Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ
Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.23ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

-

ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.23ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಎಲಿಟ ಪ್ರೋಮೆನೇಡ್ ಅಪಾರ್ಟ್‌ಮೆಂಟ್, ಕೆ.ಆರ್. ಲೇಔಟ್, ಶಾರದ ನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು.
ಈ ಸುದ್ದಿಯನ್ನೂ ಓದಿ | Navaratri Fashion 2025: ನವರಾತ್ರಿಯ ಸಂಭ್ರಮಕ್ಕೆ ಜತೆಯಾಗಲು ಬಂದ ಎಥ್ನಿಕ್ ಗೌನ್ಸ್
66/11ಕೆ.ವಿ ಯೆಲ್ಲಾರ್ ಬಂಡೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.23ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಎ.ಕೆ. ಆಶ್ರಮ್ ರಸ್ತೆ, ದೇವಗೌಡ ರಸ್ತೆ, ಆರ್.ಟಿ. ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಸೈನಿಕ ಪ್ರದೇಶ (ಮಿಲಿಟರಿ ಏರಿಯಾ), ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿಡಬ್ಲ್ಯೂಎಸ್ಎಸ್ಬಿ ಮಲಮೂತ್ರ ಶುದ್ಧೀಕರಣ ಘಟಕ (ಸೆವೇಜ್ ಪ್ಲಾಂಟ್), ಮರಿಯಣ್ಣಪಾಳ್ಯ, ಕಾಫಿ ಬರ್ಡ್ ಲೇಔಟ್, ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್, ಭುವನೇಶ್ವರಿ ನಗರ, ಬಿಇಎಲ್ ಕಾರ್ಪೊರೇಟ್ ಕಚೇರಿ, ಚಾಣಕ್ಯ ಲೇಔಟ್, ನಾಗವಾರಾ, ಎಂ.ಎಸ್.ರಾಮಯ್ಯ ನಾರ್ಥ್ ಸಿಟಿ, ತಾಣಿಸಂದ್ರ ಮುಖ್ಯ ರಸ್ತೆ, ಆಶೀರ್ವಾದ ನಗರ, ಅಮರಜ್ಯೋತಿ ಲೇಔಟ್, ರಾಚೇನಹಳ್ಳಿ ಮುಖ್ಯ ರಸ್ತೆ, ಮೆಸ್ತ್ರಿ ಪಾಳ್ಯ, ರಾಯಲ್ ಎಂಕ್ಲೇವ್, ಶ್ರೀರಾಂಪುರ ಗ್ರಾಮ, ವಿಎಚ್‌ಬಿಸಿಎಸ್ ಲೇಔಟ್, ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, ಗೋವಿಂದಪುರ 17ನೇ ಕ್ರಾಸ್, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Navaratri Jewel trend 2025: ನವರಾತ್ರಿ ಸೀಸನ್‌ನಲ್ಲಿ ಟ್ರೆಂಡಿಯಾಗಿರುವ ಜ್ಯುವೆಲರಿಗಳಿವು