ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Power Cut: ಜುಲೈ 20ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ ವೆಲ್ಕಾಸ್ಟ್ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 20ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಜು.18: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ ವೆಲ್ಕಾಸ್ಟ್ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 20ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ರವೀಂದ್ರ ನಗರ, ಪ್ರಸನ್ನಾಥ ನಗರ, ಸಂತೋಷ್ ನಗರ, ಏರ್‌ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಕ್ಷತ್ರ ಅಪಾರ್ಟ್ಮೆಂಟ್, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ತ್ರಿವೇಣಿ, ಎಚ್ಎಚ್‌ವಿ (HHV), ಡಿಎಂಜಿ (DMG), ಕೃಷ್ಣ ಫ್ಯಾಬ್ರಿಕೇಷನ್ಸ್, ಜೆಮಿನಿ ಇಂಡಸ್ಟ್ರೀಸ್, ರವಿ-ಕರ್ಲೋಸ್ಕರ್ ಆಸ್ಪತ್ರೆ, ಜಾನ್ ಕ್ರೇನ್, ಎಂಎಸ್ಐಎಲ್ (MSIL) ಪ್ರಿಂಟಿಂಗ್ ಪ್ರೆಸ್, ಎಸ್. ರಮೇಶ್ ರಸ್ತೆ, ವಿಪ್ರೋ ವೆಲ್ಕಾಸ್ಟ್ ಫ್ಯಾಕ್ಟರಿ, ಐಟಿಸಿ (ITC), ವೋಲ್ವೋ, ಏವರಿ ಡೆನ್ನಿಸನ್, ಹಿಟಾಚಿ ಇಂಡಸ್ಟ್ರೀಸ್, ಗೀತಾ ಟಿಂಬರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಪ್ರದೇಶಗಳಲ್ಲೂ ಕರೆಂಟ್‌ ಇರಲ್ಲ

66/11 ಕೆ.ವಿ ಬ್ಯಾಟರಾಯನಪುರ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 20ರಂದು ಸೋಮವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Bengaluru Rain: ಬೆಂಗಳೂರಿನ ಹಲವೆಡೆ ವರುಣನ ಆರ್ಭಟ; ರಾಜ್ಯಾದ್ಯಂತ ನಾಳೆ ಅಬ್ಬರಿಸಲಿದೆ ಮಳೆ!

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎಲ್‌ ಅಂಡ್‌ ಟಿ ಅಪಾರ್ಟ್‌ಮೆಂಟ್, ಯಶೋಧನಗರ, ಜಕ್ಕೂರು ಪ್ಲಾಂಟೇಶನ್, ಸೆಂಚುರಿ ಅಪಾರ್ಟ್‌ಮೆಂಟ್ ಬ್ಯಾಟರಾಯನಪುರ, ಸ್ಪಾರ್ಕಲ್ ಒನ್ ಮಾಲ್, ಅಮೃತಹಳ್ಳಿ, ಸಹಕಾರ ನಗರ ಜಿ ಬ್ಲಾಕ್, ಶಬರಿನಗರ, ಕೆನರಾ ಬ್ಯಾಂಕ್ ಲೇಔಟ್, ಧನಲಕ್ಷ್ಮಿ ಲೇಔಟ್, ತಿಂಡ್ಲು ಮುಖ್ಯರಸ್ತೆ, ಸರ್ ಎಂವಿ ಲೇಔಟ್, ತಿ೦ಡ್ಲು ವಿಲೇಜ್, ಸಪ್ತಗಿರಿ ಲೇಔಟ್, ಜ್ಞಾನೇಶ್ವರಿ ಲೇಔಟ್, ಗುರುದರ್ಶನ ಲೇಔಟ್, ವೆಂಕಟಸ್ವಾಮಪ್ಪ ಲೇಔಟ್, ನಂಜಪ್ಪ ವೃತ್ತ, ಎಲ್ & ಜಿ ಎನ್‌ಕ್ಲೇವ್, ಬಸವ ಸಮಿತಿ ಮತ್ತು ಸುತ್ತಮುತ್ತಲಿನ ಪ್ರದೇಶ ಹಾಗೂ ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.