Bengaluru Power Cut: ಭಾನುವಾರ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
Bengaluru Power Cut: 220/66/11 ಕೆ.ವಿ. ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಮಾ..2 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: 220/66/11 ಕೆ.ವಿ. ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಮಾ.2 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ. ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್ ಟಿಟಿಎಫ್, ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿ ನಗರ, ಆಕಾಶ್ ಥಿಯೇಟರ್ ರಸ್ತೆ, ವಿಜ್ಞಾನ ಪಬ್ಲಿಕ್ ಸರ್ಕಲ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್‌ಎಫ್ ಲೇಔಟ್, ಎನ್ ಎಸ್ ಲೇಔಟ್, ಕೆಜಿ ಲೇಔಟ್, ರಾಜೀವ್ ಗಾಂಧಿನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆಗ್ರಾಮ ಭಾಗಶಃ, ಪೀಣ್ಯ 4ನೇ ಹಂತ, 4ನೇ ಮುಖ್ಯ, 8ನೇ ಕ್ರಾಸ್, ಎಚ್‌ಎಂಟಿ, ಬಿ.ಎಂ.ಟಿ. ಗಾರ್ಡನ್, ಪೀಣ್ಯ ಪೊಲೀಸ್ ಸ್ಟೇಷನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯೂನಿಕೇಷನ್, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿ ನಗರ,
ಆಕಾಶ್ ಥಿಯೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯೂಕೋ ಬ್ಯಾಂಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ್ ನಗರ ಕಸ್ತೂರಿ ಬಡಾವಣೆ, ಜೆಕೆ ಡಬ್ಲ್ಯೂ ಲೇಔಟ್, ಎಕ್ಸಿಸ್ ಆಸ್ಪತ್ರೆ, ಪೀಣ್ಯ ಗ್ರಾಮ ರಸ್ತೆ. 4ನೇ ಬ್ಲಾಕ್, 2ನೇ ಬ್ಲಾಕ್, MEI ಕಾರ್ಖಾನೆ, 10ನೇ ಕ್ರಾಸ್, 1ನೇ ಹಂತ, ಪೀಣ್ಯ ಕೈಗಾರಿಕಾ ಪ್ರದೇಶ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ವೈಟ್ ರಸ್ತೆ, ಎಸ್ ಸಿಎಲ್ ರೋಡ್, ಮೆರಲ್ ಫ್ಯಾಕ್ಟ್ರಿ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್ ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ, ವೈಷ್ಣವಿ ಮಾಲ್+ಕಾವೇರಿ ಮಾಲ್, ಪೀಣ್ಯ 10ನೇ ಮುಖ್ಯ, 11 ನೇ ಮುಖ್ಯ ಉಡುಪಿ ಹೋಟೆಲ್, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವಕುಶಾ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ,8ನೇ 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಹತ್ತಿರ, ಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ, ಯಶವಂತಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
BESCOM: ಬೆಸ್ಕಾಂನಿಂದ ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಲೋಕಾರ್ಪಣೆ
ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ (BESCOM), ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ (BLDC Ceiling Fan) ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಬೆಸ್ಕಾಂನ ಬೇಡಿಕೆ ನಿರ್ವಹಣಾ ವಿಭಾಗದ (ಡಿಎಸ್‌ಎಂ) ವತಿಯಿಂದ ಗುರುವಾರ ಖಾಸಗಿ ಹೋಟೆಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ್ ಅನಾವರಣಗೊಳಿಸಿದರು.
