Bengaluru Power Cut: ಗಮನಿಸಿ; ನ.14ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
BESCOM: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಬನಶಂಕರಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.14 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸಾಂದರ್ಭಿಕ ಚಿತ್ರ. -
Siddalinga Swamy
Nov 12, 2026 4:21 PM
ಬೆಂಗಳೂರು, ನ.12: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಬನಶಂಕರಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.14 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಕತ್ರಿಗುಪ್ಪೆ, ಕತ್ರಿಗುಪ್ಪೆ ನೀರಿನ ಟ್ಯಾಂಕ್, ಸೀತಾ ವೃತ್ತ, ಬ್ಯಾಂಕ್ ಕಾಲೋನಿ, ಬಾಲಾಜಿ ಲೇಔಟ್, ಐಟಿ ಲೇಔಟ್, ದ್ವಾರಕಾ ನಗರ, ವೀರಭದ್ರ ನಗರ, ಗಿರಿನಗರ, ವಿಎಚ್‌ಬಿಸಿ ಲೇಔಟ್, ಗಿರಿನಗರ, ಕತ್ರಿಗುಪ್ಪೆ ಮುಖ್ಯ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.