ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನ.23ರಂದು ಕರೆಂಟ್‌ ಇರಲ್ಲ

BESCOM News: ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಯಲಹಂಕಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.23ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4.30 ಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ನ.23ರಂದು ಕರೆಂಟ್‌ ಇರಲ್ಲ

ಬೆಂಗಳೂರಿನಲ್ಲಿ ಪವರ್‌ ಕಟ್‌ (ಸಾಂದರ್ಭಿಕ ಚಿತ್ರ) -

Profile
Siddalinga Swamy Nov 21, 2025 4:28 PM

ಬೆಂಗಳೂರು, ನ.21: ಕೆಪಿಟಿಸಿಎಲ್‌ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಯಲಹಂಕಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.23ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4.30 ಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ. ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407, 'ಬಿ' ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದ ನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ ಇತ್ಯಾದಿ. ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಪಾಲನಹಳ್ಳಿ, ದ್ವಾರಕ ನಗರ ಇತ್ಯಾದಿ. ಪೂರ್ವಂಕರ RMZ ಗ್ಯಾಲೇರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

66/11 ಕೆವಿ ಅಬ್ಬಿಗೆರೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.23ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು

ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಏರಿಯ, ಸಿಂಗಾಪುರ, ಅಬ್ಬಿಗೆರೆ, ಪೈಪ್ ಲೈನ್ ರೋಡ್, ನಿಸರ್ಗ ಬಡಾವಣೆ, ಕೆಂಪೆಗೌಡ ಬಡಾವಣೆ, ಕಲಾನಗರ ಮುಖ್ಯ ರಸ್ತೆ, ಕಮ್ಮಗೊಂಡನಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆ, ಎಚ್.ವಿ.ವಿ. ಬಡಾವಣೆ, ಕುವೆಂಪು ನಗರ, ಕಾಶಿರಾಮ ನಗರ, ವಡೇರಹಳ್ಳಿ, ಸಿಂಹಾದ್ರಿ ಬಡಾವಣೆ, ಪ್ರಕೃತಿ ಬಡಾವಣೆ, ಮುನಿಸ್ವಮಪ್ಪ ಬಡಾವಣೆ, ಲಕ್ಕಪ್ಪ ಬಡಾವಣೆ, ಬಾಲಾಜಿ ಬಡಾವಣೆ, ವರದರಾಜಸ್ವಾಮಿ ಬಡಾವಣೆ, ಬ್ರಿಗೆಡ್ ಪಾರ್ಕ್ ಸೈಡ್ ಉತ್ತರ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶ.

220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.23ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Bescom Helpline: ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು

ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತಲಿನ ಪ್ರದೇಶ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿ ದೇವಿ ನಗರ. ಲಗ್ಗೆರೆ ಹಳೆಯ ಗ್ರಾಮ, ಲವ ಕುಶ ನಗರ, ರಾಘವೇಂದ್ರ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತದ ಪಿಐಎ 7ನೇ ಕ್ರಾಸ್, 1ನೇ ಹಂತದ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆಯ ಹತ್ತಿರ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಎಂಇಐ ಮತ್ತು ಯಶವಂತಪು ಕೈಗಾರಿಕಾ ಪ್ರದೇಶ, ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್ಮೆಂಟ್, ಸಿಎಂಟಿಐ, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯರಸ್ತೆ, ಯುಕೋ ಬ್ಯಾಂಕ್ ರಸ್ತೆ, 7ನೇ ಮುಖ್ಯರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.