Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Bengaluru Power Cut: 66/11 ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ. 25. ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು, ಜ.24, 2025: 66/11 ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ. 25 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಎಕೊವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ಮೆಂಟ್, ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ, ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ ಹೋಟೆಲ್ ಮತ್ತು ಸುತ್ತಮುತ್ತಲಿನ ಸ್ಥಳಗಳು.
ಜ.27 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ: ಬೆಂಗಳೂರು ನಗರದ 66/11 ಕೆವಿ ಸೇಂಟ್‌ಜಾನ್‌ವುಡ್ ಉಪಕೇಂದ್ರದಲ್ಲಿನ ಹಲವೆಡೆ ಜ.27 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಸೇಂಟ್‌ಜಾನ್‌ವುಡ್ ಅಪಾರ್ಟ್ಮೆಂಟ್ & ಆಸ್ಪತ್ರೆ, ತಾವರೆಕೆರೆ, ಅಕ್ಸೆಂಚರ್, ಒರೆಕಲ್, ಚರಿಸ್ಟ್ ಕಾಲೇಜು, ಮತ್ತು ಸುತ್ತಮುತ್ತಲಿನ ಸ್ಥಳ. ಬಿಟಿಎಂ ಲೇಔಟ್, ಮೆಜೆಸ್ಟಿಕ್ ಅಪಾರ್ಟ್ಮೆಂಟ್, ಎಕ್ಷಾ, ಆಕ್ಷಿಸ್ ಭವನ, ಸುದ್ದಗುಂಟೆ ಪಾಳ್ಯ, ಗುರಪ್ಪನ ಲೇಔಟ್, ಬಿಜಿ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಜ.28 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ: ಬೆಂಗಳೂರು ನಗರದ 66/11ಕೆವಿ ಬಿ.ಎಂ.ಟಿ.ಸಿ ಸ್ಟೇಷನ್ ಉಪಕೇಂದ್ರದಲ್ಲಿನ ಹಲವೆಡೆ ಜ.28 ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಸುದ್ದಿಯನ್ನೂ ಓದಿ | Republic Day Saree Fashion 2025: ಗಣರಾಜ್ಯೋತ್ಸವ ಸಂಭ್ರಮಕ್ಕೆ ಬಂತು ವೈವಿಧ್ಯಮಯ ಕಾಟನ್ ಮಿಕ್ಸ್ ಸೀರೆಗಳು
ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ್, ಶಾಂತಿನಗರ, ಬಿಟಿಎಸ್ ರೋಡ್, ರಿಚ್ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುಧಾಮನಗರ, ಕೆ.ಎಚ್ ರೋಡ್, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.