ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

Bengaluru Power Cut: ಸುಬ್ರಮಣ್ಯಪುರ ಮತ್ತು ಇಸ್ರೋ ಲೇಔಟ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂನ್‌ 25ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

ಸಾಂದರ್ಭಿಕ ಚಿತ್ರ. -

Profile
Siddalinga Swamy Jun 24, 2026 10:19 PM

ಬೆಂಗಳೂರು, ಜೂ.24: ಸುಬ್ರಮಣ್ಯಪುರ ಮತ್ತು ಇಸ್ರೋ ಲೇಔಟ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂನ್‌ 25ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು‌

ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಆದರ್ಶ ಅಪಾರ್ಟ್‌ಮೆಂಟ್ 1 & 2, ಮಂತ್ರಿ ಟ್ರಾನ್ಕ್ವಿಲ್ ಅಪಾರ್ಟ್‌ಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ಲಸಂದ್ರ ಇಂಡಸ್ಟ್ರಿಯಲ್ ಏರಿಯಾ, ಅಗರ ಮತ್ತು ಸುತ್ತಮುತ್ತಲ ಪ್ರದೇಶಗಳು, ಕುಮಾರಸ್ವಾಮಿ ಬಡಾವಣೆ, ವಿಠಲಾ ನಗರ, ಯಾದಳಾಂ ನಗರ, ಮಾರುತಿನಗರ, ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಮತ್ತು ಸುತ್ತಮುತ್ತಲ ಪ್ರದೇಶಗಳು, ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ಟಿರಿಯಲ್ ಏರಿಯಾ, ಕುಮಾರಸ್ವಾಮಿ ಲೇಔಟ್, ಇಲಿಯಾಸ್ ನಗರ, ಯೆಲಚೇನಹಳ್ಳಿ, ಗಂಗಾಧರನಗರ, ವಿವೇಕನಂದ ಕಾಲೋನಿ, ಪ್ರಗತಿಪುರ, ಸರಬಂಡೆಪಾಳ್ಯ, ಪ್ರತಿಭಾ ಇಂಡಸ್ಟಿರಿಯಲ್ ಏರಿಯಾ, ಸುಪ್ರೀಂ ಲೆದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿ ನಗರ, ವಿಕ್ರಮ್ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, ಜೆಎಚ್‌ಬಿಸಿಎಸ್ ಲೇಔಟ್, ಬೇಂದ್ರೆ ನಗರ, ಈಶ್ವರನಗರ, ಮಿನಿಯಾಜ್ ನಗರ, ಕನಕ ಲೇಔಟ್, ಕನಕನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಈ ಪ್ರದೇಶಗಳಲ್ಲೂ ಕರೆಂಟ್‌ ಇರಲ್ಲ

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ ಯೆಲ್ಲಾರ್ ಬಂಡೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 25ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎ.ಕೆ. ಆಶ್ರಮ ರಸ್ತೆ, ದೇವೇಗೌಡ ರಸ್ತೆ, ಆರ್.ಟಿ. ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಸೈನಿಕ ಪ್ರದೇಶ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯು.ಎಸ್.ಎಸ್.ಬಿ ಮಲಿನಜಲ ಶುದ್ಧೀಕರಣ ಘಟಕ, ಮರಿಯಣ್ಣಪಾಳ್ಯ, ಕಾಫಿ ಬೋರ್ಡ್ ಲೇಔಟ್, ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್, ಭುವನೇಶ್ವರಿ ನಗರ, ಬಿಇಎಲ್ ಕಾರ್ಪೊರೇಟ್ ಆಫೀಸ್, ಚಾಣಕ್ಯ ಲೇಔಟ್, ನಾಗವಾರ, ಎಂ.ಎಸ್. ರಾಮಯ್ಯ ನಾರ್ತ್ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶೀರ್ವಾದ್ ನಗರ, ಅಮರಜ್ಯೋತಿ ಲೇಔಟ್, ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿ ಪಾಳ್ಯ, ರಾಯಲ್ ಎನ್ಕ್ಲೇವ್, ಶ್ರೀರಾಮಪುರ ಗ್ರಾಮ, ವಿ.ಎಚ್.ಬಿ.ಸಿ.ಎಸ್ ಲೇಔಟ್, ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

BESCOM Online Services: ಸಾಫ್ಟ್‌ವೇರ್‌ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್‌ ಸೇವೆ ಅಲಭ್ಯ

66/11ಕೆ.ವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 25ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರ್ ಲೇಔಟ್ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.