ಬಳಿಕ ಮಾತನಾಡಿದ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ್, ʼʼಬೇಸಗೆ ಆರಂಭದಲ್ಲೇ ಬಿ.ಎಲ್.ಡಿ.ಸಿ. ಫ್ಯಾನ್‌ಗಳನ್ನು ಬಿಡುಗಡೆ ಮಾಡಿ, ಬಳಕೆಗೆ ಗ್ರಾಹಕರನ್ನು ಉತ್ತೇಜಿಸಲಾಗುತ್ತಿದೆ. ಸಾಮಾನ್ಯ ಫ್ಯಾನ್‌ಗಳಿಗಿಂತ ಅತಿ ಕಡಿಮೆ ವಿದ್ಯುತ್ ಬಳಸಿಕೊಳ್ಳುವಂತೆ ಈ ಫ್ಯಾನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆ ವಿದ್ಯುತ್ ಬೇಡಿಕೆ ಕಡಿತಗೊಳಿಸುವ ನಮ್ಮ ಈ ಪ್ರಯತ್ನ ಗ್ರಾಹಕರ ವಿದ್ಯುತ್ ವೆಚ್ಚವನ್ನೂ ಕಡಿಮೆ ಮಾಡಲಿದೆ. ಸುಸ್ಥಿರ ಹಾಗೂ ಇಂಧನ ದಕ್ಷತೆಯ ಭವಿಷ್ಯಕ್ಕೆ ಇದು ಮಹತ್ವದ ಹೆಜ್ಜೆʼʼ ಎಂದು ಹೇಳಿದರು.
ʼʼಇಂಧನ ದಕ್ಷತೆಯೆಡೆಗಿನ ನಮ್ಮ ಪ್ರಯತ್ನವು ಪಾಲುದಾರರ ಸಹಕಾರವಿಲ್ಲದೆ ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ಬಿಇಇ, ಕ್ರೆಡಲ್, ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್‌ಸಿ) ಹಾಗೂ ಇನ್ನಿತರ ಪಾಲುದಾರರ ಪ್ರೋತ್ಸಾಹಕ್ಕೆ ಧನ್ಯವಾದ. ವಿದ್ಯುತ್ ಬಳಕೆಯಲ್ಲಿ ಜಾಗೃತಿ ಹಾಗೂ ಸುಸ್ಥಿರ ನಾಳೆಗಾಗಿ, ನಾವು ಒಂದಾಗಿ ನಡೆಯಬೇಕಿದೆʼʼ ಎಂದು ಅವರು ತಿಳಿಸಿದರು.
ಕ್ರೆಡಲ್ ವ್ಯವಸ್ಥಾಪಕ ನಿರ್ದೆಶಕ ಕೆ.ಪಿ. ರುದ್ರಪ್ಪಯ್ಯ ಮಾತನಾಡಿ, ʼʼಒಂದು ಯೂನಿಟ್ ವಿದ್ಯುತ್ ಉಳಿಸಿದರೆ, ಎರಡು ಯೂನಿಟ್ ವಿದ್ಯುತ್ ಉತ್ಪಾದಿಸಿದಂತೆ. ವಿದ್ಯುತ್ ಉತ್ಪಾದನೆ ಎಷ್ಟು ಮುಖ್ಯವೋ, ಅದನ್ನು ಸಂರಕ್ಷಿಸುವುದೂ ಅಷ್ಟೇ ಮುಖ್ಯವಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ ವಿದ್ಯುತ್ ಸಂರಕ್ಷಣೆ ಮತ್ತು ದಕ್ಷತೆ ನೀತಿ-2022-27 ಜಾರಿಗೊಳಿಸಿದ ಹೆಮ್ಮೆ ಕರ್ನಟಕದ್ದು. ಈ ನೀತಿಯು 744 ಬಿಲಿಯನ್ ಕಿಲೋ ವ್ಯಾಟ್ ಅವರ್ ವಿದ್ಯುತ್ ಉಳಿತಾಯ ಜತೆಗೆ 6 ಲಕ್ಷ ಟನ್ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆ ತಡೆಯುವ ಗುರಿ ಹೊಂದಿದೆʼʼ ಎಂದು ಹೇಳಿದರು.
