ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Power Cut: ನ.17, 18ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

BESCOM: 66/11 ಕೆ.ವಿ ಹೆಣ್ಣೂರು ರೋಡ್‌ ಉಪ-ಕೇಂದ್ರದಲ್ಲಿ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನ.17ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಗಳವರೆಗೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ನ.17, 18ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಸಾಂದರ್ಭಿಕ ಚಿತ್ರ. -

Profile
Siddalinga Swamy Nov 16, 2026 3:48 PM

ಬೆಂಗಳೂರು, ನ.16: 66/11 ಕೆ.ವಿ ಹೆಣ್ಣೂರು ರೋಡ್‌ ಉಪ-ಕೇಂದ್ರದಲ್ಲಿ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನ.17ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಗಳವರೆಗೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು, ಕೆ. ನಾರಾಯಣಪುರ, ಬಿಳಿಶಿವಾಳೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಾಗರಗಿರಿ ಟೌನ್‌ಶಿಪ್, ಕೆ. ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ. ಗೇಟ್, ಬೈರತಿ ಕ್ರಾಸ್, ಬೈರತಿ ಗ್ರಾಮ, ಎವರ್ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈ ಕೇರ್ ಶಾಲೆ, ಬಿ.ಎಚ್.ಕೆ. ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್, ವಡ್ಡರಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾ ನಗರ, ಕೆ.ಆರ್.ಸಿ., ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೋನಿ, ಮಂಜುನಾಥ ನಗರ, ಹೊರಮಾವು, ಅಗರ ಗ್ರಾಮ, ಪಾತಾಳಮ್ಮ ದೇವಸ್ಥಾನ, ಎ.ಕೆ.ಆರ್. ಶಾಲೆ, ನ್ಯೂ ಮಿಲೇನಿಯಂ ಶಾಲೆ, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಈ ಪ್ರದೇಶದಲ್ಲೂ ವಿದ್ಯುತ್‌ ವ್ಯತ್ಯಯ

ಮಹಾಲಕ್ಷ್ಮಿ ಬಡಾವಣೆ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-7ಉಪ ವಿಭಾಗದ ಹಲವೆಡೆ ನ.17ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಗಳವರೆಗೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಎಚ್.ವಿ.ಕೆ. ಲೇಔಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್. ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ. ಹಾಸ್ಪಿಟಲ್‌, ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ. ರಸ್ತೆ, ಬಿ.ಎನ್.ಇ.ಎಸ್. ಕಾಲೇಜು, ಬಿ.ಇ.ಎಲ್.ಎಸ್. ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ಮೆಂಟ್, ಯೆಸ್ಹವನ ಅಪಾರ್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲ ಪ್ರದೇಶ.

ನ.18ರಂದು ವಿದ್ಯುತ್‌ ವ್ಯತ್ಯಯ

ಆರ್.ಬಿ.ಐ. ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್ 18ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಆರ್.ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರಿಗೇಡ್ ಗಾರ್ಡೇನಿಯ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.