Bengaluru Power Cut: ನ.19, 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
BESCOM: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11ಕೆ.ವಿ ಎಲ್.ಆರ್. ಬಂಡೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.19ರಂದು ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ನ.18: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11ಕೆ.ವಿ ಎಲ್.ಆರ್. ಬಂಡೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.19ರಂದು ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಎ.ಕೆ. ಆಶ್ರಮ ರಸ್ತೆ, ದೇವೇಗೌಡ ರಸ್ತೆ, ಆರ್.ಟಿ. ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಸೈನಿಕ ಪ್ರದೇಶ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯು.ಎಸ್.ಎಸ್.ಬಿ ಮಲಿನಜಲ ಶುದ್ಧೀಕರಣ ಘಟಕ, ಮರಿಯಣ್ಣಪಾಳ್ಯ, ಕಾಫಿ ಬೋರ್ಡ್ ಲೇಔಟ್, ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್, ಭುವನೇಶ್ವರಿ ನಗರ, ಬಿಇಎಲ್ ಕಾರ್ಪೊರೇಟ್ ಆಫೀಸ್, ಚಾಣಕ್ಯ ಲೇಔಟ್, ನಾಗವಾರ, ಎಂ.ಎಸ್. ರಾಮಯ್ಯ ನಾರ್ತ್ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶೀರ್ವಾದ್ ನಗರ, ಅಮರಜ್ಯೋತಿ ಲೇಔಟ್, ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿ ಪಾಳ್ಯ, ರಾಯಲ್ ಎನ್ಕ್ಲೇವ್, ಶ್ರೀರಾಮಪುರ ಗ್ರಾಮ, ವಿ.ಎಚ್.ಬಿ.ಸಿ.ಎಸ್ ಲೇಔಟ್, ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ನ.20ರಂದು ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ?
66/11 ಕೆ.ವಿ ರಾಜನಕುಂಟೆ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ನ.20ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶ.
ಈ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯ
66/11 ಕೆ.ವಿ ಎಂ.ಇ.ಐ. ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ನ.20ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಎಜಿಬಿಜಿ-ಲೇಔಟ್, ಬೈರವೇಶ್ವರ ಹೋಟೆಲ್, ಶೆಟ್ಟಿಹಳ್ಳಿ ಗ್ರಾಮ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಜುಂಜಪ್ಪ ಸರ್ಕಲ್, ಲೇಕ್ ವ್ಯೂ, ಕಾವೇರಿ ಲೇಔಟ್, ಬೋನ್ವಿಲ್ ಏರಿಯಾ ಚಿಕ್ಕಸಂದ್ರ ಐರ್ ಲೇಔಟ್, ಸಪ್ತಗಿರಿ ಕಾಲೇಜು, ಜಗದೇಸ್ ಲೇಔಟ್, ನಾಗದೇಸ್ ಲೇಔಟ್, 8ನೇ ಮೈಲ್, ತುಮಕೂರು ಮುಖ್ಯ ರಸ್ತೆ, ಗಣೇಶ ಸಾ ಮಿಲ್, ಮಹೇಶ್ವರಿ ನಗರ, ಈಗಲ್ ಬೇಕರಿ ಸುತ್ತಮುತ್ತಲಿನ ಹತ್ತಿರ, ಕೆಂಪೇಗೌಡ ನಗರ, ಕೆಕೆ ರಸ್ತೆ, ಟಿ-ದಾಸರಹಳ್ಳಿ ಮೆಟ್ರೋ ಹಿಂಭಾಗ, ಪೈಪ್ಲೈನ್ ರಸ್ತೆ, ಬೃಂದಾವನ ಲೇಔಟ್, ಕಲ್ಯಾಣನಗರ ಬಾಗಲಗುಂಟೆ, ಕಿರ್ಲೋಸ್ಕರ್ ಲೇಔಟ್, ಎನ್ಎಂಎಚ್ ಲೇಔಟ್, ಸೌದರ್ಯ ಲೇಔಟ್, ಮೀನಾಕ್ಷಿ ಲೇಔಟ್, ಸಿದ್ದೇಶ್ವರ ಲೇಔಟ್, ಸಹ್ಯಾದ್ರಿ ಬಳಗ, ಎಜಿಬಿಜಿ ಲೇಔಟ್, ಸಪ್ತಗಿರಿ ವೈದ್ಯಕೀಯ ಕಾಲೇಜು, ಹೆಸರಘಟ್ಟ ಮುಖ್ಯರಸ್ತೆ, ಚಿಕ್ಕಬಾಣಾವರ, ಸೋಮಶೆಟ್ಟಿಹಳ್ಳಿ, ಕೆರೆಗುಡ್ಡದಹಳ್ಳಿ, ಮೇದರಹಳ್ಳಿ, ಗುಣಿಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶ.
66/11 ಕೆ.ವಿ ಐ.ಐ.ಎಸ್.ಸಿ. ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ನ.20ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನ.20ರಿಂದ ಮೂರು ದಿನ ಬೆಂಗಳೂರಿನಲ್ಲಿ ಚರಕದ ಕೈಮಗ್ಗ–ಕರಕುಶಲ ಉತ್ಪನ್ನಗಳ ಪ್ರದರ್ಶನ
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್ಇಎಲ್, ಐಐಎಸ್ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್ಲೈನ್ ರಸ್ತೆ, ಎಲ್ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.