ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Power Cut: ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆ.19ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile
Siddalinga Swamy Aug 18, 2026 4:28 PM

ಬೆಂಗಳೂರು, ಆ.18: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ. ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆ.19ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿ ನಗರ, ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಪ್ರದೇಶಗಳಲ್ಲೂ ಕರೆಂಟ್‌ ಇರಲ್ಲ.

ಬೆಂಗಳೂರಿನ ನಂದಿನಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-7 ಉಪ ವಿಭಾಗದ ಹಲವೆಡೆ ಆ.19ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಸುಬ್ರಹ್ಮಣ್ಯನಗರ, A, B ,C ಮತ್ತು D ಬ್ಲಾಕ್(ಮಿಲ್ಕ್‌ ಕಾಲೋನಿ),ಗಾಯತ್ರಿ ನಗರ, ಕೃಷ್ಣಾನಂದ ನಗರ, RMC ಯಾರ್ಡ್‌, ಮರಪ್ಪನಪಾಳ್ಯ, ಯಶವಂತ‌ಪುರ ಕೈಗಾರಿಕಾ ಪ್ರದೇಶ, ಟೆಲಿಫೋನ್ ಎಕ್ಸ್ಚೇಜ್, ಶಂಕರನಗರ, ಶ್ರೀಕಾಂತೇಶ್ವರ ನಗರ, ಸೋಮೇಶ್ವರ ನಗರ, APMC ಯಾರ್ಡ್‌, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ದೇವಸ್ಥಾನ ರಸ್ತೆ, ಸರಸ್ವತಿ ಪುರಂ, AGB ಲೇಔಟ್, ಪರಿಮಳ ನಗರ, ಶ್ರೀನಿವಾಸ ನಗರ, ಜೈಮಾರುತಿ ನಗರ, ರವಿ ಬಡಾವಣೆ, ಸಾಕಮ್ಮ ಬಡಾವಣೆ, ಭೇಲ್ ಲೇಔಟ್, J.S. ನಗರ, J.C. ನಗರ,ಕುರುಬರಹಳ್ಳಿ, 60 ಅಡಿ ರಸ್ತೆ, 9ನೆ, 10ನೆ, 11ನೆ, 12ನೆ, 13ನೆ, 14ನೇ ಮತ್ತು 15ನೇ ಮುಖ್ಯ ರಸ್ತೆ, J.C. ನಗರ. PWD, EWS, AMR, Quartes, ರಾಜ್‌ಕುಮಾರ್‌ ಸಮಾಧಿ ರಸ್ತೆ, ಗೆಳೆಯರ ಬಳಗ ಸುತ್ತಮುತ್ತಲು, ಶ್ರೀರಾಮ ನಗರ, ಮುನೇಶ್ವರ ಬ್ಲಾಕ್, J C ನಗರ 1ನೇ ಮುಖ್ಯ ರಸ್ತೆ, ಸತ್ಯನಾರಾಯಣ ಲೇಔಟ್, ಮೈಕೋ ಲೇಔಟ್, ಹ್ಯಾಪಿ ಹೋಮ್‌ಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.