ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Power Cut: ನ.29ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

BESCOM: 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4, ಎನ್-5, ಎನ್-7 ಉಪ ವಿಭಾಗದ ಹಲವೆಡೆ ನ.29 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.27: 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4, ಎನ್-5, ಎನ್-7 ಉಪ ವಿಭಾಗದ ಹಲವೆಡೆ ನ.29ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶವಂತಪುರ , ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ. ಪಾಳ್ಯ, ಇಸ್ರೋ, ನಾರಾಯಣಪುರ, ಎನ್‌.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿ ನಗರ, ಆಕಾಶ್ ಥಿಯೇಟರ್ ರಸ್ತೆ, ವಿಜ್ಞಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ, ಪೀಣ್ಯ 4ನೇ ಹಂತ, 4ನೇ ಮುಖ್ಯ, 8ನೇ ಅಡ್ಡ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.