ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Power Cut: ಜುಲೈ 22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: ಸಾರಕ್ಕಿ ಮತ್ತು ಇಸ್ಕಾನ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜುಲೈ 22ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಜುಲೈ 22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಸಾಂದರ್ಭಿಕ ಚಿತ್ರ. -

Profile
Siddalinga Swamy Jul 21, 2026 4:16 PM

ಬೆಂಗಳೂರು, ಜು.21: ಸಾರಕ್ಕಿ ಮತ್ತು ಇಸ್ಕಾನ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜುಲೈ 22ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಠ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾರ್ಪುರಿಯಾ ಅಪಾರ್ಟ್‌ಮೆಂಟ್, ನಾಗರ್ಜುನ ಅಪಾರ್ಟ್‌ಮೆಂಟ್, ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಔಟ್, ಎಸ್.ಬಿ.ಐ ಕಾಲೋನಿ, ಅರ್.ವಿ. ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮೇನ್, ಎಲ್ಐಸಿ ಕಚೇರಿ ಹಿಂಭಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜೆ.ಪಿ.ನಗರ 5ನೇ ಹಂತ, ಸಾಯಿ ನರ್ಸರಿ ರಸ್ತೆ, ಜೆ.ಪಿ. ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್‌ಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾಟ್ðಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಂ ಮತ್ತು ಮಂತ್ರಿ ಅಪಾರ್ಟ್‌ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಹಾಗೂ ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್

ಬೆಂಗಳೂರು: ಗೃಹ ಜ್ಯೋತಿ (Gruha Jyothi Scheme) ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ (BESCOM) ಮೀಟರ್ ರೀಡರ್‌ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ (Average Bills) ಬಿಲ್‌ಗಳನ್ನು ನೀಡಲಾಗುತ್ತದೆ. ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಆದರೆ ಎಚ್‌ಟಿ ಗ್ರಾಹಕರು, 40 HP ಮತ್ತು ಅದಕ್ಕಿಂತ ಹೆಚ್ಚಿನ ಮಂಜೂರಾದ ಲೋಡ್ ಹೊಂದಿರುವ ಲೋ ಟೆನ್ಷನ್ (LT) ಗ್ರಾಹಕರು, ಸೋಲಾರ್ ರೂಫ್ಟಾಪ್ (SRTPV) ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

Ashada Sale 2026: ಎಲ್ಲೆಡೆ ಆಷಾಢ ಸೇಲ್ ಅಬ್ಬರ; ಸೀರೆ, ಜ್ಯುವೆಲರಿ ಖರೀದಿಗಿದು ಸಕಾಲ

ಜುಲೈ ತಿಂಗಳ ಸರಾಸರಿ ಬಿಲ್‌ಗಳನ್ನು ಗ್ರಾಹಕರಿಗೆ ಎಸ್‌ಎಂಎಸ್‌ ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು. ಗೃಹ ಬಳಕೆದಾರರಿಗೆ ಆಗಸ್ಟ್ ತಿಂಗಳಿನಿಂದ ಯಥಾಪ್ರಕಾರ ನಿಯಮಿತ ಮೀಟರ್ ರೀಡಿಂಗ್ ಮತ್ತು ನೈಜ ವಿದ್ಯುತ್ ಬಳಕೆಯ ಆಧಾರದಮೇಲೆ ಬಿಲ್ ನೀಡಲಾಗುವುದು. ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿನ ವ್ಯತ್ಯಾಸದ ಯೂನಿಟ್‌ಗಳನ್ನು, ನೈಜ ಮೀಟರ್ ರೀಡಿಂಗ್ ಆರಂಭವಾದ ನಂತರ ಮುಂದಿನ ಬಿಲ್ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ ಮಾಡಲಾಗುವುದು.‌ ಗ್ರಾಹಕರು ಜುಲೈ ಬಿಲ್‌ನ ಪಾವತಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಪಾವತಿ ವಿಧಾನಗಳನ್ನು(ಉಪ ವಿಭಾಗದ ನಗದು ಕೌಂಟರ್‌ಗಳು, ಬೆಸ್ಕಾಂ ವೆಬ್‌ಸೈಟ್, ಬೆಸ್ಕಾಂ ಮಿತ್ರ ಆಪ್ ಹಾಗೂ ಥರ್ಡ್ ಪಾರ್ಟಿ ಆಪ್) ಬಳಸಿಕೊಳ್ಳಬಹುದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.