Bengaluru Power Cut: ಜು.17, 18ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ 66/11 ಕೆ.ವಿ. ಎಲ್‌ಆರ್ ಬಂಡೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.17ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ. ಎಲ್‌ಆರ್ ಬಂಡೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.17ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಕಾವಲ್‌ಬೈರಸಂದ್ರ, ಎಲ್.ಆರ್. ಬಂಡೆ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಅನ್ವರ್ ಲೇಔಟ್, ಕಾವೇರಿ ನಗರ, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ. ಮುಖ್ಯ ರಸ್ತೆ, ಭುವನೇಶ್ವರಿ ನಗರ, ಡಿ.ಜೆ.ಹಳ್ಳಿ, ಕೆ.ಜಿ. ಕಾಲೋನಿ, ಕೆ.ಜಿ. ಹಳ್ಳಿ, ಗಣೇಶ ಬ್ಲಾಕ್, ಆತ್ಮಾನಣದ ನಗರ, ಆದರ್ಶ ನಗರ, ವಿ. ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್ ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗಾರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
66/11 ಕೆ.ವಿ. ಯೆಲ್ಲಾರ್ ಬಂಡೆ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜು.17ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬೆಂಗಳೂರು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎ.ಕೆ. ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ. ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್, ಭುವನೇಶ್ವರಿ ನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್, ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶೀರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಎಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಜು.18ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
66/11 ಕೆವಿ ನಂದಿನಿ ಲೇಔಟ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.18ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಗರದ ಸುಬ್ರಮಣ್ಯ ನಗರ, ಎ, ಬಿ, ಸಿ & ಡಿ ಬ್ಲಾಕ್ (ಮಿಲ್ಕ್ ಕಾಲೋನಿ), ಗಾಯತ್ರಿ ನಗರ, ಕೃಷ್ಣಾನಂದ ನಗರ, ಆರ್‌ಎಂಸಿ ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಎಪಿಎಂಸಿ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ದೇವಸ್ಥಾನ ರಸ್ತೆ, ಸರಸ್ವತಿ ಪುರಂ, ಎಜಿಬಿ ಲೇಔಟ್, ಪರಿಮಳ ನಗರ, ಶ್ರೀನಿವಾಸ್ ನಗರ, ಜೈಮಾರುತಿ ನಗರ, ರವಿ ಬಡಾವಣೆ, ಸಾಕಮ್ಮ ಬಡಾವಣೆ, ಭೇಲ್ ಲೇಔಟ್, ಜೆ.ಎಸ್. ನಗರ, ಜೆ.ಸಿ. ನಗರ, ಕುರುಬರಹಳ್ಳಿ, 60, 11ನೇ ಅಡಿ ರಸ್ತೆ, 9ನೇ, 11ನೇ ಅಡಿ ರಸ್ತೆ 13ನೇ, 14ನೇ ಮತ್ತು 15ನೇ ಮುಖ್ಯ, ಜೆ.ಸಿ.ನಗರ, PWD, EWS, AMR, ಕ್ವಾರ್ಟಸ್, ರಾಜಕುಮಾರ್ ಸಮಾಧಿ ರಸ್ತೆ, ಗೆಳೆಯರ ಬಳಗ ವೃತ್ತ, ಶ್ರೀರಾಮ ನಗರ, ಮುನೇಶ್ವರ ಬ್ಲಾಕ್, J C ನಗರ 1 ನೇ ಮುಖ್ಯ ರಸ್ತೆ, ಸತ್ಯನಾರಾಯಣ ಲೇಔಟ್, ಮೈಕೋ ಲೇಔಟ್, ಹ್ಯಾಪಿ ಹೋಮ್ಸ್, ಸತ್ವ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Star Fashion 2025: ಟ್ರೆಂಡ್‌ಗೆ ಮರಳಿದ ನಟಿ ಪ್ರಿಯಾಮಣಿ ಧರಿಸಿದ ಅನಾರ್ಕಲಿ ಕುರ್ತಾ ಸೂಟ್