ಇಂಧನ ದಕ್ಷತೆ ಹಾಗೂ ಸಂರಕ್ಷಣೆಯ ಗುರಿ ತಲುಪಲು ವಿವಿಧ ವಲಯಗಳಿಗೆ ಗುರಿಗಳನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಬೆಸ್ಕಾಂ ಸಾಧನೆ ಮಹತ್ವದ್ದಾಗಿದೆ. ಬಿ.ಎಲ್.ಡಿ.ಸಿ. ಫ್ಯಾನ್‌ಗಳ ಬಳಕೆ ಹೆಚ್ಚಬೇಕಿದ್ದು, ವಿದ್ಯುತ್ ಉಳಿತಾಯ ಪ್ರಯತ್ನಗಳು ನಮ್ಮಿಂದಲೇ ಆರಂಭವಾಗಲಿ ಎಂದರು. ಪಿ.ಡ್ಲ್ಯು.ಸಿ. ಭಾರತದ ಕ್ಲೀನ್ ಎನರ್ಜಿ ವಿಭಾಗದ ಮುಖ್ಯಸ್ಥ ರಾಜೀವ್ ರಲ್ಹಾನ್ ಮಾತನಾಡಿ, ʼʼಸದ್ಯ ಬಳಕೆಯಲ್ಲಿರುವ ಹಳೆಯ ತಂತ್ರಜ್ಞಾನದ ಫ್ಯಾನ್‌ಗಳಿಗೆ ಹೋಲಿಸಿದರೆ ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆಯಿಂದ ಶೇಕಡ 50ರಷ್ಟು ವಿದ್ಯುತ್ ಬಳಕೆ ಕಡಿಮೆಗೊಳಿಸಬಹುದಾಗಿದೆ. ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆ ಉತ್ತೇಜಿಸುತ್ತಿರುವ ಸರ್ಕಾರದ ಜತೆ ಸಹಕರಿಸಲು ಹೆಮ್ಮೆಯಾಗುತ್ತಿದೆʼʼ ಎಂದರು.
ಈ ವೇಳೆ ಇಇಎಸ್‌ಎಲ್ ರಾಜ್ಯ ಮುಖ್ಯಸ್ಥ ದೀಪಕ್ ಸಹನಿ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಎಚ್.ಜೆ. ರಮೇಶ್, ಬೆಸ್ಕಾಂ ಡಿಎಸ್‌ಎಂ ಪ್ರಧಾನ ವ್ಯವಸ್ಥಾಪಕ ರಮೇಶ್ ವಿ.ಎಸ್., ಪಿಎಂಎಸ್ ನಿರ್ದೇಶಕ ಅಮೇಯ ಸುಬೋಧ್ ಉದ್ಘಾಂವ್ಕರ್ ಸೇರಿದಂತೆ ಬೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಈ ಸುದ್ದಿಯನ್ನೂ ಓದಿ | Book Release: ಬೆಂಗಳೂರಿನಲ್ಲಿ ಮಾ.2 ರಂದು ʼಬೆಟ್ಟದ ಹೂವುʼ ಕೃತಿ ಲೋಕಾರ್ಪಣೆ
ಬಿ.ಎಲ್.ಡಿ.ಸಿ. ಸೀಲಿಗ್ ಫ್ಯಾನ್ ಖರೀದಿ ಹೇಗೆ?
ಎಚ್ಎಸ್ಆರ್ ಲೇಔಟ್‌ನಲ್ಲಿರುವ ಬೆಸ್ಕಾಂನ ಸೆಂಟರ್ ಆಫ್ ಎಕ್ಸಲೆನ್ಸ್ ಕಚೇರಿ ಮತ್ತು ಬೆಸ್ಕಾಂ ಅಧಿಕೃತ ಜಾಲತಾಣದಲ್ಲಿನ ಇಇಎಸ್‌ಎಲ್ ಲಿಂಕ್ (https://eeslmart.in/fan?affiliateid=13285) (website link: eeslmart.in) ಮೇಲೆ ಕ್ಲಿಕ್ ಮಾಡುವುದರ ಮೂಲಕ ಆನ್‌ಲೈನ್‌ನಲ್ಲಿ ಫ್ಯಾನ್ ಖರೀದಿಸಬಹುದಾಗಿದೆ. 5 ಸ್ಟಾರ್ ಪ್ರಮಾಣೀಕೃತ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಬೆಲೆ 2,699 ರೂ. ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.