ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chennamma Deve gowda: ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ?: ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ ಮಣಿಪಾಲ್‌ ಆಸ್ಪತ್ರೆ

ಉಸಿರಾಟ ಸಮಸ್ಯೆ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಚೆನ್ನಮ್ಮ ಅವರು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ನಿಗಾದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದೆ.

ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್‌ ಆಸ್ಪತ್ರೆ ವೈದ್ಯರ ಮಾಹಿತಿ

-

Prabhakara R
Prabhakara R Jul 17, 2026 9:39 PM

ಬೆಂಗಳೂರು: ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve gowda) ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್‌ ಆಸ್ಪತ್ರೆಯಿಂದ (Manipal Hospital) ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಲಾಗಿದೆ.

ಉಸಿರಾಟ ಸಮಸ್ಯೆ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಚೆನ್ನಮ್ಮ ಅವರು ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರ ನಿಗಾದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿರುವ ಮಣಿಪಾಲ್‌ ಆಸ್ಪತರೆ ವೈದ್ಯರು, ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಚೆನ್ನಮ್ಮ ಅವರು ಆಸ್ಪತ್ರೆ ದಾಖಲಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪುತ್ರರಾದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ, ಸೊಸೆ ಅನಿತಾ ಕುಮಾರಸ್ವಾಮಿ, ಮೊಮ್ಮಗ ನಿಖಿಲ್‌ ಕುಮಾರಸ್ವಾಮಿ ಸೇರಿ ಕುಟುಂಬದ ಇತರ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿದ್ದಾರೆ.

ಪತ್ನಿಯ ಆರೋಗ್ಯ ವಿಚಾರಿಸಿದ ದೇವೇಗೌಡ

ಇನ್ನು ದೇವೇಗೌಡ ಅವರು ಕೂಡ ಆಸ್ಪತ್ರೆಗೆ ಆಗಮಿಸಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಚೆನ್ನಮ್ಮನಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ, ಉಸಿರಾಟ ಸಮಸ್ಯೆ ಬಿಟ್ಟು ಬೇರೆ ಯಾವ ಸಮಸ್ಯೆ ಇಲ್ಲ. ನನಗೆ ಡಯಾಲಿಸಿಸ್‌ ಮಾಡಿದ್ದಾರೆ, ಮನೆಗೆ ಹೋಗಬೇಕು ಎಂದು ಹೇಳಿ ನಿರ್ಗಮಿಸಿದರು.

ಎಚ್‌ಡಿಕೆ ಭಾವುಕ ಮಾತು

25 ವರ್ಷದ ಹಿಂದೆ ನಮ್ಮ ತಾಯಿ ಮೇಲೆ ಆಸಿಡ್‌ ದಾಳಿ ನಡೆದಿತ್ತು. ಆಗ ಬದುಕಲ್ಲ ಎಂದು ಹೇಳಿದ್ದರು. ಆದರೆ ದೇವರ ದಯಯಿಂದ ಚೇರಿಸಿಕೊಂಡಿದ್ದರು. ಈಗಲೂ ಯಾವುದೇ ಸಮಸ್ಯೆ ಇಲ್ಲದೆ ಗುಣಮುಖರಾಗಿ ಬರ್ತಾರೆಂಬ ನಂಬಿಕೆ ಇದೆ ಎಂದು ಕುಮಾರಸ್ವಾಮಿ ಭಾವುಕರಾಗಿದ್ದಾರೆ.

ತಾಯಿಯವರ ಪರಿಸ್ಥಿತಿ ಗಂಭೀರವಾಗಿದ್ದು, ವೈದ್ಯರು ಕೈಮೀರಿ ಪ್ರಯತ್ನ ಮಾಡಿದ್ದಾರೆ. ಈಗ ದೇವರೇ ಅವರನ್ನು ಕಾಪಾಡಬೇಕು ಎಂದು ತಿಳಿಸಿದ್ದಾರೆ.