ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ಬೆಂಗಳೂರಿನ ಹಲವೆಡೆ ಡಿ.6ರಂದು ವಿದ್ಯುತ್‌ ವ್ಯತ್ಯಯ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ 66/11ಕೆವಿ ಕಾಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿ.6ರಂದು ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಡಿ.4: ಕೆಪಿಟಿಸಿಎಲ್ ವತಿಯಿಂದ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ 66/11ಕೆವಿ ಕಾಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿ.6ರಂದು ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು

ಬೆಳತೂರು, ಅಯ್ಯಪ್ಪ ದೇವಸ್ಥಾನ, ಕುಂಬೇನ ಅಗ್ರಹಾರ, ಪಟಾಲಮ್ಮ ಲೇಔಟ್, ವಿ.ಎಸ್.ಆರ್ ಲೇಔಟ್, ಕಾಡುಗೋಡಿ, ಚನ್ನಸಂದ್ರ, ಎಫ್‌ಸಿಐ ಗೋದಾಮು, ಸಫಲ್, ಶಂಕರಪುರ, ಸಿದ್ಧಾರ್ಥ ಲೇಔಟ್, ಸಾಯಿ ಆಶ್ರಮ, ಎಚ್‌ಡಿಎಫ್‌ಡಿ ಬ್ಯಾಂಕ್, ಅಲೆಂಬಿಕ್ ಅಪಾರ್ಟ್ಮೆಂಟ್, ಮಾರ್ವೆಲ್ ಅಪಾರ್ಟ್ಮೆಂಟ್, ಇಮ್ಮಡಿಹಳ್ಳಿ, ಕೈತೋಟ, ದಿನ್ನೂರು, ಜಿ.ಕೆ ಲೇಔಟ್, ದಿನ್ನೂರು ಪೊಲೀಸ್ ಸ್ಟೇಷನ್, ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮೇನ್ ರೋಡ್, ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರಪಾಳ್ಯ, ಪ್ರಶಾಂತ್ ಲೇಔಟ್, ಉಪ್ಕರ್ ಲೇಔಟ್, ಪೃಥ್ವಿ ಲೇಔಟ್, ಸ್ವಾಮಿ ವಿವೇಕಾನಂದ ರಸ್ತೆ, ವೈಟ್‌ಫೀಲ್ಡ್ ಮೇನ್ ರೋಡ್, ಇಸಿಸಿ ರಸ್ತೆ, ನಾಯ್ಡು ಲೇಔಟ್, ಇನ್ನರ್ ಸರ್ಕಲ್, ಕರುಮಾರಿಯಪ್ಪ ದೇವಸ್ಥಾನ ರಸ್ತೆ, ಭುವನೇಶ್ವರಿ ರಸ್ತೆ, ಭೈರಪ್ಪ ಲೇಔಟ್, ವಿನಾಯಕ ಲೇಔಟ್, ರುಸ್ತುಂಜಿ ಲೇಔಟ್, ಪ್ರೆಸ್ಟೀಜ್ ಮೇಬೆರ್ರಿ ಅಪಾರ್ಟ್ಮೆಂಟ್, ಆದರ್ಶ ಫಾರ್ಮ್ ಮೆಡೋಸ್, ಬೋರ್‌ವೆಲ್ ರಸ್ತೆ, ಔಟರ್ ಸರ್ಕಲ್, ವಿನಾಯಕನಗರ, ಬ್ರಿಗೇಡ್ ಕಾಸ್ಮೋಪೊಲೆಸ್ ಅಪಾರ್ಟ್ಮೆಂಟ್, ಗೋಯಲ್ ಹರಿಯಾಣಾ ಅಪಾರ್ಟ್ಮೆಂಟ್, ವಿಜಯನಗರ, ಗಾಂಧೀಪುರ, ಇಮ್ಮಡಿಹಳ್ಳಿ ಮೇನ್ ರೋಡ್, ದೊಬರಪಾಳ್ಯ, ಸುಮಧುರಾ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗನವಾಡಿ, ಅಕ್ಷರ ದಾಸೋಹ, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಮ್ಮತಿ

ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ಬೆಂಗಳೂರು: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್‌ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.

ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್‌ ಆ್ಯಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.

ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳ ವಿವರ

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.

ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021

ಹೈಪರ್ ಸ್ಪೋರ್ಟ್ಸ್ ಆ್ಯಂಡ್ ವೆಲ್ಫೇರ್ ಟ್ರಸ್ಟ್‌ನಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್

ವಿದ್ಯುತ್ ಸಮಸ್ಯೆಗಳ ಕುರಿತು ರೈತರು ಹಾಗೂ ಸಾರ್ವಜನಿಕರು ದೂರುಗಳನ್ನು ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಗಾಗಲಿ ಅಥವಾ ಸಂದೇಶಗಳನ್ನು ತಮ್ಮ ಪ್ರದೇಶಕ್ಕೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಂಖ್ಯೆಗಳಿಗಾಗಲಿ ಕಳುಹಿಸಿದ ಕೂಡಲೇ, 1912 ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಅಥವಾ ಸಂದೇಶಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.