ಬೆಂಗಳೂರು, ಆ.28: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಐ ಐ ಎಸ್ ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ಮಲ್ಲೇಶ್ವರಂ ವಿಭಾಗದ ಹಲವೆಡೆ ಆ.30ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ. ಮೇಲೆ ಹೇಳಿದ ಸುತ್ತಮುತ್ತ ಪ್ರದೇಶಗಳು.
ಈ ಪ್ರದೇಶಗಳಲ್ಲೂ ಕರೆಂಟ್ ಇರಲ್ಲ
220/66/11 ಕೆ.ವಿ. ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆ.30ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
Bengaluru Power Cut: ಆಗಸ್ಟ್ 29ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶವಂತಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.