ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Madapattana Quarry Tragedy: ಮಾದಪಟ್ಟಣ ಕಲ್ಲು ಕ್ವಾರಿ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ; ಸ್ಫೋಟದಿಂದ ಅವಘಡ ಸಂಭವಿಸಿಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್‌

Bengaluru Tragedy: ಬೆಂಗಳೂರು ಹೊರವಲಯದ ತಾವರೆಕೆರೆ ಸಮೀಪದ ಮಾಗಡಿ ರಸ್ತೆಯ ಮಾದಪಟ್ಟಣ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿಸು ಸಂಭವಿಸಿದ ಭೀಕರ ದುರಂತದಲ್ಲಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಗುರುವಾರ (ಜುಲೈ 2) ಬೆಳಗ್ಗೆ ಏಕಾಏಕಿ ಬಂಡೆ ಕುಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು ರಾಮು (46), ರಾಜಪಾಲ್​​ ಸಿಂಗ್​ (35), ಸತ್ಯನಾರಾಯಣ ಸಿಂಗ್​ (31), ರಾಮ ವತಾರ್​ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್​ ಸಿಂಗ್​​ ಮತ್ತು ಭುವನೇಶ್ವರ ಸಿಂಗ್​ ಎಂದು ಗುರುತಿಸಲಾಗಿದೆ.

ಮಾದಪಟ್ಟಣ ಕಲ್ಲು ಕ್ವಾರಿ ದುರಂತ; ಮೃತರ ಗುರುತು ಪತ್ತೆ

ದುರಂತ ನಡೆದ ಮಾದಪಟ್ಟಣ ಕಲ್ಲು ಕ್ವಾರಿ -

Ramesh Ballamoole
Ramesh Ballamoole Jul 2, 2026 1:41 PM

ಬೆಂಗಳೂರು, ಜು. 2: ರಾಜಧಾನಿಯ ಹೊರವಲಯದ ತಾವರೆಕೆರೆ ಸಮೀಪದ ಮಾಗಡಿ ರಸ್ತೆಯ ಮಾದಪಟ್ಟಣ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿಸು ಸಂಭವಿಸಿದ ಭೀಕರ ದುರಂತದಲ್ಲಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಗುರುವಾರ (ಜುಲೈ 2) ಬೆಳಗ್ಗೆ ಏಕಾಏಕಿ ಬಂಡೆ ಕುಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಸ್ಫೋಟದಿಂದ ಈ ಅವಘಡ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದೀಗ ಮೃತರ ಗುರುತು ಪತ್ತೆಯಾಗಿದೆ. ಒಟ್ಟು 20 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಪೈಕಿ ಆರು ಜನ ಮಧ್ಯ ಪ್ರದೇಶ ಮೂಲದವರಾಗಿದ್ದರೆ, ಮತ್ತೋರ್ವ ಕಾರ್ಮಿಕ ಯಾದಗಿರಿ ಜಿಲ್ಲೆಯವರು.

ಮೃತರನ್ನು ರಾಮು (46), ರಾಜಪಾಲ್​​ ಸಿಂಗ್​ (35), ಸತ್ಯನಾರಾಯಣ ಸಿಂಗ್​ (31), ರಾಮ ವತಾರ್​ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್​ ಸಿಂಗ್​​ ಮತ್ತು ಭುವನೇಶ್ವರ ಸಿಂಗ್​ ಎಂದು ಗುರುತಿಸಲಾಗಿದೆ. ಇನ್ನು ಉತ್ತರ ಭಾರತದ ನಾಲ್ವರು, ಕರ್ನಾಟಕದ ಓರ್ವ ಕಾರ್ಮಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಮೈಸೂರು ರಸ್ತೆಯಲ್ಲಿರುವ ಆರ್.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಡಿಕೆಶಿ ಪ್ರತಿಕ್ರಿಯೆ:



ದೇಹ ಛಿದ್ರ ಛಿದ್ರ

ಸುಮಾರು 100 ಅಡಿ ಎತ್ತರದಿಂದ ಬಂಡೆ ಕೆಳಗುರುಳಿದ್ದು, ಕಾರ್ಮಿಕರ ಮೃತದೇಹ ಛಿದ್ರ ಛಿದ್ರವಾಗಿದೆ. 3 ಟ್ರ್ಯಾಕ್ಟರ್‌ಗಳು ಸಂಪೂರ್ಣ ಜಖಂಗೊಂಡಿವೆ. ಕೇಂದ್ರ ವಲಯ ಐಜಿಪಿ ಎಸ್.ಗಿರೀಶ್ ಘಟನೆ ಬಗ್ಗೆ ಮಾತನಾಡಿ, ʼʼತಾವರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 2 ಕ್ವಾರಿಯಲ್ಲಿ ಕೆಲಸ ನಡೆಯುತ್ತಿತ್ತು. ಕೆಳಗಡೆ ಇದ್ದ ಕ್ವಾರಿಯಲ್ಲಿ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬಂಡೆ ಬಿದ್ದು 7 ಮಂದಿ ಮೃತಪಟ್ಟಿದ್ದಾರೆ. ಎಫ್​ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ'' ಎಂದು ಹೇಳಿದ್ದಾರೆ. ಬಂಡೆ ಬಿರುಕು ಬಿಟ್ಟಿರುವ ಬಗ್ಗೆ ಕಾರ್ಮಿಕರು ಮೊದಲೇ ಎಚ್ಚರಿಸಿದ್ದರು ಎನ್ನಲಾಗಿದೆ.

ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು 7 ಮಂದಿ ಸಾವು; ಬೆಂಗಳೂರಿನ ಮಾದಪಟ್ಟಣದಲ್ಲಿ ದುರಂತ

ಸಿಎಂ, ಡಿಸಿಎಂ ಪ್ರತಿಕ್ರಿಯೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. "ಮಾಗಡಿ ರಸ್ತೆಯ ಕಲ್ಲುಕ್ವಾರಿಯಲ್ಲಿ ದುರಂತ ನಡೆದು 7 ಜನ ಮೃತಪಟ್ಟಿರುವ ಮಾಹಿತಿ ಬಂದಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಸ್ಫೋಟ ಅಲ್ಲ, ಬಂಡೆ ಕುಸಿದು ಆಗಿರುವ ದುರಂತ ಎಂದು ತಿಳಿದುಬಂದಿದೆ. ಈ ಕ್ವಾರಿ ಅಕ್ರಮವೇ ಎಂಬುದರ ವರದಿಯನ್ನು ತರಿಸಿಕೊಳ್ಳಲಿದ್ದೇನೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದುʼʼ ಎಂದಿದ್ದಾರೆ.

ʼʼದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕುತ್ತೇನೆ. ರಾಜ್ಯಾದ್ಯಂತ ಹಲವು ಅಕ್ರಮ ಕ್ವಾರೆಗಳು ಕಾರ್ಯಾಚರಿಸುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿದೆ. ಈ ಬಗ್ಗೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆʼʼ ಎಂದು ಡಾ.ಜಿ. ಪರಮಮೇಶ್ವರ್‌ ತಿಳಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.