.

(ಇ) ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

(ಎಫ್) ದೇಹದಲ್ಲಿ ನಿರ್ಜಲೀಕರಣ ತಪ್ಪಿಸಲು ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ.

ಈ ಸುದ್ದಿಯನ್ನೂ ಓದಿ | Hampi Utsav 2025: ಹಂಪಿ ಉತ್ಸವಕ್ಕೆ ದಿನಗಣನೆ; ಫೆ.28 ರಂದು ಸಿಎಂ ಸಿದ್ದರಾಮಯ್ಯ ಚಾಲನೆ

ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಸೋಮವಾರ ಚಾಮರಾಜನಗರದಲ್ಲಿ ಅತೀ ಕಡಿಮೆ ಉಷ್ಣಾಂಶ 13.5 ಡಿ.ಸೆ. ದಾಖಲಾಗಿದ್ದು, ಹೊನ್ನಾವರದಲ್ಲಿ ಅತೀ ಹೆಚ್ಚು ಉಷ್ಣಾಂಶ 38.5 ಡಿ.ಸೆ ದಾಖಲಾಗಿದೆ. ಫೆ. 26ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮಾರ್ಚ್‌ 3ರ ವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ.