ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ.
ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.