Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
Bengaluru Power Cut: 66/11ಕೆವಿ ಶೋಭಾ ಅಪಾರ್ಟ್‌ಮೆಂಟ್ ವಿ.ವಿ. ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ.24 ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.


ಬೆಂಗಳೂರು, ಜ.23, 2025: 66/11 ಕೆವಿ ಶೋಭಾ ಅಪಾರ್ಟ್‌ಮೆಂಟ್ ವಿ.ವಿ. ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ.24 ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಸರ್ಜಾಪುರ, ಸೆಸ್ಸಾನ ಗಾರ್ಡನ್, ಔಟರ್ ರಿಂಗ್ ರೋಡ್, ಸೆಂಟ್ರಲ್ ಮಾಲ್, ಎಕ್ಸೋರಾ ಬಿಸಿನೆಸ್ ಪಾರ್ಕ್, ಶೋಭಾ ಅಪಾರ್ಟ್‌ಮೆಂಟ್, ಸರ್ಜಾಪುರ ಸಾಫ್ಟ್ ಜೋನ್, ತಕ್ಷಶೀಲಾ ಹೆಲ್ತ್ ಕೇರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.